ಮದುವೆಯಾದ ಕೇವಲ 15 ದಿನಕ್ಕೆ ತಿರುಪತಿ ತಿಮ್ಮಪ್ಪನ ಸಾನಿಧ್ಯದಲ್ಲಿ ಪ್ರಾಣಬಿಟ್ಟ ಮದುಮಗ
ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ, ಯುವಕ ತಿಂಗಳ ಹಿಂದೆಯಷ್ಟೇ ಮದುವೆಗಾಗಿ ರಜೆ ತೆಗೆದು ಊರಿಗೆ ತೆರಳಿದ್ದಾನೆ. ಇದೀಗ ಮದುವೆಯಾಗಿ ಕೇವಲ 2ವಾರ ಆಗಿದಷ್ಟೇ, ನವದಂಪತಿ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಭೇಟಿ ನೀಡಿದ್ದು ಈ ವೇಳೆ ದೇವಸ್ಥಾನದ ಮೆಟ್ಟಿಲು ಹತ್ತುತ್ತಿದ್ದಂತೆ ಮದುಮಗ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.
ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ. ಇದೀಗ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಎಲ್ಲೆಡೆ ಸುದ್ದಿಯಾಗಿದೆ. ಮದುವೆಯಾಗಿ ಕೇವಲ 2ವಾರ ಆಗಿದ್ದು, ನವದಂಪತಿ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ದೇವಸ್ಥಾನದ ಮೆಟ್ಟಿಲು ಹತ್ತುತ್ತಿದ್ದಂತೆ ಮದುಮಗ ಏಕಾಏಕಿ ಕುಸಿದು ಬಿದ್ದಿದ್ದಾನೆ. ಕೂಡಲೇ ಎಚ್ಚೆತ್ತ ಕುಟುಂಬಸ್ಥರು ಸಮೀಪದ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಅಲ್ಲಿಗೆ ಆಗಮಿಸಿದ ಸಿಬ್ಬಂದಿ ಯುವಕ ನನ್ನು ಆಂಬ್ಯುಲೆನ್ಸ್ ಮೂಲಕ ತಿರುಪತಿಯ ಸ್ವಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಅದಾಗಲೇ ಯುವಕ ಹೃದಯ ಸ್ಥಂಭನದಿಂದ ಪ್ರಾಣ ಕಳೆದುಕೊಂಡಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.
ಮೃತ ಯುವಕ ನವೀನ್ ಎಂದು ಗುರುತಿಸಲಾಗಿದ್ದು, ಈತ ತಿರುವಳ್ಳೂರು ಜಿಲ್ಲೆಯ ತಿರುತ್ತಣಿಯ ನಿವಾಸಿ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ, ಈತ ತಿಂಗಳ ಹಿಂದೆಯಷ್ಟೇ ಮದುವೆಗಾಗಿ ರಜೆ ತೆಗೆದು ಊರಿಗೆ ಬಂದಿದ್ದಾನೆ.
ಇದನ್ನೂ ಓದಿ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಮದುವೆಯ ಬಳಿಕ ಹರಕೆ ನೆರವೇರಿಸಲು ತಿರುಪತಿಗೆ ಬಂದಿದ್ದು, ಏಕಾಏಕಿ ಕುಸಿದುಬಿದ್ದು ತಿಮ್ಮಪ್ಪನ ಸಾನಿಧ್ಯದಲ್ಲಿ ಪ್ರಾಣಬಿಟ್ಟಿದ್ದಾನೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮದುವೆಯಾದ 15 ದಿನದಲ್ಲಿ ಯುವಕನೊಬ್ಬ ಸಾವನ್ನಪ್ಪಿರುವುದು ಭಾರೀ ಆಘಾತವನ್ನುಂಟು ಮಾಡಿದೆ.
ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ