AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿತ್ತು ತಿನ್ನುವ ಬಡತನವಿದ್ದರೂ ಆಹಾರಕ್ಕೆ ಹಣ ನೀಡಲು ಮುಂದಾದ ವೃದ್ಧೆ: ಸ್ವಾಭಿಮಾನದ ಬದುಕು ಎಂದ ನೆಟ್ಟಿಗರು

ವೃದ್ಧೆಯೊಬ್ಬರಿಗೆ ಊಟ ನೀಡಿದಾಗ ಅವರು ಅದಕ್ಕೆ ಹಣ ನೀಡಿದ ವಿಡಿಯೋ ವೈರಲ್​ ಆಗಿದೆ. ವಿಡಿಯೋ ನೋಡಿ ನೆಟ್ಟಿಗರನ್ನು ಬೇಸರಗೊಂಡಿದ್ದಾರೆ. ಇನ್ಸ್ಟಾಗ್ರಾಮ್​ನಲ್ಲಿ ಘಂಟಾ ಎನ್ನುವ  ಖಾತೆ ವಿಡಿಯೋವನ್ನು ಹಂಚಿಕೊಂಡಿದೆ.

ಕಿತ್ತು ತಿನ್ನುವ ಬಡತನವಿದ್ದರೂ ಆಹಾರಕ್ಕೆ ಹಣ ನೀಡಲು ಮುಂದಾದ ವೃದ್ಧೆ: ಸ್ವಾಭಿಮಾನದ ಬದುಕು ಎಂದ ನೆಟ್ಟಿಗರು
ವೃದ್ಧೆ
TV9 Web
| Edited By: |

Updated on: Feb 19, 2022 | 2:36 PM

Share

ಸಾಮಾಜಿಕ ಜಾಲತಾಣದಲ್ಲಿ ಆಗಾಗ ಕಾಣಿಸಿಕೊಳ್ಳುವ ವಿಡಿಯೋ ನೆಟ್ಟಿಗರನ್ನು ಸೆಳೆಯುತ್ತದೆ. ಇದೀಗ ಮನಕಲಕುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ವೃದ್ಧೆಯೊಬ್ಬರಿಗೆ ಊಟ ನೀಡಿದಾಗ ಅವರು ಅದಕ್ಕೆ ಹಣ(Money) ನೀಡಿದ ವಿಡಿಯೋ ವೈರಲ್ (Viral Video)​ ಆಗಿದೆ. ವಿಡಿಯೋ ನೋಡಿ ನೆಟ್ಟಿಗರನ್ನು ಬೇಸರಗೊಂಡಿದ್ದಾರೆ. ಇನ್ಸ್ಟಾಗ್ರಾಮ್ (Instagram)​ನಲ್ಲಿ ಘಂಟಾ ಎನ್ನುವ  ಖಾತೆ ವಿಡಿಯೋವನ್ನು ಹಂಚಿಕೊಂಡಿದ್ದು, 1 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ.

View this post on Instagram

A post shared by memes | comedy (@ghantaa)

ವಿಡೀಯೋದಲ್ಲಿಮನೆಯಿಲ್ಲದೆ  ರಸ್ತೆಬದಿ ಕುಳಿತಿದ್ದ ವೃದ್ಧೆಗೆ ವ್ಯಕ್ತಿಯೊಬ್ಬ ನೀರಿನ ಬಾಟಲಿಯನ್ನು ನೀಡುತ್ತಾರೆ. ಅದನ್ನು ಖುಷಿಯಿಂದ ವೃದ್ಧೆ ಸ್ವೀಕರಿಸುತ್ತಾಳೆ. ನಂತರ ಊಟದ ಪ್ಯಾಕ್​ಅನ್ನು ನೀಡುತ್ತಾರೆ. ಅದನ್ನೂ ಕೂಡ  ತೆಗೆದುಕೊಂಡು ಮುಖದಲ್ಲಿ ಸಂತೋಷವನ್ನು ವ್ಯಕ್ತಪಡಿಸುತ್ತಾರೆ. ನಂತರ ತನ್ನ ಪುಟ್ಟ ಬ್ಯಾಗ್​ನಿಂದ ಹಣವನ್ನು ಎತ್ತಿ ನೀಡುತ್ತಾರೆ. ಆದರೆ ಆತ ತೆಗೆದುಕೊಳ್ಳುವುದಿಲ್ಲ. ಆಕೆಯ ಸ್ವಾಭಿಮಾನವನ್ನು ನೋಡಿ ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಅದೇ ರೀತಿ ಆಕೆ ಕಷ್ಟದಲ್ಲಿದ್ದರೂ ಹಣವನ್ನು ನೀಡಿ ಆಹಾರ ತೆಗೆದುಕೊಳ್ಳುತ್ತಿರುವುದನ್ನು ನೋಡಿ ವೀಕ್ಷಕರು ಬೇಸರ ವ್ಯಕ್ತಪಡಿಸಿದ್ದಾರೆ.

ಮನಕಲಕುವ ವಿಡಿಯೋ ನೋಡಿ ಹಲವರು ನೋವನ್ನು ವ್ಯಕ್ತಪಡಿಸಿ ಕಾಮೆಂಟ್​ ಮಾಡಿದ್ದಾರೆ. ಸದ್ಯ ವಿಡಿಯೋ ವೈರಲ್​ ಆಗಿದ್ದು ಸ್ವಾಭಿಮಾನದ ಬದುಕಿಗೆ ಉದಾಹರಣೆಯಾಗಿದೆ.

ಇದನ್ನೂ ಓದಿ:

ನ್ಯಾನೋ ಕಾರನ್ನು ಹೆಲಿಕಾಪ್ಟರನ್ನಾಗಿಸಿದ ಮೆಕ್ಯಾನಿಕ್​: ಮದುವೆ ಮನೆಗಳ ಬೇಡಿಕೆಯ ವಾಹನವಾದ ನ್ಯಾನೋ ಕಾರ್​ ಹೆಲಿಕಾಪ್ಟರ್

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ