Viral: ಮೈಸೂರಿನ ಇನ್ಫೋಸಿಸ್‌ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ಕೊಡಲು ಚಿರತೆಯಿಂದ ಮಾತ್ರ ಸಾಧ್ಯ; ವೈರಲ್ ಆಗ್ತಿದೆ ಮೀಮ್ಸ್‌

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಲ್ಲಿನ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ಘೋಷಿಸಲಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಚಿರತೆಗಾಗಿ ಕಾರ್ಯಾಚರಣೆ ನಡೆಸಿದ್ದು, ಆದ್ರೆ ಚಿರತೆ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ಸ್‌, ಮೀಮ್ಸ್‌ಗಳು ಕೂಡಾ ಹರಿದಾಡುತ್ತಿದ್ದು, ಇನ್ಫೋಸಿಸ್‌ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ಕೊಡಲು ಚಿರತೆಯಿಂದ ಮಾತ್ರ ಸಾಧ್ಯ ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

Viral: ಮೈಸೂರಿನ ಇನ್ಫೋಸಿಸ್‌ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ಕೊಡಲು ಚಿರತೆಯಿಂದ ಮಾತ್ರ ಸಾಧ್ಯ; ವೈರಲ್ ಆಗ್ತಿದೆ ಮೀಮ್ಸ್‌
ವೈರಲ್​​ ಫೋಟೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 09, 2025 | 3:52 PM

ಮೈಸೂರಿನ ಹೊರವಲಯದಲ್ಲಿರುವ ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಡಿಸೆಂಬರ್‌ 31 ರಂದು ಚಿರತೆ ಕಾಣಿಸಿಕೊಂಡ ಹಿನ್ನೆಲೆ ಸುರಕ್ಷತೆಯ ದೃಷ್ಟಿಯಿಂದ ಇನ್ಫೋಸಿಸ್‌ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಮತ್ತು ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಆದ್ರೆ ಚಿರತೆ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ಸ್‌, ಮೀಮ್ಸ್‌ಗಳು ಕೂಡಾ ಹರಿದಾಡುತ್ತಿದ್ದು, ಇನ್ಫೋಸಿಸ್‌ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ಕೊಡಲು ಚಿರತೆಯಿಂದ ಮಾತ್ರ ಸಾಧ್ಯ ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

ಕೆಲ ಸಮಯಗಳ ಹಿಂದೆಯಷ್ಟೇ ಇನ್ಫೋಸಿಸ್‌ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಯುವಕರು ವಾರಕ್ಕೆ 70 ಗಂಟೆಗಳ ಕಾಲ ದುಡಿಯಬೇಕು ಎಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಈ ಮಾತನ್ನೇ ಮುಂದಿಟ್ಟುಕೊಂಡು ಎಕ್ಸ್‌ ಪೇಜ್‌ ಒಂದರಲ್ಲಿ “ಮೈಸೂರು ಇನ್ಫೋಸಿಸ್‌ ಕ್ಯಾಂಪಸ್‌ನಲ್ಲಿ ಕಾಣಿಸಿಕೊಂಡ ಚಿರತೆ ಜ್ಯೂನಿಯರ್‌ ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ ಕೆಲಸಕ್ಕೆ ಸೇರಿಕೊಂಡಿದೆ.

ಇದನ್ನೂ ಓದಿ: ಹೆದ್ದಾರಿಯಲ್ಲಿ ಸಖತ್ತಾಗಿ ಕಾರು ಚಲಾಯಿಸಿದ ತಾಯಿ; ಹೆಮ್ಮೆಯಿಂದ ವಿಡಿಯೋ ಶೇರ್‌ ಮಾಡಿದ ಮಗ

ವೈರಲ್​​​ ಪೋಸ್ಟ್​​ ಇಲ್ಲಿದೆ ನೋಡಿ:

ಅದಕ್ಕೂ ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಲು ಒತ್ತಾಯಿಸಲಾಗಿದೆ” ಎಂದು ಟ್ರೋಲ್‌ ಮಾಡಿದ್ದಾರೆ. ಇನ್ನೊಬ್ಬ ಎಕ್ಸ್‌ ಬಳಕೆದಾರರು ಚಿರತೆಯಿಂದ ಮಾತ್ರ ಇನ್ಫೋಸಿಸ್‌ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್‌ ಕೊಡಲು ಸಾಧ್ಯ ಎಂದು ತಮಾಷೆ ಮಾಡಿದ್ದಾರೆ. ಈ ಎಲ್ಲಾ ಟ್ರೋಲ್‌ ಮೀಮ್ಸ್‌ಗಳು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್