90 ವರ್ಷಗಳ ಲಿವ್ಇನ್ ರಿಲೇಷನ್ಶಿಪ್ ಬಳಿಕ 102 ವರ್ಷದ ಅಜ್ಜಿಯನ್ನು ಮದುವೆಯಾದ 100ರ ಅಜ್ಜ
ಬರ್ನಿ ಲಿಟ್‌ಮ್ಯಾನ್ (100) ಮತ್ತು ಮಾರ್ಜೋರಿ ಫಿಟರ್‌ಮ್ಯಾನ್ (102) ಅವರು 90 ವರ್ಷಗಳ ಕಾಲ ಲಿವ್-ಇನ್ ಸಂಬಂಧದಲ್ಲಿದ್ದ ನಂತರ ವಿವಾಹವಾಗಿ ಗಿನ್ನೆಸ್ ವಿಶ್ವ ದಾಖಲೆಯನ್ನು ಸೃಷ್ಟಿಸಿದ್ದಾರೆ. ಒಂದೇ ವಿಶ್ವವಿದ್ಯಾನಿಲಯದಲ್ಲಿ ಓದಿದ ಇವರು 2024ರ ಮೇ 3 ರಂದು ವಿವಾಹವಾಗಿದ್ದಾರೆ. ಇವರ ಮದುವೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಒಂದೇ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮುಗಿಸಿ ಪರಸ್ಪರ ಪ್ರೀತಿಸಿ 90 ವರ್ಷಗಳ ಕಾಲ ಲಿವ್ಇನ್ ರಿಲೇಷನ್ಶಿಪ್ ನಲ್ಲಿದ್ದ ಜೋಡಿಯೊಂದು ಇದೀಗ ವಿವಾಹವಾಗುವ ಮೂಲಕ ಗಿನ್ನೆಸ್ ವಿಶ್ವ ದಾಖಲೆಯನ್ನು ಸೃಷ್ಟಿಸಿದ್ದಾರೆ. 100 ವರ್ಷದ ಅಜ್ಜನೊಂದಿಗೆ 102 ವಯಸ್ಸಿನ ಅಜ್ಜಿ ಸಪ್ತಪದಿ ತುಳಿದಿದ್ದು, ಈ ಮೂಲಕ ವಿಶ್ವದ ಅತ್ಯಂತ ಹಳೆಯ ನವವಿವಾಹಿತರು ಜೋಡಿ ಎಂಬ ಬಿರುದನ್ನು ಪಡೆದುಕೊಂಡಿದ್ದಾರೆ. ಸದ್ಯ ಇವರ ಮದುವೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಬರ್ನಿ ಲಿಟ್‌ಮ್ಯಾನ್ ಮತ್ತು ಮಾರ್ಜೋರಿ ಫಿಟರ್‌ಮ್ಯಾನ್ ಮೇ 3 ರಂದು ಪೆನ್ಸಿಲ್ವೇನಿಯಾದ ಫಿಲಡೆಲ್ಫಿಯಾದಲ್ಲಿನ ತಮ್ಮ ನಿವಾಸದಲ್ಲಿ ವಿವಾಹವಾಗಿದ್ದಾರೆ. ಬರ್ನಿ, ಮಾಜಿ ಇಂಜಿನಿಯರ್ ಮತ್ತು ಮಾರ್ಜೋರಿ, ನಿವೃತ್ತ ಶಿಕ್ಷಕಿ. ಸದ್ಯ ಇವರ ಮದುವೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ.
ವೈರಲ್ ವಿಡಿಯೋ ಇಲ್ಲಿದೆ ನೋಡಿ:
View this post on Instagram
ಇದನ್ನೂ ಓದಿ: ಅಲ್ಲಾ..ಹೇಳಬೇಡ,’ಜೈ ಶ್ರೀ ರಾಮ್’ ಹೇಳಬೇಕು ಎಂದು 3 ಮಕ್ಕಳಿಗೆ ಚಪ್ಪಲಿಯಲ್ಲಿ ಹೊಡೆದ ಯುವಕ
ಗಿನ್ನೆಸ್ ವಿಶ್ವ ದಾಖಲೆಯ ಅಧಿಕೃತ ಇನ್ಸ್ಟಾಗ್ರಾಮ್ ಖಾತೆ(www.instagram.com/guinnessworldrecords) ಯಲ್ಲಿ ಇವರ ಮದುವೆಯ ಕುರಿತ ವಿಡಿಯೋ ಹಂಚಿಕೊಳ್ಳಲಾಗಿದ್ದು, ವ್ಯಾಪಕವಾಗಿ ಹರಿದಾಡುತ್ತಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 1.1 ಮಿಲಿಯನ್ ಅಂದರೆ 10 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 36,820 ನೆಟ್ಟಿಗರು ಲೈಕ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವೈರಲ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ