AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಬುದ್ಧಿವಂತರಿಗೊಂದು ಸವಾಲ್;‌ ಜಸ್ಟ್ 9 ಸೆಕೆಂಡುಗಳಲ್ಲಿ ಈ ಗಾರ್ಡನ್‌ನಲ್ಲಿರುವ ಚಿಟ್ಟೆಯನ್ನು ಗುರುತಿಸಬಲ್ಲಿರಾ

ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಟ್ರೆಂಡಿಂಗ್ ಆಗುತ್ತಿದೆ. ಹೀಗಾಗಿ ಹೆಚ್ಚಿನವರು ಈ ಚಿತ್ರಗಳತ್ತ ಸಹಜವಾಗಿ ಗಮನ ಹರಿಸುತ್ತಾರೆ. ಆದರೆ ಈ ಟ್ರಿಕ್ಕಿ ಚಿತ್ರಗಳು ಬುದ್ಧಿವಂತಿಕೆ ಹಾಗೂ ದೃಷ್ಟಿ ಸಾಮರ್ಥ್ಯವನ್ನು ಪರೀಕ್ಷಿಸುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಇದೀಗ ಇಂತಹದೊಂದು ಚಿತ್ರ ವೈರಲ್ ಆಗಿದ್ದು ಉದ್ಯಾನವನದಲ್ಲಿರುವ ಬಣ್ಣದ ಚಿಟ್ಟೆಯನ್ನು ಕಂಡು ಹಿಡಿಯಬೇಕು. ಈ ಒಗಟು ಬಿಡಿಸಲು ನೀವು ರೆಡಿನಾ.

Optical Illusion: ಬುದ್ಧಿವಂತರಿಗೊಂದು ಸವಾಲ್;‌ ಜಸ್ಟ್ 9 ಸೆಕೆಂಡುಗಳಲ್ಲಿ ಈ ಗಾರ್ಡನ್‌ನಲ್ಲಿರುವ ಚಿಟ್ಟೆಯನ್ನು ಗುರುತಿಸಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: alamy.com
ಸಾಯಿನಂದಾ
|

Updated on:Apr 21, 2026 | 11:13 AM

Share

ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಬ್ರೈನ್ ಟೀಸರ್ ಸೇರಿದಂತೆ ಪಝಲ್‌ಗಳನ್ನು ಬಿಡಿಸುವುದು ಹೇಳಿದ್ದಷ್ಟು ಸುಲಭವಲ್ಲ. ಇಂತಹ ಒಗಟಿನ ಆಟಗಳು ನಿಮ್ಮ ದೃಷ್ಟಿ ಹಾಗೂ ಬುದ್ಧಿವಂತಿಕೆಗೆ ಸವಾಲು ಎಸೆದು ತಾಳ್ಮೆಯನ್ನು ಪರೀಕ್ಷಿಸುತ್ತವೆ. ಇದೀಗ ನಿಮ್ಮ ವೀಕ್ಷಣಾ ಕೌಶಲ್ಯವನ್ನು ಪರೀಕ್ಷಿಸುವ ಸಮಯ. ಈ ಇಲ್ಯೂಷನ್ ಚಿತ್ರದಲ್ಲಿ ಬಣ್ಣದ ಚಿಟ್ಟೆಯೊಂದಿದೆ. ನೀವು ಒಂಬತ್ತು ಸೆಕೆಂಡುಗಳೊಳಗೆ ಚಿಟ್ಟೆಯನ್ನು ಗುರುತಿಸಬೇಕು. ನೀವು ಈ ಒಗಟು ಬಿಡಿಸಲು ರೆಡಿ ಇದ್ರೆ, ಈ ಚಿತ್ರದತ್ತ ಒಮ್ಮೆ ಗಮನ ಹರಿಸಿ.

ಈ ಚಿತ್ರ ನೋಡಿದಾಗ ಏನು ಕಾಣಿಸಿತು ?

ಇದೀಗ ವೈರಲ್ ಆಗಿರುವ ಇಲ್ಯೂಷನ್ ಚಿತ್ರದಲ್ಲಿ ಹಚ್ಚ ಹಸಿರಿನಿಂದ ಕೂಡಿದ ಉದ್ಯಾನವನವನ್ನು ಕಾಣಬಹುದು. ಇಲ್ಲಿ ಹಚ್ಚಹಸಿರಿನಿಂದ ಕೂಡಿದ ಮರಗಳು ಸಸ್ಯಗಳು ಹಾಗೂ ಬಣ್ಣ ಬಣ್ಣದ ಹೂವುಗಳು ಗೋಚರಿಸುತ್ತವೆ. ಆದರೆ ಈ ಗಾರ್ಡನ್‌ನಲ್ಲಿ ಬಣ್ಣದ ಚಿಟ್ಟೆಯಿದೆ. ನೀವು ಹತ್ತಿರದಿಂದ ನೋಡಿದರೆ ಮಾತ್ರ ಆ ಚಿಟ್ಟೆಯನ್ನು ಗುರುತಿಸಲು ಸಾಧ್ಯ. ನಿರ್ದಿಷ್ಟ ಸಮಯದೊಳಗೆ ಈ ಒಗಟು ಬಿಡಿಸಿ. ನೀವೀಗ ಈ ಸವಾಲನ್ನು ಸ್ವೀಕರಿಸಿದ್ದೀರಾ ಎಂದು ಭಾವಿಸುತ್ತೇವೆ.

ಇದನ್ನೂ ಓದಿ: ಈ ಚಿತ್ರದಲ್ಲಿ ಹುಲಿಗಳ ನಡುವೆ ಅಡಗಿರುವ ಜೀಬ್ರಾವನ್ನು ಕಂಡು ಹಿಡಿಯಬಲ್ಲಿರಾ

ಬಣ್ಣದ ಚಿಟ್ಟೆಯನ್ನು ಗುರುತಿಸಲು ಸಾಧ್ಯವಾಯಿತೇ?

ಇಲ್ಯೂಷನ್ ಚಿತ್ರಗಳನ್ನು ಬಿಡಿಸುವುದು ಅಷ್ಟು ಸುಲಭವಲ್ಲ. ನಿಮ್ಮ ಕಣ್ಣನ್ನು ಮೋಸಗೊಳಿಸಿ ನಿಮ್ಮ ಏಕಾಗ್ರತೆಯನ್ನು ಬೇರೆಡೆ ಸೆಳೆಯುತ್ತದೆ. ಈ ಚಿತ್ರ ನೋಡಿದಾಗ ನಿಮಗೂ ಕೂಡ ಹಾಗೆಯೇ ಆಗಿದ್ದೀರಬಹುದು. ಎಷ್ಟೇ ಪ್ರಯತ್ನಿಸಿದರೂ ಚಿಟ್ಟೆ ಕಣ್ಣಿಗೆ ಬಿದ್ದಿಲ್ಲವೇ, ನಿಮ್ಮ ಕಣ್ಣಿಗೆ ಒತ್ತಡ ಹಾಕಬೇಡಿ. ನಿಧಾನವಾಗಿ ಪ್ರತಿಯೊಂದು ಮೂಲೆಯತ್ತ ಕಣ್ಣುಹಾಯಿಸಿ. ಒಂದು ವೇಳೆ ಚಿಟ್ಟೆ ಕಾಣಿಸಿಲ್ಲ ಎಂದಾದರೆ ಚಿಂತಿಸಬೇಡಿ. ನಾವೇ ನಿಮಗೆ ಈ ಕೆಳಗಿನ ಚಿತ್ರದಲ್ಲಿ ಚಿಟ್ಟೆ ಎಲ್ಲಿದೆ ಎಂದು ಗುರುತಿಸಿದ್ದೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:30 pm, Thu, 2 April 26

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ