AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರೈಲಿನಲ್ಲಿ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೊಡಿ ಎಂದ ಅಜ್ಜಿ, ಮುಗ್ಧತೆಗೆ ಸಾಕ್ಷಿಯಾಯ್ತು ಈ ದೃಶ್ಯ

ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಸರ್ಕಾರಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಕಲ್ಪಿಸಲಾಗಿರುವುದು ಎಲ್ಲರಿಗೂ ತಿಳಿದೇ ಇದೆ. ಆದರೆ ಈ ವಿಡಿಯೋ ನೋಡಿದ ಬಳಿಕ ಈ ಅಜ್ಜಿಯ ಮುಗ್ಧತೆ ಎಷ್ಟಿದೆ ಎಂದು ತಿಳಿಯುತ್ತದೆ. ಅಜ್ಜಿಯೊಬ್ಬರು ರೈಲಿನಲ್ಲಿ ಆಧಾರ್ ಕಾರ್ಡ್ ತೋರಿಸಿ ಟಿಕೆಟ್‌ ಕೇಳುವ ದೃಶ್ಯವಿದಾಗಿದೆ. ಮುಗ್ಧತೆಗೆ ಸಾಕ್ಷಿಯಾದ ಈ ವಿಡಿಯೋ ಸದ್ಯ ವೈರಲ್ ಆಗಿದೆ.

Video: ರೈಲಿನಲ್ಲಿ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೊಡಿ ಎಂದ ಅಜ್ಜಿ, ಮುಗ್ಧತೆಗೆ ಸಾಕ್ಷಿಯಾಯ್ತು ಈ ದೃಶ್ಯ
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on: Sep 27, 2025 | 12:51 PM

Share

ನಾವೆಲ್ಲರೂ ತುಂಬಾನೇ ಅಪ್ಡೇಟ್ ಆಗಿದ್ದೇವೆ. ಆದರೆ ಹಳ್ಳಿಯಲ್ಲಿನ ಕೆಲ ಜನರು ತುಂಬಾನೇ ಮುಗ್ಧರು, ಯಾರು ಏನ್ ಹೇಳಿದ್ರೂ ಕಣ್ಣು ಮುಚ್ಚಿ ನಂಬಿ ಬಿಡ್ತಾರೆ. ಆದರೆ ಅಜ್ಜಿಯೊಬ್ಬರ ಮುಗ್ಧತೆಗೆ ಈ ವಿಡಿಯೋನೇ ಸಾಕ್ಷಿ. ಹೌದು, ಬಸ್ ಫ್ರೀ ಅನ್ನೋದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ವೃದ್ಧೆಯೊಬ್ಬರು (Old woman) ರೈಲಿನಲ್ಲಿ ಆಧಾರ ಕಾರ್ಡ್ ತೋರಿಸಿ ಟಿಕೆಟ್ ಕಲೆಕ್ಟರ್ ಬಳಿ (Ticket Collector) ಬಳಿ ಟೆಕೆಟ್ ಕೇಳಿದ್ದಾರೆ. ಏನು ಅರಿಯದ ಸ್ವಚ್ಛ ಮನಸ್ಸಿನ ಈ ಅಜ್ಜಿಯ ವಿಡಿಯೋ ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ.

ಸಿಕಂದರ್‌ (sikandar) ಹೆಸರಿನ ಎಕ್ಸ್‌ ಖಾತೆಯಲ್ಲಿ ಶೇರ್ ಮಾಡಲಾದ ಈ ವಿಡಿಯೋದಲ್ಲಿ ಅಜ್ಜಿಯೊಬ್ಬರು ರೈಲಿನಲ್ಲಿ ಪ್ರಯಾಣಿಸುವುದನ್ನು ಕಾಣಬಹುದು. ಏನು ಅರಿಯದ ಅಜ್ಜಿಯೂ ರೈಲಿನಲ್ಲಿ ಆಧಾರ್ ಕಾರ್ಡ್ ತೋರಿಸಿದ್ರೆ ಫ್ರೀಯಾಗಿ ಪ್ರಯಾಣಿಸಬಹುದು ಅಂದುಕೊಂಡಿದ್ದಾರೆ. ಹೀಗಾಗಿ ಟ್ರೈನ್ ನಲ್ಲಿ ಆಧಾರ್ ಕಾರ್ಡ್ ತೋರಿಸಿ ಅಜ್ಜಿಯೊಬ್ಬರು ಟಿಸಿ ಬಳಿ ಟಿಕೆಟ್ ಕೇಳಿದ್ದಾರೆ. ಮುಗ್ಧ ಅಜ್ಜಿಯನ್ನು ನೋಡಿದ ಟಿಸಿ ಏನು ಹೇಳದೇನೇ ಆಧಾರ್ ಕಾರ್ಡ್ ಕೈಯಲ್ಲಿಡಿದು ನಗುತ್ತಿರುವುದನ್ನು ಕಾಣಬಹುದು. ಆ ಬಳಿಕ ಅಜ್ಜಿಯ ಮುಗ್ಧತೆಗೆ ಕರಗಿ ಹೋಗಿದ್ದಾರೆ.

ಇದನ್ನೂ ಓದಿ
Image
ಗಂಡನ ಮಡಿಲಿನಲ್ಲಿ ತಲೆಯಿಟ್ಟು ವಿಶ್ರಾಂತಿ ಪಡೆದ ವೃದ್ಧೆ
Image
ಪುಟ್ಟ ಹುಡುಗಿಯ ಬೇಡಿಕೆಗೆ ಸ್ಪಂದಿಸಿದ ಯುವಕ
Image
ಗಂಡನ ಕಿಸೆಯಿಂದ ಹಣ ಕದಿಯುವುದು ತುಂಬಾ ಸುಲಭ
Image
ದೇಶ ಸೇವೆಗೆ ಹೊರಟ ಮಗನ ಮುಂದೆ ಅಮ್ಮನ ಕಣ್ಣೀರು

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:Video: ಮೆಟ್ರೋದಲ್ಲಿ ಕಂಡ ಅಪರೂಪದ ದೃಶ್ಯ; ಗಂಡನ ಮಡಿಲಿನಲ್ಲಿ ವಿಶ್ರಾಂತಿ ಪಡೆದ ವೃದ್ಧೆ

ಈ ವಿಡಿಯೋವನ್ನು ಅಧಿಕ ಜನರು ವೀಕ್ಷಣೆ ಪಡೆದುಕೊಂಡಿದ್ದು, ಬಳಕೆದಾರರೊಬ್ಬರು ಯಾವ ತಾಯಿ ಹೆತ್ತ ಮಗನಪ್ಪ ನೀವು ಎಂದು ಕೇಳಿದ್ದಾರೆ. ಇನ್ನೊಬ್ಬರು ಇದು ಯಾಕೋ ಸ್ಕ್ರಿಪ್ಟ್ ತರಹ ಇದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರ ನಮ್ಮ ಹಳ್ಳಿ ಜನ ಎಷ್ಟು ಮುಗ್ಧರು ನೋಡಿ, ಏನು ತಿಳಿಯಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ