Video: ಭಜನೆ ವೇಳೆ ಜವರಾಯನ ಎಂಟ್ರಿ, ಕುಸಿದು ಬಿದ್ದು ಸಾವನ್ನಪ್ಪಿದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್

| Updated By: ಅಕ್ಷಯ್​ ಪಲ್ಲಮಜಲು​​

Updated on: Jul 12, 2024 | 5:30 PM

ಸಾವು ಯಾವಾಗ ಹೇಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಇತ್ತೀಚಿಗಂತೂ ಹೃದಯಘಾತಕ್ಕೆ ತುತ್ತಾಗಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಒಬ್ಬರು ವೇದಿಕೆಯ ಮೇಲೆ ನಿಂತು ಭಜನೆ ಹಾಡುತ್ತಾ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ. ಈ ದೃಶ್ಯ ಇದೀಗ ಎಲ್ಲೆಡೆ ಹರಿದಾಡುತ್ತಿದೆ.

ಈ ಭೂಮಿ ಮೇಲೆ ಹುಟ್ಟಿದ ಪ್ರತಿಯೊಂದು ಜೀವಿಯೂ ಸಾಯಲೇ ಬೇಕು. ಆದರೆ ಈ ಸಾವು ಯಾವಾಗ, ಹೇಗೆ ಬರುತ್ತದೆ ಎಂದು ಹೇಳಲು ಯಾರಿಂದಲೂ ಸಾಧ್ಯವಿಲ್ಲ. ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ತೀರಾ ಹೆಚ್ಚಿದ್ದು, ಮಕ್ಕಳು, ಯುವಕರು, ವೃದ್ಧರು ಅನ್ನೋ ವ್ಯತ್ಯಾಸವಿಲ್ಲದೆ ಎಲ್ಲಾ ವಯೋಮಾನವದರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಇದೀಗ ಅಂತಹದೇ ಆಘಾತಕಾರಿ ಘಟನೆಯೊಂದು ನಡೆದಿದ್ದು,ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ADM) ಒಬ್ಬರು ವೇದಿಕೆಯ ಮೇಲೆ ನಿಂತು ಭಜನೆ ಹಾಡುತ್ತಾ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಈ ಘಟನೆ ಒಡಿಶಾದ ಗಜಪತಿ ಜಿಲ್ಲೆಯಲ್ಲಿ ನಡೆದಿದ್ದು, ಬುಧವಾರ (ಜುಲೈ 10) ಸಂಜೆ ಸರ್ಕಾರಿ ಅಧಿಕಾರಿಗಳ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೆ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಒಬ್ಬರು ಭಜನೆ ಹಾಡುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿರೇಂದ್ರ ಕುಮಾರ್ ದಾಸ್ ವೇದಿಕೆ ಮೇಲೆ ಭಜನೆ ಹಾಡುವಾಗ ಹಠಾತ್ತನೆ ಕುಸಿದು ಬಿದ್ದಿದ್ದಾರೆ. ಆ ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಪರೀಕ್ಷೆಯಲ್ಲಿ ಅವರ ರಕ್ತದೊತ್ತಡ ತೀರಾ ಹೆಚ್ಚಾಗಿದೆ ಎಂಬುದು ಕಂಡು ಬಂದಿದೆ. ನಂತರ ಅವರನ್ನು ಬೆರ್ಹಾಂಪುರದ MKCG ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ವೈದ್ಯರು ಅವರು ತೀವ್ರ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

Kalingatv ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿರೇಂದ್ರ ಕುಮಾರ್ ದಾಸ್ ಕಾರ್ಯಕ್ರಮವೊಂದರಲ್ಲಿ ಹಾಡು ಹಾಡುತ್ತಿರುವ ದೃಶ್ಯವನ್ನು ಕಾಣಬಹುದು. ಹೀಗೆ ಭಜನೆ ಹಾಡುತ್ತಿರುವಾಗ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.

ಇದನ್ನೂ ಓದಿ: ಮಾನವನ ಅಂತ್ಯಕ್ಕೆ 2025 ಬುನಾದಿ, ಶಾಕಿಂಗ್ ಭವಿಷ್ಯ ನುಡಿದ ಬಾಬಾ ವಂಗಾ

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 30 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಇತ್ತೀಚಿಗಂತೂ ಈ ಹೃದಯಘಾತ ಭಯಾನಕವಾಗಿ ಪರಿಣಮಿಸುತ್ತಿದೆ’ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ