
ಕರಾವಳಿ ಗಂಡು ಕಲೆ ಯಕ್ಷಗಾನ (yakshagana) ಭಾಗವತಿಕೆ ಹಾಡಿಗೆ ಕಲಾವಿದರ ಹೆಜ್ಜೆಗಾರಿಕೆ ಅಲ್ಲಲ್ಲಿ ಮಾತುಗಾರಿಕೆ. ಅದರೊಂದಿಗೆ ಚಂಡೆ ಮದ್ದಳೆಯ ಸಮ್ಮಿಲನವನ್ನು ನೋಡುವುದೇ ಚಂದ. ಇದೀಗ ಯಕ್ಷಗಾನದಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಳ್ಳಲಾಗಿದ್ದು ಪೌರಾಣಿಕ ಪ್ರಸಂಗ ದ ನಡುವೆ ಪ್ರಸಕ್ತ ವಿದ್ಯಮಾನಗಳ ಕುರಿತ ಹಾಸ್ಯಮಯ ಸಂಭಾಷಣೆಗಳು ನಡೆಯುತ್ತವೆ. ಇಂತಹ ಸಂಭಾಷಣೆಗಳು ಪ್ರೇಕ್ಷಕರ ಗಮನ ಸೆಳೆಯುವುದೇ ಇದೆ. ಇದೀಗ ಪಾವಂಜೆ ಮೇಳ (pavanje mela) ದಲ್ಲಿ ಕಲಾವಿದ ದಿನೇಶ್ ಶೆಟ್ಟಿ (dinesh shetty) ಆಪರೇಷನ್ ಸಿಂಧೂರದ ಬಗ್ಗೆ ಮಾತನಾಡಿದ ಸಂಭಾಷಣೆಯ ವಿಡಿಯೋವೊಂದು ವೈರಲ್ ಆಗಿದೆ.
ಶಾಸಕ ಸುನಿಲ್ ಕುಮಾರ್ , ತಮ್ಮ Sunil kumar karkala ಹೆಸರಿನ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದ್ದು, ಈ ವಿಡಿಯೋದಲ್ಲಿ ಪಾವಂಜೆ ಮೇಳದಲ್ಲಿ ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿ ಆಪರೇಷನ್ ಸಿಂಧೂರದ ಬಗ್ಗೆ ಮಾತನಾಡುವುದನ್ನು ನೋಡಬಹುದು. ಈ ಪವಿತ್ರವಾದ ನೆಲದಲ್ಲಿ ನಾನು ಹುಟ್ಟಿದವ. ಪವಿತ್ರವಾದ ಸಂಸ್ಕಾರವನ್ನು ಪಡೆದವ. ಈ ನೆಲಕ್ಕೆ ತಾಯಿಯೆಂದು ನಾವು ಕರೆಯುತ್ತೇವೆ. ತಾಯಿಯೆಂದು ಕರೆಯುವ ಈ ನೆಲ ಇದು ಬಿಟ್ರೆ ಇನ್ನೊಂದಿಲ್ಲ. ಹೀಗಾಗಿ ನಮಗೆ ದೇಶ ಪ್ರೇಮವನ್ನು ಕಲಿಸಿದೆ. ಬಿಟ್ರೆ ದೇಶ ದ್ರೋಹ ಮಾಡುವುದನ್ನು ಕಲಿಸಲಿಲ್ಲ ಎಂದು ಹೇಳುವುದನ್ನು ನೋಡಬಹುದು.
ಈ ವೇಳೆ ಸ್ತ್ರಿ ವೇಷದಾರಿಯೊಬ್ಬರು ಈ ತಾಯಿಯ ಸಿಂಧೂರ ಅಳಿಸಲು ಬಂದರೆ ಏನು ಮಾಡೋದು ಎಂದಿದ್ದಾರೆ. ಇದೇ ವೇಳೆ ಕಲಾವಿದ ದಿನೇಶ್ ಶೆಟ್ಟಿ, ತಾಯಿಯ ಸಿಂಧೂರವನ್ನು ಒರೆಸುತ್ತೇನೆಂದು ಬಂದರೆ ಈ ನೆಲದ ಒಬ್ಬಳು ಹೆಣ್ಣಿನ ಸಿಂಧೂರ ಒರೆಸಿದರೆ ವೈರಿಗಳ ಸಾವಿರ ಸಾವಿರ ಮಡದಿದರ ಸಿಂಧೂರ ಅಳಿಸುವುದಕ್ಕೆ ನಾವೆಲ್ಲಾ ಸಿದ್ಧರಾಗಿ ನಿಂತಿದ್ದೇವೆ ಎಂದು ಹೇಳುವುದನ್ನು ನೋಡಬಹುದು.
ಇದನ್ನೂ ಓದಿ : ನಿದ್ದೆಯಲ್ಲಿದ್ದಾಗಲೇ ಪತ್ನಿ ಮೂಗನ್ನೇ ಕಚ್ಚಿ ತಿಂದ ಪತಿ, ಇಲ್ಲಿದೆ ಅಸಲಿ ವಿಚಾರ
ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಎರಡು ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ. ಬಳಕೆದಾರರೊಬ್ಬರು, ಯಕ್ಷಗಾನ ಸದಾ ಅಪ್ಡೇಟ್ ಆಗಿರುತ್ತದೆ ಎಂದಿದ್ದಾರೆ. ಇನ್ನೊಬ್ಬರು, ಭಾರತಾಂಬೆ ಎಂದೆಂದೂ ಅಮರ ಸಿಂಧೂರ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಸೂಪರ್ ಎಂದು ಕಲಾವಿದರ ಮೈ ರೋಮಾಂಚನಕಾರಿ ಮಾತುಗಾರಿಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ