Optical Illusion: ನಿಮ್ಮ ಕಣ್ಣಿಗೊಂದು ಸವಾಲ್;‌ ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಗಿಳಿಯನ್ನು ಹುಡುಕಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ ನಮ್ಮ ಮೆದುಳಿನ ಚುರುಕುತನ ಹಾಗೂ ದೃಷ್ಟಿ ತೀಕ್ಷ್ಣತೆಯನ್ನು ಪರೀಕ್ಷೆ ಮಾಡುತ್ತದೆ. ಇದೊಂದು ಮೋಜಿನ ಆಟವಾಗಿದ್ದು, ಇಂತಹ ಹತ್ತಾರು ಒಗಟಿನ ಆಟಗಳು ಪ್ರತಿನಿತ್ಯ ಹರಿದಾಡುತ್ತಿರುತ್ತವೆ. ಇದೀಗ ವೈರಲ್ ಆಗಿರುವ ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಗಿಳಿಯನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ.

Optical Illusion: ನಿಮ್ಮ ಕಣ್ಣಿಗೊಂದು ಸವಾಲ್;‌ ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಗಿಳಿಯನ್ನು ಹುಡುಕಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ
Image Credit source: Social Media

Updated on: Dec 26, 2025 | 10:24 AM

ಬುದ್ಧಿವಂತಿಕೆ ಮತ್ತು ದೃಷ್ಟಿ ತೀಕ್ಷ್ಣತೆ ಪರೀಕ್ಷಿಸಲು ನೀವು ಮುಂದಾಗಿದ್ರೆ ಈ ಇಲ್ಯೂಷನ್ ಚಿತ್ರವು ನಿಮ್ಮ ಸಹಾಯಕ್ಕೆ ಬರುತ್ತದೆ. ಈ ಒಗಟಿನ ಆಟಗಳು ಅಥವಾ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಅಂತಹದ್ದೇ ಚಿತ್ರವೊಂದು ಇದೀಗ ವೈರಲ್‌ ಆಗಿದ್ದು, ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಗಿಳಿಯನ್ನು ಕೇವಲ 7 ಸೆಕೆಂಡುಗಳಲ್ಲಿ ಹುಡುಕುವ ಮೂಲಕ ನಿಮ್ಮ ವೀಕ್ಷಣಾ ಸಾಮರ್ಥ್ಯ ತೀಕ್ಷ್ಣವಾಗಿದೆಯೇ ಎಂದು ಪರೀಕ್ಷಿಸಿಕೊಳ್ಳಿ.

ಈ ಚಿತ್ರವನ್ನೊಮ್ಮೆ ಸೂಕ್ಷ್ಮವಾಗಿ ನೋಡಿ

Optical Illusion Image

ನಿಮ್ಮ ಕಣ್ಣು ಸಖತ್‌ ಶಾರ್ಪ್‌ ಇದ್ದು, ಹದ್ದಿನ ಕಣ್ಣು ನಿಮ್ಮದಾಗಿದೆ ಎಂದಾದರೆ ಮಾತ್ರ ಈ ಚಿತ್ರದಲ್ಲಿ ಗಿಳಿಯನ್ನು ಹುಡುಕಲು ಸಾಧ್ಯ. ಈ ಚಿತ್ರದಲ್ಲಿ ಮಹಿಳೆಯೊಬ್ಬಳು ಮನೆಯ ಮುದ್ದಿನ ಶ್ವಾನವನ್ನು ಹಿಡಿದು ಕುಳಿತುಕೊಂಡಿದ್ದಾಳೆ. ಅಲ್ಲೇ ಪಕ್ಕದಲ್ಲಿ ಗಿಳಿಯೊಂದಿದೆ. ಈ ಪಕ್ಷಿಯನ್ನು 7 ಸೆಕೆಂಡುಗಳೊಳಗೆ ಕಂಡು ಹಿಡಿಯುವ ಸವಾಲು ನಿಮ್ಮ ಮುಂದಿದೆ. ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಮಾತ್ರ ಈ ಒಗಟು ಬಿಡಿಸಲು ಸಾಧ್ಯ.

ಇದನ್ನೂ ಓದಿ: ಈ ಚಿತ್ರದಲ್ಲಿರುವ ಅಣಬೆಯನ್ನು 30 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ

ಉತ್ತರ ಇಲ್ಲಿದೆ ನೋಡಿ

Optical Illusion Answer

ಎಷ್ಟೇ ಸೂಕ್ಷ್ಮವಾಗಿ ಗಮನಿಸಿದರೂ 7 ಸೆಕೆಂಡುಗಳ ಒಳಗಾಗಿ ಈ ಸವಾಲನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲವೇ. ನಿಮ್ಮ ಕಣ್ಣಿಗೆ ಮುದ್ದಾದ ಗಿಳಿಯೂ ಬಿದ್ದಿಲ್ಲವೇ. ಚಿಂತೆ ಬೇಡ ಇಲ್ಲಿದೆ ಉತ್ತರ. ಹೂವು ಕುಂಡದಲ್ಲಿರುವ ಸಣ್ಣ ಗಿಡದ ಮೇಲೆ ಗಿಳಿಯೊಂದು ಕುಳಿತುಕೊಂಡಿದೆ. ಈ ಮೇಲಿನ ಚಿತ್ರದಲ್ಲಿ ಗಿಳಿ ಎಲ್ಲಿದೆ ಎಂದು ಕೆಂಪು ಬಣ್ಣದಲ್ಲಿ ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Loading...
Unable to load recommendations.
Follow Us