AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ನಿಧನ? ವೈರಲ್‌ ಆಗ್ತಿದೆ ಸಾವಿನ ವದಂತಿ

ಹಲವಾರು ವಿವಾದಗಳಲ್ಲಿ ಸಿಲುಕಿ ದೇಶ ಬಿಟ್ಟು ಪಲಾಯನ ಮಾಡಿದ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿಯ ಸಾವಿನ ಸುದ್ದಿ ಕೇಳಿ ಬರುತ್ತಿದೆ. ನಿತ್ಯಾನಂದ ಸ್ವಾಮಿ ಮೃತಪಟ್ಟಿದ್ದಾರೆ ಎಂದು ಆತನ ಸೋದರಳಿಯ ಮಾಹಿತಿ ನೀಡಿದ್ದಾನೆ ಎಂದು ವರದಿಯಾಗಿವೆ. ಈ ಕುರಿತ ವಿಡಿಯೋವೊಂದು ಇದೀಗ ಭಾರಿ ವೈರಲ್‌ ಆಗುತ್ತಿದ್ದು, ಇದು ಏಪ್ರಿಲ್‌ ಫೂಲ್‌ ಆಗಿರಬಹುದೇ, ಅಥವಾ ವಿವಾದಾತ್ಮಕ ಸ್ವಾಮಿಜೀ ನಿಜವಾಯಿಗೂ ಮೃತಪಟ್ಟಿದ್ದಾನೆಯೇ ಎಂಬ ಚರ್ಚೆ ಜೋರಾಗಿದೆ.

Viral: ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ನಿಧನ? ವೈರಲ್‌ ಆಗ್ತಿದೆ ಸಾವಿನ ವದಂತಿ
ನಿತ್ಯಾನಂದ
ಮಾಲಾಶ್ರೀ ಅಂಚನ್​
| Edited By: |

Updated on: Apr 01, 2025 | 4:52 PM

Share

ಅತ್ಯಾಚಾರ ಆರೋಪ ಹಾಗೂ ಹಲವಾರು ವಿವಾದಗಳಲ್ಲಿ ಸಿಲುಕಿ ದೇಶ ಬಿಟ್ಟು ಪಲಾಯನ ಮಾಡಿ ಕೈಲಾಸ (Kailasa) ಎಂಬ ದೇಶವನ್ನು (country) ನಿರ್ಮಾಣ ಮಾಡಿ ಅಲ್ಲಿ ತನ್ನ ಶಿಷ್ಯರೊಂದಿಗೆ ವಾಸವಾಗಿರುವ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿಯ (Nityananda Swamy) ಬಗ್ಗೆ ಗೊತ್ತೇಯಿದೆ ಅಲ್ವಾ. ಇದೀಗ ಈ ವಿವಾದಿತ ಸ್ವಾಮಿ ಮೃತಪಟ್ಟಿದ್ದಾನೆ (Death) ಎಂಬ ಸುದ್ದಿಯೊಂದು ಕೇಳಿ ಬರುತ್ತಿದೆ. ನಿತ್ಯಾನಂದರು ಎರಡು ದಿನಗಳ ಹಿಂದೆ ನಿಧನರಾದರು ಎಂಬ ಸುದ್ದಿಯನ್ನು ಆತನ ಸೋದರಳಿಯ ಸುಂದರೇಶ್ವರನ್‌ ಹೇಳಿಕೊಂಡಿದ್ದು, ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ. ಈ ಸಾವಿನ ಸುದ್ದಿಯ ಬಗ್ಗೆ ಇನ್ನೂ ಸ್ಪಷ್ಟತೆ ಲಭ್ಯವಾಗದ ಕಾರಣ ಜನ ಇದೆಲ್ಲಾ ಏಪ್ರಿಲ್‌ ಫೂಲ್‌ (April Fool) ದಿನದ ಸಲುವಾಗಿ ಮಾಡಿದ ಪ್ರಚಾರದ ಗಿಮಿಕ್‌ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.

ನಿತ್ಯಾನಂದ ಸ್ವಾಮಿಯ ಸೋದರಳಿಯ ಸ್ವತಃ ತಾನೇ ಸಾವಿನ ಸುದ್ದಿಯ ಬಗ್ಗೆ ಘೋಷಿಸಿದ್ದು, ಸಾವಿನ ವದಂತಿಗೆ ಸಂಬಂಧಿಸಿದ ವಿಡಿಯೋ ತುಣುಕುಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ. ನಿತ್ಯಾನಂದ ಸ್ವಾಮಿಯ ಸೋದರಳಿಯ ಸುಂದರೇಶ್ವರನ್ ತನ್ನ ಆಧ್ಯಾತ್ಮಿಕ ಪ್ರವಚನದ ವೀಡಿಯೊದಲ್ಲಿ ಹಿಂದೂ ಧರ್ಮವನ್ನು ರಕ್ಷಿಸಲು ನಿತ್ಯಾನಂದ ತನ್ನ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಎಂದು ಹೇಳಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ
Image
ಭಾರತದ ಮೊದಲ ಕಾಫಿ ತೋಟ ತಾಣದ ಕಥೆಯನ್ನು ಹಂಚಿಕೊಂಡ ಆನಂದ್‌ ಮಹೀಂದ್ರಾ
Image
ಕಾಲೇಜು ಪ್ರೊಫೆಸರ್‌ ಎನರ್ಜಿಗೆ ಫಿದಾ ಆದ ವಿದ್ಯಾರ್ಥಿಗಳು
Image
ಬೆಂಗಳೂರಿನಲ್ಲಿ ಆಟೋ ಬುಕ್ ಮಾಡುವ ಟಿಪ್ಸ್ ನೀಡಬೇಕು
Image
ಒಂದೇ ಮಂಟಪದಲ್ಲಿ, ಒಂದೇ ಸಮಯದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

ವಿವಾದಿತ ಸ್ವಾಮಿ ಸಾವಿನ್ನಪ್ಪಿದ್ದಾನೆಯೋ ಎಂಬುದರ ಬಗ್ಗೆ ಇನ್ನೂ ಸ್ಪಷ್ಟನೆ ದೊರೆತಿಲ್ಲ. ಆದರೆ ಇಂದು ಏಪ್ರಿಲ್‌ 1 ತಾರೀಕು ಆಗಿರುವುದರಿಂದ ಉದ್ದೇಶಪೂರ್ವಕವಾಗಿ ಸಾವಿನ ಬಗ್ಗೆ ಸುಳ್ಳು ಸುದ್ದಿಯನ್ನು ಹಬ್ಬಿಸಲಾಗಿದೆ ಎಂದು ಹಲವರು ಮಾತನಾಡಿಕೊಳ್ಳುತ್ತಿದ್ದಾರೆ. ಜೊತೆಗೆ ಆತನ ಟ್ರಸ್ಟ್‌ಗೆ ಸೇರಿದ ₹4000 ಕೋಟಿ ಮೌಲ್ಯದ ಆಸ್ತಿಗಳನ್ನು ಯಾರು ನಿರ್ವಹಿಸುತ್ತಾರೆ ಎಂಬ ಬಗ್ಗೆ ದೊಡ್ಡ ಪ್ರಶ್ನೆ ಕೂಡಾ ಉದ್ಭವಿಸಿದೆ. ಹೀಗೆ ನಿತ್ಯಾನಂದ ಸ್ವಾಮಿಯ ಸಾವಿನ ವದಂತಿ ಮಿಶ್ರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದ್ದು, ಈ ವದಂತಿಯ ಸತ್ಯಾಸತ್ಯತೆ ತಿಳಿಯಲು ಜನ ಕಾತರದಿಂದ ಕಾಯುತ್ತಿದ್ದಾರೆ.

ಈ ಕುರಿತ ವಿಡಿಯೋವನ್ನು Polimer News ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋ ತುಣುಕಿನಲ್ಲಿ ನಿತ್ಯಾನಂದ ಸ್ವಾಮಿಯ ಸೋದರಳಿಯ ಸುಂದರೇಶ್ವರನ್ ತನ್ನ ಆಧ್ಯಾತ್ಮಿಕ ಪ್ರವಚನದ ಸಂದರ್ಭದಲ್ಲಿ ಹಿಂದೂ ಧರ್ಮವನ್ನು ರಕ್ಷಿಸಲು ಸ್ವಾಮಿ ತನ್ನ ಪ್ರಾಣವನ್ನು ತ್ಯಾಗ ಮಾಡಿದ್ದಾರೆ ಎಂದು ಹೇಳುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಮಲಗಿದ್ದ ಶ್ವಾನ ಹನುಮಾನ್ ಚಾಲೀಸಾ ಕೇಳಿದ ತಕ್ಷಣ ಮಾಡಿದ್ದೇನು ನೋಡಿ!

ಏಪ್ರಿಲ್‌ 1 ರಂದು ಶೇರ್‌ ಮಾಡಲಾದ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇಂದು ಏಪ್ರಿಲ್‌ ಫೂಲ್‌, ಅವರು ನಮ್ಮನ್ನು ಫೂಲ್‌ ಮಾಡ್ತಿರಬಹುದುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇದು ನಿಜ ಸುದ್ದಿಯೇʼ ಎಂದು ಕೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ