Operation Sindoor : ಆಪರೇಷನ್ ಸಿಂಧೂರ್ ಬಳಿಕ ಪಾಕಿಸ್ತಾನಿಯರು ಗೂಗಲ್‌ನಲ್ಲಿ ಹುಡುಕಾಟ ನಡೆಸಿದ್ದು ಏನು ಗೊತ್ತಾ? ಇಲ್ಲಿದೆ ನೋಡಿ

ಜಮ್ಮು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯ ಬೈಸರನ್ ಕಣಿವೆಯಲ್ಲಿ ನಡೆದ ಉಗ್ರರ ದಾಳಿ ಬಳಿಕ ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುವ ನಿಟ್ಟಿನಲ್ಲಿ ಭಾರತದ ಸೇನೆಯ ಆಪರೇಷನ್ ಸಿಂಧೂರ್ ನಡೆಸಿ, ಒಟ್ಟು 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಹೌದು, ಭಾರತವು ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಂತೆ ಪಾಕಿಸ್ತಾನಿಯರು ಗೂಗಲ್ ನಲ್ಲಿ ಈ ಬಗ್ಗೆ ಹೆಚ್ಚು ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ. ಹಾಗಾದ್ರೆ ಪಾಕಿಸ್ತಾನಿಯರು ಗೂಗಲ್ ನಲ್ಲಿ ಹುಡುಕಾಟ ನಡೆಸಿದ್ದು ಏನು? ಗೂಗಲ್ ನಲ್ಲಿ ಟ್ರೆಂಡ್ ಆಗುತ್ತಿರುವುದೇನು? ಎನ್ನುವ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

Operation Sindoor : ಆಪರೇಷನ್ ಸಿಂಧೂರ್ ಬಳಿಕ ಪಾಕಿಸ್ತಾನಿಯರು ಗೂಗಲ್‌ನಲ್ಲಿ ಹುಡುಕಾಟ ನಡೆಸಿದ್ದು ಏನು ಗೊತ್ತಾ? ಇಲ್ಲಿದೆ ನೋಡಿ
ಆಪರೇಷನ್ ಸಿಂಧೂರ್

Updated on: May 07, 2025 | 1:20 PM

ಪಹಲ್ಗಾಮ್‌ (pahalgam) ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯೂ ಆಪರೇಷನ್ ಸಿಂಧೂರ (operation sindoor) ಹೆಸರಿನಲ್ಲಿ ದಾಳಿ ನಡೆಸಿ ತಿರುಗೇಟು ನೀಡಿದೆ. ಹೌದು, ಮಂಗಳವಾರ ತಡರಾತ್ರಿ 1.30 ರ ಸುಮಾರಿಗೆ ಪಾಕಿಸ್ತಾನ (pakistan) ದ 9 ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕ್ಷಿಪಣಿ ದಾಳಿ ನಡೆಸಿದ್ದು, ತಮ್ಮವರನ್ನು ಕೊಂದ ಪಾಕ್ ಉಗ್ರರಿಗೆ ಸರಿಯಾದ ಉತ್ತರ ನೀಡಿದೆ. ಭಾರತೀಯ ಸೇನೆಯು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕ್ಷಿಪಣಿ ದಾಳಿ ನಡೆಸಿದ್ದು, ಪಾಕ್‌ ಜನತೆಯೂ ಈ ದಾಳಿಯಿಂದ ಬೆಚ್ಚಿ ಬಿದ್ದಿದ್ದು ಸದ್ಯಕ್ಕಂತೂ ಪಾಕಿಸ್ತಾನಿಯರು ಗೂಗಲ್ ನಲ್ಲಿ ಸಿಂಧೂರ ಹೆಸರಿನ ಅರ್ಥವೇನು ಎನ್ನುವ ಬಗ್ಗೆ ಹುಡುಕಾಟ ನಡೆಸಿದ್ದಾರೆ.

ಹೌದು, ಪಾಕಿಸ್ತಾನಿಯರು ಗೂಗಲ್ ನಲ್ಲಿ ಆಪರೇಷನ್ ಸಿಂಧೂರ್, ಆಪರೇಷನ್ ಸಿಂಧೂರ್ ವಿಕಿ, ಇಂಡಿಯಾ ಆಪರೇಷನ್ ಸಿಂಧೂರ್, ಸಿಂಧೂರ್ ಅಟ್ಯಾಕ್, ಭಾರತದ ಕ್ಷಿಪಣಿ ದಾಳಿ, ಆಪರೇಷನ್ ಸಿಂಧೂರ್ ಎಂದರೇನು? ,ಬಿಳಿಧ್ವಜ, ಪಾಕಿಸ್ತಾನದ ಮೇಲೆ ಭಾರತದ ದಾಳಿ, ವಾಯುದಾಳಿ, ಭಾರತೀಯ ಸೇನೆ ಈ ಕೆಲವು ವಿಷಯಗಳ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ಗೂಗಲ್ ನಲ್ಲಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ :Viral: ಅವತ್ತು ಹೋಗಿ ಮೋದಿಗೆ ಹೇಳು ಅಂದ್ರಲ್ಲ, ಅದ್ರ ರಿಸಲ್ಟ್‌ ಈಗ ಸಿಕ್ತಲ್ವಾ; ವೈರಲ್‌ ಪೋಸ್ಟ್‌ ಇಲ್ಲಿದೆ

ಇದನ್ನೂ ಓದಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರೈಲಿನ ಎಸಿ ಕೋಚ್​​ ಟಾಯ್ಲೆಟ್​​ನಲ್ಲಿ ಹಾವು ಪತ್ತೆ; ಆಮೇಲೇನಾಯ್ತು?
ನಿಮ್ಗೊತ್ತಾ ಬ್ರೇಕಪ್‌ನಿಂದಲೂ ಹಲವಾರು ಪ್ರಯೋಜನಗಳಿವೆಯಂತೆ
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್

ಅದಲ್ಲದೆ, ಈ ಪಾಕ್ ಪ್ರಜೆಗಳು ʻಸಿಂಧೂರ ಎಂದರೇನು ಎನ್ನುವ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡು ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಉಳಿದಂತೆ ಭಾರತೀಯ ಸೇನೆಯ ಆಪರೇಷನ್ ಸಿಂಧರ್ ಹೆಸರಿನಲ್ಲಿ ಪ್ರತೀಕಾರ ತೀರಿಸಿಕೊಂಡಿದ್ದು, ಪಾಕಿಸ್ತಾನ ಸೇನೆಯ ಕಾರ್ಯಾಚರಣೆಯ ಬಗ್ಗೆ ಹುಡುಕಾಟ ನಡೆಸಿರುವುದು ಗೂಗಲ್ ಟ್ರೆಂಡ್ ನಲ್ಲಿ ತಿಳಿದು ಬಂದಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ