Optical Illusion: ನಿಮ್ಮ ಕಣ್ಣಿಗೊಂದು ಸವಾಲ್;‌ ಈ ಚಿತ್ರದಲ್ಲಿ ಅಡಗಿರುವ ಮೊಲವನ್ನು ಹುಡುಕಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ ಮೆದುಳಿನ ಚುರುಕುತನ ಹಾಗೂ ದೃಷ್ಟಿ ತೀಕ್ಷ್ಣತೆಯನ್ನು ಪರೀಕ್ಷಿಸಲು ಸಹಾಯ ಮಾಡುತ್ತದೆ. ಇಂತಹ ಒಗಟಿನ ಆಟವು ವೈರಲ್ ಆಗಿದ್ದು, ಈ ಚಿತ್ರದಲ್ಲಿ ಮೊಲ ಎಲ್ಲಿದೆ ಎಂದು ಕಂಡು ಹಿಡಿಯುವುದೇ ನಿಮ್ಮ ಮುಂದಿರುವ ಸವಾಲು. ನಿರ್ದಿಷ್ಟ ಸಮಯದೊಳಗೆ ಈ ಒಗಟು ಬಿಡಿಸಲು ಪ್ರಯತ್ನಿಸಿ.

Optical Illusion: ನಿಮ್ಮ ಕಣ್ಣಿಗೊಂದು ಸವಾಲ್;‌ ಈ ಚಿತ್ರದಲ್ಲಿ ಅಡಗಿರುವ ಮೊಲವನ್ನು ಹುಡುಕಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ,
Image Credit source: Social Media

Updated on: Feb 22, 2026 | 4:22 PM

ಬುದ್ಧಿವಂತಿಕೆ ಮತ್ತು ದೃಷ್ಟಿ ತೀಕ್ಷ್ಣತೆ ಪರೀಕ್ಷಿಸಲು ನೀವು ಮುಂದಾಗಿದ್ರೆ ಈ ಇಲ್ಯೂಷನ್ ಚಿತ್ರವು ನೂರಕ್ಕೆ ನೂರರಷ್ಟು ನಿಮ್ಮ ಸಹಾಯಕ್ಕೆ ಬರುತ್ತದೆ. ಈ ಒಗಟಿನ ಆಟಗಳು ಅಥವಾ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಅಂತಹದ್ದೇ ಚಿತ್ರವೊಂದು ಇದೀಗ ವೈರಲ್‌ ಆಗಿದ್ದು, ಈ ಚಿತ್ರದಲ್ಲಿ ಮೊಲವನ್ನು ಕಂಡು ಹಿಡಿಯಬೇಕು. 5 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಿ.

ಈ ಚಿತ್ರದಲ್ಲಿ ಏನು ಕಾಣಿಸುತ್ತದೆ?

ಈ ಮೋಜಿನ ಆಟಗಳ ಮೂಲಕ ಕಣ್ಣುಗಳು ಮತ್ತು ಬುದ್ಧಿಯೂ ಎಷ್ಟು ಚುರುಕಾಗಿದೆ ಎಂದು ತಿಳಿಯಲು ಸಾಧ್ಯ. ಈ ಚಿತ್ರದಲ್ಲಿ ನಿಮ್ಮ ಕಣ್ಣಿಗೆ ಕಾಣಿಸುವುದೇ ಸೈಕಲ್. ಇಲ್ಲಿರುವ ಮರದ ಪಕ್ಕದಲ್ಲಿ ಸೈಕಲ್ ಬಿದ್ದಿದೆ. ಆದರೆ, ಇಲ್ಲಿ ಮೊಲವೂ ಇದೆ. ಈ ಪೋಟೋದಲ್ಲಿರುವ ಸವಾಲು ಮೊಲ ಎಲ್ಲಿದೆ ಎಂಬುದನ್ನು ಗುರುತಿಸುವುದು. ನೀವು 5 ಸೆಕೆಂಡುಗಳಲ್ಲಿ ಮೊಲವನ್ನು ಹುಡುಕಲು ಸಾಧ್ಯವಾದರೆ, ನಿಮ್ಮ ವೀಕ್ಷಣಾ ಕೌಶಲ್ಯಕ್ಕೆ ನೀವು ಹ್ಯಾಟ್ಸ್ ಆಫ್ ಹೇಳುತ್ತೇವೆ.

ಇದನ್ನೂ ಓದಿ: ನಿಮ್ಮ ಕಣ್ಣಿಗೊಂದು ಸವಾಲ್; ಈ ಎರಡು ಚಿತ್ರಗಳಲ್ಲಿನ ವ್ಯತ್ಯಾಸ ಗುರುತಿಸಬಲ್ಲಿರಾ

ಮೊಲವು ನಿಮ್ಮ ಕಣ್ಣಿಗೆ ಕಾಣಿಸಿತೇ?

ಇಲ್ಯೂಷನ್ ಚಿತ್ರದಲ್ಲಿ ಅಡಗಿರುವ ಗುಪ್ತ ವಸ್ತುಗಳನ್ನು ಹುಡುಕುವುದು ಅಷ್ಟು ಸುಲಭವಲ್ಲ. ಈ ಒಗಟನ್ನು ಬಿಡಿಸುವಾಗಲು ನಿಮಗೆ ಅಂತಹದ್ದೇ ಅನುಭವವಾಗಿರುತ್ತದೆ. ಈ ಚಿತ್ರದಲ್ಲಿ ನಿಮಗೆ ಮೊಲ ಕಾಣಿಸಿತೇ, ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ. ಈ ಕೆಳಗಿನ ಚಿತ್ರದಲ್ಲಿ ಮೊಲ ಎಲ್ಲಿದೆ ಎಂದು ನಾವು ನಿಮಗೆ ಹೇಳುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Published On - 4:21 pm, Sun, 22 February 26

ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Follow Us