Optical Illusion: ಜಸ್ಟ್ 15 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ಪಾರಿವಾಳವನ್ನು ಕಂಡು ಹಿಡಿಯಬಲ್ಲಿರಾ

ಒಗಟಿನ ಚಿತ್ರಗಳನ್ನು ಬಿಡಿಸುವುದು ಹೇಳುವಷ್ಟು ಸುಲಭವಲ್ಲ. ಕೆಲವರು ಕ್ಷರ್ಣಾಧದಲ್ಲಿ ಒಗಟು ಬಿಡಿಸಿ ಉತ್ತರ ಕಂಡು ಕೊಳ್ಳುತ್ತಾರೆ. ಇನ್ನು ಕೆಲವರಿಗೆ ಎಷ್ಟೇ ಪ್ರಯತ್ನ ಪಟ್ಟರೂ ಒಗಟು ಬಿಡಿಸಲು ಸಾಧ್ಯವಾಗಲ್ಲ.. ಇದೀಗ ಈ ಚಿತ್ರದಲ್ಲಿ ಅಡಗಿರುವ ಪಾರಿವಾಳವನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ. ಈ ಇಲ್ಯೂಷನ್ ಚಿತ್ರ ಬಿಡಿಸಲು ಸಾಧ್ಯವೇ ಎಂಬುವುದನ್ನು ನೋಡಿ.

Optical Illusion: ಜಸ್ಟ್ 15 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ಪಾರಿವಾಳವನ್ನು ಕಂಡು ಹಿಡಿಯಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ
Image Credit source: Social Media

Updated on: Jan 21, 2026 | 10:15 AM

ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳೇ ಹಾಗೆ, ನಮ್ಮನ್ನು ಗೊಂದಲಕ್ಕೀಡು ಮಾಡುತ್ತದೆ. ಕೆಲವೊಮ್ಮೆ ಈ ಒಗಟಿನ ಚಿತ್ರ ತಲೆಗೆ ಹುಳ ಬಿಡುತ್ತದೆ. ಎಷ್ಟೇ ಹರಸಾಹಸ ಪಟ್ಟರೂ ಉತ್ತರವಂತೂ ದೊರೆಯುವುದೇ ಇಲ್ಲ. ಇದೀಗ ಇಂತಹದ್ದೇ ಟ್ರಿಕ್ಕಿ ಒಗಟಿನ ಚಿತ್ರ ವೈರಲ್ ಆಗಿದೆ. ಈ ಚಿತ್ರದಲ್ಲಿರುವ ಸವಾಲು ಪಾರಿವಾಳವನ್ನು ಕಂಡು ಹಿಡಿಯುವುದು. 15 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯ ಇದೆಯೇ.

ಈ ಚಿತ್ರವು ಏನನ್ನು ಹೇಳುತ್ತದೆ?

ಇಲ್ಯೂಷನ್ ಚಿತ್ರ ನಿಮ್ಮ ಕಣ್ಣನ್ನು ಮೋಸಗೊಳಿಸುತ್ತದೆ. ಈ ಚಿತ್ರವು ಅದೇ ರೀತಿಯಿದ್ದು, ರಸ್ತೆ ಪಕ್ಕದಲ್ಲಿರುವ ದೊಡ್ಡ ದೊಡ್ಡ ಕಟ್ಟಡಗಳನ್ನು ನೀವು ನೋಡಬಹುದು. ಈ ರಸ್ತೆಯಲ್ಲಿ ಕಾರುಗಳು ಓಡಾಡುತ್ತಿದ್ದು, ಅವುಗಳ ಪಕ್ಕದಲ್ಲಿ ಲೈಟ್ ಕಂಬಗಳಿವೆ. ಇದೆಲ್ಲದರ ನಡುವೆ ಪಾರಿವಾಳವೊಂದಿದೆ. ಈ ಒಗಟು ಬಿಡಿಸಲು ನಿಮಗೆ ಹದಿನೈದು ಸೆಕೆಂಡುಗಳಷ್ಟು ಸಮಯವಿದೆ. ಈ ಸವಾಲನ್ನು ಸ್ವೀಕರಿಸಲು ಸಿದ್ಧವಿದ್ರೆ ನಿಮ್ಮ ಸಮಯ ಇದೀಗ ಆರಂಭವಾಗುತ್ತದೆ.

ಇದನ್ನೂ ಓದಿ: ಈ ಚಿತ್ರದಲ್ಲಿರುವ ಮೂರು ಮುಖಗಳನ್ನು ಗುರುತಿಸಿದ್ರೆ ನೀವು ಬುದ್ಧಿವಂತರು

ಪಾರಿವಾಳ ನಿಮ್ಮ ಕಣ್ಣಿಗೆ ಕಂಡಿತೇ?

ಇದು ಟ್ರಿಕ್ಕಿ ಒಗಟಿನ ಚಿತ್ರವಾಗಿರುವುದರಿಂದ ಇಲ್ಯೂಷನ್ ಚಿತ್ರ ಬಿಡಿಸುವುದು ಕಷ್ಟ. ನೀವು ಈ ಒಗಟನ್ನು ಬಿಡಿಸುವಲ್ಲಿ ವಿಫಲರಾಗಿದ್ದೀರಬಹುದು. ಸೋತೆ ಎಂದು ಹೆಚ್ಚು ಚಿಂತಿಸಬೇಡಿ. ಈ ಕೆಳಗಿನ ಫೋಟೋವನ್ನು ನೋಡಿ.. ಪಾರಿವಾಳ ಎಲ್ಲಿದೆ ಎಂದು ನಿಮಗೆ ತಿಳಿಯುತ್ತದೆ. ನೀವು ಈ ಚಿತ್ರದಲ್ಲಿ ಪಾರಿವಾಳವನ್ನು ನೋಡಿದ್ದೀರಿ ಎಂದು ಭಾವಿಸುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ