AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ನಿಮಗೊಂದು ಸವಾಲ್; ಈ ಚಿತ್ರದಲ್ಲಿರುವ ಕಳ್ಳ ಬೆಕ್ಕನ್ನು ಜಸ್ಟ್ 10 ಸೆಕೆಂಡುಗಳಲ್ಲಿ ಗುರುತಿಸಿ

ಪ್ರತಿನಿತ್ಯ ಸೋಷಿಯಲ್‌ ಮೀಡಿಯಾದಲ್ಲಿ ಮೆದುಳಿಗೆ ಕೆಲಸ ನೀಡುವ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ವೈರಲ್‌ ಆಗುತ್ತಿರುತ್ತವೆ. ಈ ಒಗಟಿನ ಚಿತ್ರ ಬಿಡಿಸುವುದು ಒಂದೇ ತಲೆ ಹುಳ ಬಿಡುವುದು ಒಂದೇ. ಇದೀಗ ಇಂತಹದ್ದೇ ಒಗಟಿನ ಚಿತ್ರ ವೈರಲ್ ಆಗಿದೆ. ಈ ಚಿತ್ರದಲ್ಲಿ ಬೆಕ್ಕು ಎಲ್ಲಿ ಅಡಗಿ ಕುಳಿತಿದೆ ಎಂದು ಹೇಳಬೇಕು. ನೀವು ಈ ಒಗಟು ಬಿಡಿಸಲು ರೆಡಿನಾ.

Optical Illusion: ನಿಮಗೊಂದು ಸವಾಲ್; ಈ ಚಿತ್ರದಲ್ಲಿರುವ ಕಳ್ಳ ಬೆಕ್ಕನ್ನು ಜಸ್ಟ್ 10 ಸೆಕೆಂಡುಗಳಲ್ಲಿ ಗುರುತಿಸಿ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ
ಸಾಯಿನಂದಾ
|

Updated on:Jun 14, 2026 | 11:21 AM

Share

ನೀವು ಬುದ್ಧಿವಂತರೇ, ಹಾಗಾದ್ರೆ ಮೆದುಳು ಹಾಗೂ ಬುದ್ಧಿವಂತಿಕೆಯನ್ನು ಪರೀಕ್ಷಿಸುವ ಸಮಯ ಈಗ ಬಂದಿದೆ. ನೀವು ಈ ಹಿಂದೆ ಒಗಟಿನ ಚಿತ್ರಗಳನ್ನು ಬಿಡಿಸಲು ವಿಫಲ ಆಗಿದ್ದೀರಬಹುದು. ನಿಮ್ಮ ವೀಕ್ಷಣಾ ಸಾಮರ್ಥ್ಯ ಹಾಗೂ ಬುದ್ಧಿವಂತಿಕೆಯ ಮಟ್ಟವನ್ನು ಪರೀಕ್ಷಿಸಲು ಹೆಚ್ಚಿನವರು ಈ ಆಪ್ಟಿಕಲ್‌ ಇಲ್ಯೂಷನ್‌ (optical illusion) ಚಿತ್ರ ನೋಡಿ. ಈ ಅಡುಗೆ ಮನೆಯಲ್ಲಿ ಅಡಗಿರುವ ಬೆಕ್ಕನ್ನು ಕಂಡು ಹಿಡಿಯುವ ಸವಾಲು ಇಲ್ಲಿದೆ. ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಿ.

ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ

ಫೈಂಡ್ ದಿ ಸ್ನೈಪರ್’ (/FindTheSniper) ಎಂಬ ಸಬ್‌ರೆಡಿಟ್‌ನಲ್ಲಿ ಈ ಆಪ್ಟಿಕಲ್ ಭ್ರಮೆಯುಳ್ಳ ಚಿತ್ರವನ್ನು ಹಂಚಿಕೊಳ್ಳಲಾಗಿದೆ. ಅಡುಗೆ ಮನೆಯ ನೋಟವನ್ನು ಕಾಣಬಹುದು. ಪಾತ್ರೆಗಳು, ಉಪಕರಣಗಳು ಹಾಗೂ ದಿನನಿತ್ಯದ ವಸ್ತುಗಳು ಅಸ್ತವ್ಯಸ್ತವಾಗಿರುವುದನ್ನು ನೋಡಬಹುದು. ಈ ಅಡುಗೆ ಮನೆಯಲ್ಲಿ ಬೆಕ್ಕಿನ ಮರಿ ಸ್ಪಷ್ಟವಾಗಿ ಕಾಣದಂತೆ ಅಡಗಿಕೊಂಡಿದೆ. ಹತ್ತು ಸೆಕೆಂಡುಗಳೊಳಗೆ ಈ ಬೆಕ್ಕನ್ನು ನಿಮ್ಮ ಕಣ್ಣಿಗೆ ಕಾಣಿಸಿದ್ರೆ ನೀವು ಜಾಣರು ಎಂದರ್ಥ.

ರೆಡ್ಡಿಟ್‌ ಪೋಸ್ಟ್‌ ಇಲ್ಲಿದೆ

Find the predator by u/Suspecious_Banana in FindTheSniper

ಇದನ್ನೂ ಓದಿ: ನಿಮ್ಮದು ಹದ್ದಿನ ಕಣ್ಣಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಕಳ್ಳ ಬೆಕ್ಕನ್ನು ಗುರುತಿಸಬಲ್ಲಿರಾ

ಬೆಕ್ಕು ನಿಮ್ಮ ಕಣ್ಣಿಗೆ ಕಂಡಿತೇ?

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಭ್ರಮೆಯನ್ನುಂಟು ಮಾಡುವುದು ಸಹಜ. ಬೆಕ್ಕು ತನ್ನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸರಾಗವಾಗಿ ಬೆರೆತುಹೋಗಿದ್ದು, ಹೆಚ್ಚಿನವರಿಗೆ ಈ ಕಳ್ಳ ಬೆಕ್ಕನ್ನು ಕಂಡು ಹಿಡಿಯಲು ಸಾಧ್ಯವಿಲ್ಲ. ಅತ್ಯುತ್ತಮ ವೀಕ್ಷಣಾ ಕೌಶಲ್ಯ ಹೊಂದಿರುವ ಜನರು ಮಾತ್ರ 10 ಸೆಕೆಂಡುಗಳು ಅಥವಾ ಅದಕ್ಕಿಂತ ಕಡಿಮೆ ಅವಧಿಯಲ್ಲಿ ಬೆಕ್ಕನ್ನು ಗುರುತಿಸಬಹುದು. ಈ ಚಿತ್ರದಲ್ಲಿ ಡಿಶ್‌ವಾಶರ್‌ ಮೇಲಿರುವ ಚೀಲದೊಳಗೆ ಸದ್ದಿಲ್ಲದೆ ವಿಶ್ರಾಂತಿ ಪಡೆಯುತ್ತಿದೆ. ಈ ಕಳ್ಳ ಬೆಕ್ಕು ನಿಮ್ಮ ಕಣ್ಣಿಗೆ ಕಾಣಿಸಿತು ಎಂದು ಭಾವಿಸುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:17 am, Sun, 14 June 26

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More