AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಕ್ಷಗಾನದಲ್ಲೂ ಮಿಂಚಿದ ಆಪರೇಷನ್ ಸಿಂಧೂರ, ಕಲಾವಿದರ ಮೈ ರೋಮಾಂಚನಕಾರಿ ಮಾತುಗಳು

ಭಾರತೀಯ ಸೇನೆ ಆಪರೇಷನ್‌ ಸಿಂಧೂರದ ಮೂಲಕ ಪಾಕಿಸ್ತಾನದ ಮೇಲೆ ವೈಮಾನಿಕ ದಾಳಿ ನಡೆಸಿ, ಉಗ್ರರ ನೆಲೆಯನ್ನು ಸಂಪೂರ್ಣ ಧ್ವಂಸ ಮಾಡುವ ಮೂಲಕ ಪಾಕಿಸ್ತಾನಿಗರ ಹುಟ್ಟು ಅಡಗಿಸಿತ್ತು. ಸದ್ಯಕ್ಕೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯೂ ಮುಂದುವರೆದಿದೆ. ಇದೀಗ ಕರಾವಳಿ ಗಂಡು ಕಲೆ ಯಕ್ಷಗಾನದಲ್ಲಿಯೂ ಕಲಾವಿದರೊಬ್ಬರು ಆಪರೇಷನ್ ಸಿಂಧೂರದ ಬಗ್ಗೆ ಮೈರೋಮಾಂಚನಕಾರಿ ಮಾತುಗಳನ್ನಾಡಿದ್ದಾರೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಬಳಕೆದಾರರು ಮೆಚ್ಚುಗೆಯ ಸುರಿಮಳೆಗೈದಿದ್ದಾರೆ.

ಯಕ್ಷಗಾನದಲ್ಲೂ ಮಿಂಚಿದ ಆಪರೇಷನ್ ಸಿಂಧೂರ, ಕಲಾವಿದರ ಮೈ ರೋಮಾಂಚನಕಾರಿ ಮಾತುಗಳು
ವೈರಲ್ ವಿಡಿಯೋ Image Credit source: Facebook
ಸಾಯಿನಂದಾ
|

Updated on: May 09, 2025 | 10:27 AM

Share

ಕರಾವಳಿ ಗಂಡು ಕಲೆ ಯಕ್ಷಗಾನ (yakshagana) ಭಾಗವತಿಕೆ ಹಾಡಿಗೆ ಕಲಾವಿದರ ಹೆಜ್ಜೆಗಾರಿಕೆ ಅಲ್ಲಲ್ಲಿ ಮಾತುಗಾರಿಕೆ. ಅದರೊಂದಿಗೆ ಚಂಡೆ ಮದ್ದಳೆಯ ಸಮ್ಮಿಲನವನ್ನು ನೋಡುವುದೇ ಚಂದ. ಇದೀಗ ಯಕ್ಷಗಾನದಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಳ್ಳಲಾಗಿದ್ದು ಪೌರಾಣಿಕ ಪ್ರಸಂಗ ದ ನಡುವೆ ಪ್ರಸಕ್ತ ವಿದ್ಯಮಾನಗಳ ಕುರಿತ ಹಾಸ್ಯಮಯ ಸಂಭಾಷಣೆಗಳು ನಡೆಯುತ್ತವೆ. ಇಂತಹ ಸಂಭಾಷಣೆಗಳು ಪ್ರೇಕ್ಷಕರ ಗಮನ ಸೆಳೆಯುವುದೇ ಇದೆ. ಇದೀಗ ಪಾವಂಜೆ ಮೇಳ (pavanje mela) ದಲ್ಲಿ ಕಲಾವಿದ ದಿನೇಶ್ ಶೆಟ್ಟಿ (dinesh shetty) ಆಪರೇಷನ್ ಸಿಂಧೂರದ ಬಗ್ಗೆ ಮಾತನಾಡಿದ ಸಂಭಾಷಣೆಯ ವಿಡಿಯೋವೊಂದು ವೈರಲ್ ಆಗಿದೆ.

ಶಾಸಕ ಸುನಿಲ್ ಕುಮಾರ್ ,  ತಮ್ಮ Sunil kumar karkala ಹೆಸರಿನ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದ್ದು, ಈ ವಿಡಿಯೋದಲ್ಲಿ ಪಾವಂಜೆ ಮೇಳದಲ್ಲಿ ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿ ಆಪರೇಷನ್ ಸಿಂಧೂರದ ಬಗ್ಗೆ ಮಾತನಾಡುವುದನ್ನು ನೋಡಬಹುದು. ಈ ಪವಿತ್ರವಾದ ನೆಲದಲ್ಲಿ ನಾನು ಹುಟ್ಟಿದವ. ಪವಿತ್ರವಾದ ಸಂಸ್ಕಾರವನ್ನು ಪಡೆದವ. ಈ ನೆಲಕ್ಕೆ ತಾಯಿಯೆಂದು ನಾವು ಕರೆಯುತ್ತೇವೆ. ತಾಯಿಯೆಂದು ಕರೆಯುವ ಈ ನೆಲ ಇದು ಬಿಟ್ರೆ ಇನ್ನೊಂದಿಲ್ಲ. ಹೀಗಾಗಿ ನಮಗೆ ದೇಶ ಪ್ರೇಮವನ್ನು ಕಲಿಸಿದೆ. ಬಿಟ್ರೆ ದೇಶ ದ್ರೋಹ ಮಾಡುವುದನ್ನು ಕಲಿಸಲಿಲ್ಲ ಎಂದು ಹೇಳುವುದನ್ನು ನೋಡಬಹುದು.

ಈ ವೇಳೆ ಸ್ತ್ರಿ ವೇಷದಾರಿಯೊಬ್ಬರು ಈ ತಾಯಿಯ ಸಿಂಧೂರ ಅಳಿಸಲು ಬಂದರೆ ಏನು ಮಾಡೋದು ಎಂದಿದ್ದಾರೆ. ಇದೇ ವೇಳೆ ಕಲಾವಿದ ದಿನೇಶ್ ಶೆಟ್ಟಿ, ತಾಯಿಯ ಸಿಂಧೂರವನ್ನು ಒರೆಸುತ್ತೇನೆಂದು ಬಂದರೆ ಈ ನೆಲದ ಒಬ್ಬಳು ಹೆಣ್ಣಿನ ಸಿಂಧೂರ ಒರೆಸಿದರೆ ವೈರಿಗಳ ಸಾವಿರ ಸಾವಿರ ಮಡದಿದರ ಸಿಂಧೂರ ಅಳಿಸುವುದಕ್ಕೆ ನಾವೆಲ್ಲಾ ಸಿದ್ಧರಾಗಿ ನಿಂತಿದ್ದೇವೆ ಎಂದು ಹೇಳುವುದನ್ನು ನೋಡಬಹುದು.

ಇದನ್ನೂ ಓದಿ
Image
ನಿದ್ದೆಯಲ್ಲಿದ್ದಾಗಲೇ ಪತ್ನಿ ಮೂಗನ್ನೇ ಕಚ್ಚಿ ತಿಂದ ಪತಿ
Image
ತುಂಬು ಗರ್ಭಿಣಿ ಮಹಿಳೆಯ ಜಬರ್ದಸ್ತ್ ಡಾನ್ಸ್ ನೋಡಿ ಬೆರಗಾದ ನೆಟ್ಟಿಗರು
Image
ಪಾಕ್ ಜನರಿಗೆ ನಕ್ಷತ್ರ ನೋಡಿದ್ರು ಭಾರತ ಕ್ಷಿಪಣಿಯಂತೆ ಕಾಣುತ್ತಿದೆ
Image
ಸುದ್ದಿ ನಿರೂಪಕಿ ಕೇಳಿದ ಪ್ರಶ್ನೆಗೆ ತಬ್ಬಿಬಾದ ಪಾಕ್ ರಕ್ಷಣಾ ಸಚಿವ

ಇದನ್ನೂ ಓದಿ : ನಿದ್ದೆಯಲ್ಲಿದ್ದಾಗಲೇ ಪತ್ನಿ ಮೂಗನ್ನೇ ಕಚ್ಚಿ ತಿಂದ ಪತಿ, ಇಲ್ಲಿದೆ ಅಸಲಿ ವಿಚಾರ

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಎರಡು ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ. ಬಳಕೆದಾರರೊಬ್ಬರು, ಯಕ್ಷಗಾನ ಸದಾ ಅಪ್ಡೇಟ್ ಆಗಿರುತ್ತದೆ ಎಂದಿದ್ದಾರೆ. ಇನ್ನೊಬ್ಬರು, ಭಾರತಾಂಬೆ ಎಂದೆಂದೂ ಅಮರ ಸಿಂಧೂರ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಸೂಪರ್ ಎಂದು ಕಲಾವಿದರ ಮೈ ರೋಮಾಂಚನಕಾರಿ ಮಾತುಗಾರಿಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ