Optical Illusion: ಜಸ್ಟ್‌ 10 ಸೆಕೆಂಡುಗಳಲ್ಲಿ ಹೂವುಗಳ ನಡುವೆ ಇರುವ ಗಂಟೆಯನ್ನು ಕಂಡು ಹಿಡಿಯಬಲ್ಲಿರಾ

ಸೋಶಿಯಲ್ ಮೀಡಿಯಾದಲ್ಲಿ ಕಣ್ಣು ಹಾಗೂ ಮೆದುಳಿಗೆ ಸವಾಲೊಡ್ದುವ ಕುತೂಹಲಕಾರಿ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈ ಒಗಟಿನ ಚಿತ್ರಗಳನ್ನು ಬಿಡಿಸುವುದು ಹೇಳಿದ್ದಷ್ಟು ಸುಲಭವಲ್ಲ. ಇದೀಗ ವೈರಲ್ ಆಗಿರುವ ಈ ಚಿತ್ರದಲ್ಲಿ ಹೂವುಗಳ ನಡುವೆ ಇರುವ ಗಂಟೆಯನ್ನು ಗುರುತಿಸುವ ಸವಾಲು ನೀಡಲಾಗಿದೆ. ಈ ಒಗಟು ಬಿಡಿಸಿ ನಿಮ್ಮ ಬುದ್ಧಿವಂತಿಕೆ ಪರೀಕ್ಷಿಸಿಕೊಳ್ಳಿ.

Optical Illusion: ಜಸ್ಟ್‌ 10 ಸೆಕೆಂಡುಗಳಲ್ಲಿ ಹೂವುಗಳ ನಡುವೆ ಇರುವ ಗಂಟೆಯನ್ನು ಕಂಡು ಹಿಡಿಯಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ
Image Credit source: Centrum.cz

Updated on: Mar 22, 2026 | 1:38 PM

ಆಪ್ಟಿಕಲ್‌ ಇಲ್ಯೂಷನ್‌ (optical illusion) ಹಾಗೂ ಬ್ರೈನ್ ಟೀಸರ್ ನಂತಹ ಒಗಟಿನ ಚಿತ್ರಗಳೇ ಹಾಗೆ. ಕ್ಷಣಾರ್ಧದಲ್ಲಿ ಈ ಒಗಟು ಬಿಡಿಸಿ ಉತ್ತರ ಕಂಡುಕೊಳ್ಳಲು ಅಸಾಧ್ಯ. ಹೆಚ್ಚಿನವರು ಇಂತಹ ಒಗಟಿನ ಆಟಗಳನ್ನು ಬಿಡಿಸಲು ಹೋಗಿ ಕೈ ಚೆಲ್ಲಿ ಕುಳಿತುಕೊಳ್ಳುತ್ತಾರೆ. ಆದರೆ ಈ ಟ್ರಿಕ್ಕಿ ಚಿತ್ರಗಳು ನಿಮ್ಮ ದೃಷ್ಟಿ ಸಾಮರ್ಥ್ಯ ಹಾಗೂ ಯೋಚನಾ ಸಾಮರ್ಥ್ಯ ಪರೀಕ್ಷಿಸಲು ಸಹಾಯ ಮಾಡುತ್ತವೆ. ಈ ಉದ್ಯಾನವನದಲ್ಲಿ ಹೂವುಗಳ ನಡುವೆ ಗಂಟೆಯೊಂದಿದೆ. ನೀವು ಒಗಟು ಬಿಡಿಸೋದ್ರಲ್ಲಿ ಪಂಟಾರಾಗಿದ್ರೆ ಕೇವಲ ಹತ್ತು ಒಳಗೆ ಈ ವಸ್ತುವನ್ನು ಪತ್ತೆ ಹಚ್ಚಿ ನೋಡೋಣ.

ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು?

ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವು ನೋಡುವುದಕ್ಕೆ ಕಲರ್ ಫುಲ್ ಆಗಿದ್ದು, ತುಂಬಾನೇ ಟ್ರಿಕ್ಕಿಯಾಗಿದೆ. ಉದ್ಯಾನವನ ನೋಟವನ್ನು ತೋರಿಸುತ್ತದೆ. ಉದ್ಯಾನವನದಲ್ಲಿ ವರ್ಣರಂಜಿತ ಹೂವುಗಳಿವೆ. ಆದರೆ ಹೂವುಗಳ ಮಧ್ಯದಲ್ಲಿ ಒಂದು ಗಂಟೆಯೂ ಇದೆ. ಈ ಫೋಟೋದಲ್ಲಿರುವ ಸವಾಲು ಗಂಟೆ ಎಲ್ಲಿದೆ ಎಂದು ಪತ್ತೆ ಹಚ್ಚುವುದು. 10 ಸೆಕೆಂಡುಗಳ ಒಳಗೆ ಗಂಟೆಯನ್ನು ಕಂಡುಹಿಡಿಯಲು ಸಾಧ್ಯವಾದರೆ, ನಿಮ್ಮ ವೀಕ್ಷಣಾ ಶಕ್ತಿಗೆ ಹ್ಯಾಟ್ಸ್ ಆಫ್ ಹೇಳುತ್ತೇವೆ.

ಇದನ್ನೂ ಓದಿ:ಹದ್ದಿನ ಕಣ್ಣು ನಿಮ್ಮದಾಗಿದ್ರೆ ಮರಳಿನ ರಾಶಿಯಲ್ಲಿ ಅಡಗಿ ಕುಳಿತಿರುವ ಹಾವನ್ನು ಕಂಡು ಹಿಡಿಯುವಿರಾ

ಗಂಟೆ ನಿಮ್ಮ ಕಣ್ಣಿಗೆ ಕಾಣಿಸಿತೇ?

ಎಷ್ಟೇ ಹುಡುಕಿದರೂ ಚಿತ್ರದಲ್ಲಿ ಮರೆ ಮಾಡಲಾಗಿರುವ ಗಂಟೆಯನ್ನು ಹುಡುಕಲು ಸಾಧ್ಯವಾಗುತ್ತಿಲ್ಲ ಎಂದು ತಲೆ ಕೆಡಿಸಿಕೊಳ್ಳಬೇಡಿ. ಹೂವುಗಳ ನಡುವೆ ಇರುವ ಈ ಗಂಟೆಯನ್ನು ಹುಡುಕಲು ನೀವು ಈ ಚಿತ್ರವನ್ನು ವಿಭಾಗಗಳಾಗಿ ವಿಂಗಡಿಸುವುದು ಉತ್ತಮ. ಇಷ್ಟು ಮಾಡಿದ ಮೇಲೆ ಈ ವಸ್ತುವನ್ನು ಗುರುತಿಸಲು ಸಾಧ್ಯವಾಗಿಲ್ಲ ಎಂದಾದರೆ ನಾವೇ ಈ ಕೆಳಗಿನ ಚಿತ್ರದಲ್ಲಿ ಗಂಟೆಯನ್ನು ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Follow Us