AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಈ ಚಿತ್ರದಲ್ಲಿ ಅಡಗಿರುವ ಮೀನನ್ನು ಜಸ್ಟ್ 21 ಸೆಕೆಂಡುಗಳಲ್ಲಿ ಹುಡುಕಿ

ಕಣ್ಣು ಹಾಗೂ ಮೆದುಳಿಗೆ ಕೆಲಸ ನೀಡುವ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಬಿಡಿಸುವುದೆಂದರೆ ಕೆಲವರಿಗೆ ಇಷ್ಟ. ಹೀಗಾಗಿ ಇಂತಹ ಒಗಟಿನ ಚಿತ್ರಗಳತ್ತ ಕಣ್ಣು ಹಾಯಿಸುತ್ತಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಇಂತಹದ್ದೇ ಚಿತ್ರ ವೈರಲ್ ಆಗಿದ್ದು, ಈ ಚಿತ್ರದಲ್ಲಿ ಅಡಗಿರುವ ಮೀನನ್ನು ಕಂಡುಹಿಡಿಯುವ ಸವಾಲು ನೀಡಲಾಗಿದೆ. ಕೇವಲ 21 ಸೆಕೆಂಡುಗಳಲ್ಲಿ ಈ ಒಗಟು ಬಿಡಿಸಲು ಸಾಧ್ಯವೇ ಎಂದು ನೋಡಿ.

Optical Illusion: ಈ ಚಿತ್ರದಲ್ಲಿ ಅಡಗಿರುವ ಮೀನನ್ನು ಜಸ್ಟ್ 21 ಸೆಕೆಂಡುಗಳಲ್ಲಿ ಹುಡುಕಿ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ Image Credit source: Social Media
ಸಾಯಿನಂದಾ
|

Updated on: Nov 04, 2025 | 12:11 PM

Share

ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್ ಟೀಸರ್ ಸೇರಿದಂತೆ ಇನ್ನಿತರ ಮೋಜಿನ ಆಟಗಳು ಖುಷಿಕೊಡುತ್ತದೆ. ಜೊತೆಗೆ ಮೆದುಳಿಗೆ ಕೆಲಸ ನೀಡುತ್ತದೆ. ಹೀಗಾಗಿ ಹೆಚ್ಚಿನವರು ಇಂತಹ ಒಗಟಿನ ಆಟಗಳನ್ನು ಇಷ್ಟ ಪಡುತ್ತಾರೆ. ಆದರೆ ಬುದ್ಧಿವಂತರು ಮಾತ್ರ ಕಡಿಮೆ ಸಮಯದಲ್ಲಿ ಉತ್ತರ ಕಂಡುಕೊಳ್ಳುತ್ತಾರೆ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಅಡಗಿರುವ ಮೀನನ್ನು (fish) ಹುಡುಕಲು ಸಾಧ್ಯವೇ ಎಂದು ಒಮ್ಮೆ ನೋಡಿ. ಹಚ್ಚಹರಿಸಿನ ಮರ ಹಾಗೂ ಮನುಷ್ಯರ ನಡುವೆ ಜಾಣತನದಿಂದ ಮರೆ ಮಾಡಲಾಗಿರುವ ಮೀನನ್ನು ನಿರ್ದಿಷ್ಟ ಸಮಯದೊಳಗೆ ಹುಡುಕಿ ಬುದ್ಧಿವಂತಿಕೆಯನ್ನು ಪರೀಕ್ಷಿಸಿಕೊಳ್ಳಿ.

ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಏನಿದೆ?

ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವು ಜನರನ್ನು ಸುಲಭವಾಗಿ ಮೋಸಗೊಳಿಸುತ್ತವೆ. ಈ ಚಿತ್ರವು ಸಾಮಾನ್ಯದಂತೆ ತೋರುತ್ತಿದ್ದು, ಹಚ್ಚಹಸಿರಾದ ಮರ ಗಿಡಗಳು, ಮನುಷ್ಯರು ಹಾಗೂ ಪ್ರಾಣಿಗಳು ಇವೆ. ಆದರೆ ಈ ಚಿತ್ರದಲ್ಲಿ ಮೀನನ್ನು ಜಾಣತನದಿಂದ ಮರೆ ಮಾಡಲಾಗಿದ್ದು, ಹೀಗಾಗಿ ಈ ಒಗಟು ಬಿಡಿಸುವುದು ಅತ್ಯಂತ ಕಷ್ಟಕರವೆಂಬಂತೆ ನಿಮಗೆ ಕಾಣಬಹುದು. ಅದೆಲ್ಲವನ್ನು ಮೀರಿ 21 ಸೆಕೆಂಡುಗಳಲ್ಲೇ ಮೀನನ್ನು ಕಂಡುಹಿಡಿದರೆ ನಿಮ್ಮ ವೀಕ್ಷಣಾ ಕೌಶಲ್ಯವು ಅತ್ಯುತ್ತಮವಾಗಿದೆ ಎಂದರ್ಥ.

ಇದನ್ನೂ ಓದಿ:ಈ ಚಿತ್ರದಲ್ಲಿ ಮರೆಮಾಡಲಾಗಿರುವ ಹಣ್ಣುಗಳನ್ನು ಗುರುತಿಸಿ ನೋಡೋಣ

ಮೀನು  ನಿಮ್ಮ ಕಣ್ಣಿಗೆ ಬಿದ್ದಿತೇ?

ಭ್ರಮೆಯನ್ನುಂಟು ಮಾಡುವ ಈ ಚಿತ್ರಗಳಲ್ಲಿನ ಒಗಟನ್ನು ಬಿಡಿಸುವುದು ಅಷ್ಟು ಸುಲಭವಲ್ಲ. ಈ ಚಿತ್ರವು ಸವಾಲಿನದ್ದಾಗಿದೆ. ನೀವು ಎಷ್ಟೇ ಪ್ರಯತ್ನಿಸಿದರೂ ಮೀನು ಎಲ್ಲಿದೆ ಎಂದು ಪತ್ತೆ ಹಚ್ಚಲು ನಿಮಗೆ ಸಾಧ್ಯವಾಗಿಲ್ಲವೇ. ನಾವು ಹೇಳುವಂತೆ ನೀವು ಮಾಡಿ, ಈ  ಫೋಟೋವನ್ನು ಭಾಗಗಳಾಗಿ ವಿಂಗಡಿಸಿಕೊಂಡು ಪ್ರತಿಯೊಂದು ಭಾಗವನ್ನು ಸೂಕ್ಷ್ಮವಾಗಿ ನೋಡಿ. ಒಂದು ವೇಳೆ ನಿಮ್ಮ ಕಣ್ಣಿಗೆ ಮೀನು ಬಿದ್ದರೆ ನೀವು ಒಗಟು ಬಿಡಿಸುವಲ್ಲಿ ಯಶಸ್ವಿಯಾಗಿದ್ದೀರಿ ಎಂದರ್ಥ. ಇಲ್ಲವಾದರೆ ನಾವು ನಿಮಗೆ ಚಿತ್ರದಲ್ಲಿ ಮೀನು ಎಲ್ಲಿದೆ ಎಂದು ಹೇಳುತ್ತೇವೆ. ಈ ಕೆಳಗಿನ ಚಿತ್ರ ನೋಡಿ, ಮೀನು ಎಲ್ಲಿದೆ ಎಂದು ಕೆಂಪು ಬಣ್ಣದಲ್ಲಿ ಗುರುತು ಹಾಕಿದ್ದೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉತ್ತರ ಪ್ರದೇಶದ ಕಲ್ಲು ಗಣಿಗಾರಿಕೆ ವೇಳೆ ಭೂಕುಸಿತವಾಗಿ ಓರ್ವ ಸಾವು
ಉತ್ತರ ಪ್ರದೇಶದ ಕಲ್ಲು ಗಣಿಗಾರಿಕೆ ವೇಳೆ ಭೂಕುಸಿತವಾಗಿ ಓರ್ವ ಸಾವು
ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ; ಡಿಕೆಶಿ
ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ; ಡಿಕೆಶಿ
ರಾಹುಲ್ ಗಾಂಧಿಗೆ ಧೈರ್ಯ ತುಂಬಿದ್ದೇನೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ರಾಹುಲ್ ಗಾಂಧಿಗೆ ಧೈರ್ಯ ತುಂಬಿದ್ದೇನೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
‘ಗತವೈಭವ’ಕ್ಕಾಗಿ ಒಂದು ಕೋಟಿ ಮೌಲ್ಯದ ಆಭರಣ ಧರಿಸಿದ್ದ ಆಶಿಕಾ: ವಿಡಿಯೋ
‘ಗತವೈಭವ’ಕ್ಕಾಗಿ ಒಂದು ಕೋಟಿ ಮೌಲ್ಯದ ಆಭರಣ ಧರಿಸಿದ್ದ ಆಶಿಕಾ: ವಿಡಿಯೋ
ಸುದೀಪ್​ ಅವರನ್ನೇ ಮ್ಯಾನ್ಯುಪಲೇಷನ್ ಮಾಡಲು ಹೋದ ಜಾನ್ವಿ
ಸುದೀಪ್​ ಅವರನ್ನೇ ಮ್ಯಾನ್ಯುಪಲೇಷನ್ ಮಾಡಲು ಹೋದ ಜಾನ್ವಿ
ಬೆಳಗಾವಿ: 28 ಕೃಷ್ಣಮೃಗಗಳ ಸಾವು; ತನಿಖೆ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಮಾತು
ಬೆಳಗಾವಿ: 28 ಕೃಷ್ಣಮೃಗಗಳ ಸಾವು; ತನಿಖೆ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಮಾತು
ಗುಜರಾತ್​​ನಲ್ಲಿ ಮೋದಿ ರೋಡ್ ಶೋ; ಸಾಂಪ್ರದಾಯಿಕ ನೃತ್ಯದ ಮೂಲಕ ಸ್ವಾಗತ
ಗುಜರಾತ್​​ನಲ್ಲಿ ಮೋದಿ ರೋಡ್ ಶೋ; ಸಾಂಪ್ರದಾಯಿಕ ನೃತ್ಯದ ಮೂಲಕ ಸ್ವಾಗತ
Cabinet Reshuffle: ಸಂಪುಟ ಪುನಾರಚನೆಗೆ ಹೈಕಮಾಂಡ್​ ಗ್ರೀನ್ ​ಸಿಗ್ನಲ್
Cabinet Reshuffle: ಸಂಪುಟ ಪುನಾರಚನೆಗೆ ಹೈಕಮಾಂಡ್​ ಗ್ರೀನ್ ​ಸಿಗ್ನಲ್
ನೆತ್ತಿಗೇರಿತು ಕಿಚ್ಚನ ಸಿಟ್ಟು, ರಕ್ಷಿತಾ-ಗಿಲ್ಲಿಗೆ ಕಾದಿದೆ ಹಬ್ಬ
ನೆತ್ತಿಗೇರಿತು ಕಿಚ್ಚನ ಸಿಟ್ಟು, ರಕ್ಷಿತಾ-ಗಿಲ್ಲಿಗೆ ಕಾದಿದೆ ಹಬ್ಬ
ರಾಹುಲ್ ಗಾಂಧಿಯದು ಐರನ್ ಲೆಗ್ ಎಂಬುದು ಮತ್ತೆ ಸಾಬೀತಾಗಿದೆ; ಬಿವೈ ವಿಜಯೇಂದ್ರ
ರಾಹುಲ್ ಗಾಂಧಿಯದು ಐರನ್ ಲೆಗ್ ಎಂಬುದು ಮತ್ತೆ ಸಾಬೀತಾಗಿದೆ; ಬಿವೈ ವಿಜಯೇಂದ್ರ