AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೀಲ್ಸ್‌ ಗಾಗಿ ಚಲಿಸುವ ಕಾರಿನಲ್ಲಿ ಸ್ಟಂಟ್‌ ಮಾಡಿದ ಯುವಕರು, ಈ ಹುಚ್ಚಾಟಕ್ಕೆ ಬಿತ್ತು 33 ಸಾವಿರ ದಂಡ

ಸೋಶಿಯಲ್ ಮೀಡಿಯಾದಲ್ಲಿ ಬಹುತೇಕ ವಿಡಿಯೋಗಳು ನೈಟ್ಟಿಗರನ್ನು ಬೆಚ್ಚಿ ಬೀಳಿಸುವಂತಿರುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗುವ ಸಲುವಾಗಿ ಅಪಾಯಕಾರಿ ಸ್ಟಂಟ್ ವಿಡಿಯೋಗಳನ್ನು ಮಾಡುತ್ತಿರುತ್ತಾರೆ. ಇದೀಗ ಮೂವರು ವ್ಯಕ್ತಿಗಳು ರೀಲ್ಸ್‌ಗಾಗಿ ಚಲಿಸುವ ಕಾರಿನಲ್ಲಿ ಅಪಾಯಕಾರಿ ಸ್ಟಂಟ್‌ ಮಾಡಿದ್ದಾರೆ. ಇದರ ಪರಿಣಾಮವಾಗಿ 33 ಸಾವಿರ ರೂ. ದಂಡ ವಿಧಿಸಿಕೊಂಡಿರುವ ಘಟನೆಯೂ ನೋಯ್ಡಾದಲ್ಲಿ ನಡೆದಿದೆ.

ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jan 06, 2025 | 11:00 AM

Share

ಪ್ರತಿಯೊಬ್ಬರು ಸಂಚಾರಿ ನಿಯಮಗಳನ್ನು ಪಾಲಿಸಲೇಬೇಕು. ಆದರೆ ಈಗಿನ ಕಾಲದಲ್ಲಿ ಈ ನಿಯಮವನ್ನು ಬ್ರೇಕ್ ಮಾಡುವವರೇ ಹೆಚ್ಚು. ಕೆಲವರು ಬಿಸಿ ರಕ್ತದ ಯುವಕರು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ರಸ್ತೆ ಮಧ್ಯೆ ಅಪಾಯಕಾರಿ ಬೈಕ್‌ ಸ್ಟಂಟ್‌ ಮಾಡುತ್ತಾ ಹುಚ್ಚಾಟಗಳನ್ನು ಮೆರೆಯುವ ವಿಡಿಯೋಗಳು ಆಗಾಗ ವೈರಲ್ ಆಗುತ್ತಿರುತ್ತದೆ. ಇದೀಗ ಮೂವರು ವ್ಯಕ್ತಿಗಳು ರೀಲ್ಸ್‌ಗಾಗಿ ಚಲಿಸುವ ಕಾರಿನಲ್ಲಿ ಅಪಾಯಕಾರಿ ಸ್ಟಂಟ್‌ ಮಾಡಿದ್ದಾರೆ. ಇದರ ಪರಿಣಾಮವಾಗಿ 33 ಸಾವಿರ ರೂ. ದಂಡ ವಿಧಿಸಿಕೊಂಡಿರುವ ಘಟನೆಯೂ ನೋಯ್ಡಾದಲ್ಲಿ ನಡೆದಿದೆ.

ವೈರಲ್ ಆಗಿರುವ ಈ ವಿಡಿಯೋದಲ್ಲಿ ಮೂವರು ಯುವಕರು ವೆಬ್‌ ಸರಣಿ ಸ್ಕ್ವಿಡ್‌ ಗೇಮ್‌ ಸೀಸನ್‌ 2ನ “ರೌಂಡ್ ಅಂಡ್ ರೌಂಡ್” ಹಾಡಿಗೆ ರೀಲ್ಸ್‌ ಮಾಡಲು ಕಾರಿನಲ್ಲಿ ಅಪಾಯಕಾರಿ ಸ್ಟಂಟ್‌ ಮಾಡಿರುವುದನ್ನು ನೋಡಬಹುದು. ಹೌದು, ಫಾರ್ಚುನರ್ ಎಸ್‌ಯುವಿಯಲ್ಲಿ ಒಬ್ಬ ಯುವಕ ಬಾನೆಟ್‌ ಮೇಲೆ ಕುಳಿತಿದ್ದಾನೆ. ಇನ್ನು ಇಬ್ಬರೂ ಯುವಕರು ಅಕ್ಕ ಪಕ್ಕದ ಬಾಗಿಲುಗಳಲ್ಲಿ ನೇತಾಡುತ್ತಿದ್ದಾರೆ. ಕಾರು ಸುತ್ತು ಸುತ್ತು ತಿರುಗುವ ಮೂಲಕ ಅಪಾಯಕಾರಿ ಸ್ಟಂಟ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ: ಜ್ಞಾನವಾಪಿ ಪ್ರಕರಣ ವಿಚಾರಣೆ ವೇಳೆ ಕೋರ್ಟಿಗೆ ಪ್ರವೇಶಿಸಿದ ಕೋತಿ; ವಿಡಿಯೋ ವೈರಲ್‌

ಸಚಿನ್ ಗುಪ್ತ ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ನೋಯ್ಡಾ ಪೊಲೀಸರ ಗಮನಕ್ಕೆ ಬಂದಿದೆ. ಯುವಕರ ಈ ಹುಚ್ಚಾಟಕ್ಕೆ ಕ್ರಮ ಕೈಗೊಂಡಿರುವ ಟ್ರಾಫಿಕ್ ಪೋಲೀಸರು ಅಜಾಗರೂಕ ಚಾಲನೆ, ಟಿಂಟೆಡ್ ಗ್ಲಾಸ್ ಬಳಕೆ, ವಿಮೆ ಇಲ್ಲದೆ ವಾಹನ ಚಲಾಯಿಸಿರುವುದು ಹಾಗೂ ಸೀಟ್ ಬೆಲ್ಟ್ ಧರಿಸದೆ ಇರುವುದಕ್ಕೆ 33,000 ರೂ. ದಂಡ ವಿಧಿಸಿದ್ದಾರೆ. ಪೊಲೀಸರು ತಕ್ಷಣವೇ ಕ್ರಮಕೈಗೊಂಡದ್ದಕ್ಕೆ ನೆಟ್ಟಿಗರೊಬ್ಬರು, ಈ ರೀತಿ ಕ್ರಮ ಕೈಕೊಂಡರೇನೇ ಬುದ್ಧಿ ಕಲಿಯುವುದು ಎಂದು ಶ್ಲಾಘಿಸಿದ್ದಾರೆ. ಇನ್ನೊಬ್ಬ ಬಳಕೆದಾರರು, ಸಾರ್ವಜನಿಕ ರಸ್ತೆಗಳಲ್ಲಿ ಇಂತಹ ಅಪಾಯಕಾರಿ ನಡವಳಿಕೆಗೆ ಇದು ಹೆಚ್ಚು ಅಗತ್ಯವಿರುವ ಪ್ರತಿಕ್ರಿಯೆ ಎಂದಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ