AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಜಸ್ಟ್ 10 ಸೆಕೆಂಡುಗಳಲ್ಲಿ ಈ ಕಾಡಿನಲ್ಲಿ ಅಡಗಿರುವ ಬೆಕ್ಕನ್ನು ಹುಡುಕಿ

ಕಣ್ಣು ಹಾಗೂ ಮೆದುಳಿಗೆ ಕೆಲಸ ನೀಡುವ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಬಿಡಿಸುವುದೆಂದರೆ ಬಹುತೇಕರಿಗೆ ಇಷ್ಟ. ಹೀಗಾಗಿ ಬಿಡುವು ಸಿಕ್ಕಾಗಲೆಲ್ಲಾ ಇಂತಹ ಒಗಟಿನ ಆಟದತ್ತ ಆಸಕ್ತಿ ತೋರಿಸುತ್ತಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಇಂತಹದ್ದೇ ಚಿತ್ರ ವೈರಲ್ ಆಗಿದೆ. ಈ ಕಾಡಿನಲ್ಲಿ ಅಡಗಿರುವ ಬೆಕ್ಕನ್ನು ಹತ್ತು ಸೆಕೆಂಡುಗಳಲ್ಲಿ ಗುರುತಿಸುವ ಸವಾಲು ನೀಡಲಾಗಿದೆ.

Optical Illusion: ಜಸ್ಟ್ 10 ಸೆಕೆಂಡುಗಳಲ್ಲಿ ಈ ಕಾಡಿನಲ್ಲಿ ಅಡಗಿರುವ ಬೆಕ್ಕನ್ನು ಹುಡುಕಿ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Reddit
ಸಾಯಿನಂದಾ
|

Updated on: Dec 16, 2025 | 10:05 AM

Share

ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್ ಟೀಸರ್ ಸೇರಿದಂತೆ ಮೆದುಳಿಗೆ ಕೆಲಸ ನೀಡುವ ಒಗಟಿನ ಚಿತ್ರಗಳು ಟ್ರಿಕ್ಕಿಯಾಗಿರುತ್ತದೆ. ಆದರೆ ಕೆಲವರು ನೀರು ಕುಡಿದಷ್ಟೇ ಸಲೀಸಾಗಿ ಈ ಒಗಟಿನ ಚಿತ್ರಗಳನ್ನು ಬಿಡಿಸಿ ಬುದ್ಧಿವಂತರು ಎನಿಸಿಕೊಳ್ಳುತ್ತಾರೆ. ಆದರೆ ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸಿಕೊಳ್ಳಲು ಇದೊಂದು ಒಳ್ಳೆಯ ಸಮಯ. ಇದೀಗ ವೈರಲ್ ಆಗಿರುವ ಈ ದಟ್ಟ ಕಾಡಿನ ಚಿತ್ರದಲ್ಲಿ ಮರೆ ಮಾಡಲಾಗಿರುವ ಕಳ್ಳ ಬೆಕ್ಕನ್ನು (cat) ಕಂಡು ಹಿಡಿಯಲು ಸಾಧ್ಯವೇ ಎಂದು ಒಮ್ಮೆ ನೋಡಿ. ಆದರೆ ನಿರ್ದಿಷ್ಟ ಸಮಯದೊಳಗೆ ಈ ಬೆಕ್ಕನ್ನು ಗುರುತಿಸಿದರೆ ನಿಮ್ಮ ಜಾಣತನ ಎಷ್ಟಿದೆ ಎಂದು ತಿಳಿಯುತ್ತದೆ.

ಈ ಇಲ್ಯೂಷನ್‌ ಚಿತ್ರದಲ್ಲಿ ಏನಿದೆ?

Optical Illusion Photo

ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವು ಜನರನ್ನು ಸುಲಭವಾಗಿ ನಿಮ್ಮನ್ನು ಮೋಸಗೊಳಿಸುತ್ತವೆ. r/FindTheSniper ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಇಲ್ಯೂಷನ್ ಚಿತ್ರವನ್ನು ಹಂಚಿಕೊಳ್ಳಲಾಗಿದೆ. ಈ ಚಿತ್ರವು ಬೆಕ್ಕನ್ನು ಹುಡುಕಿ ಎಂಬ ಶೀರ್ಷಿಕೆಯನ್ನು ಹೊಂದಿದೆ. ಮೊದಲ ನೋಟದಲ್ಲಿ ನೀವು ಮರದ ಕಾಂಡಗಳು, ಹರಡಿ ಕೊಂಡಿರುವ ಕೊಂಬೆಗಳು ಹಾಗೂ ವಸಂತಕಾಲದ ಆರಂಭದ ಹಸಿರಿನಿಂದ ತುಂಬಿದ ಶಾಂತ ಕಾಡಿನಂತೆ ಕಾಣುತ್ತದೆ. ಆದರೆ ಇದರಲ್ಲಿ ಅವಿತು ಕುಳಿತಿರುವ ಬೆಕ್ಕನ್ನು ನಿಮ್ಮ ವೀಕ್ಷಣಾ ಸಾಮರ್ಥ್ಯವನ್ನು ಬಳಸಿ ಕಂಡು ಹಿಡಿಯಬೇಕು. ಈ ಒಗಟು ಬಿಡಿಸಲು ನಿಮಗಿರುವ ಸಮಯಾವಕಾಶ ಹತ್ತು ಸೆಕೆಂಡುಗಳು ಮಾತ್ರ.

ಇದನ್ನೂಓದಿ: ಈ ಚಿತ್ರದಲ್ಲಿ ಅಡಗಿರುವ ಎರಡು ಸಂಖ್ಯೆಗಳನ್ನು ನಿಮ್ಮಿಂದ ಹುಡುಕಲು ಸಾಧ್ಯನಾ?

ಬೆಕ್ಕು ನಿಮ್ಮ ಕಣ್ಣಿಗೆ ಬಿದ್ದಿತೇ?

Optical Illusion Answer

ಭ್ರಮೆಯನ್ನುಂಟು ಮಾಡುವ ಈ ಚಿತ್ರಗಳಲ್ಲಿನ ಒಗಟನ್ನು ಬಿಡಿಸುವುದು ಅಷ್ಟು ಸುಲಭವಲ್ಲ. ಈ ಕಾಡಿನಲ್ಲಿ ಬೆಕ್ಕು ಎಲ್ಲಿದೆ ಎಂದು ನಾವು ಸುಳಿವು ನೀಡುತ್ತೇವೆ. ಬೆಕ್ಕು ಮರದ ಬುಡದಲ್ಲಿ, ಸ್ವಲ್ಪ ಬಲಭಾಗಕ್ಕೆ ವೇಷ ಮರೆಸಿ ಕುಳಿತಿದೆ. ಈ ಬೆಕ್ಕಿನ ದೇಹವು ನೆಲದ ಬಳಿಯಿರುವ ತೊಗಟೆ, ಎಲೆಗಳು ಮತ್ತು ನೆರಳುಗಳೊಂದಿಗೆ ಬಹುತೇಕ ಬೆರೆತು ಹೋಗಿದೆ. ಈ ಸುಳಿವನ್ನು ಆಧರಿಸಿ ನೀವು ಬೆಕ್ಕನ್ನು ಗುರುತಿಸಿದ್ದೀರಿ ಎಂದು ನಾವು ಭಾವಿಸುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು