AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಹಚ್ಚ ಹಸಿರಿನ ಗಿಡಗಳ ನಡುವೆ ಅಡಗಿರುವ ಹಸಿರು ಹಾವನ್ನು ಗುರುತಿಸಬಲ್ಲಿರಾ?

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಮೆದುಳಿಗೆ ಕೆಲಸ ನೀಡುವುದು ಮಾತ್ರವಲ್ಲ, ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸಲು ಸಹಕಾರಿಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಒಗಟಿನ ಚಿತ್ರಗಳು ಸಾಕಷ್ಟು ಚಿತ್ರಗಳು ವೈರಲ್ ಆಗುತ್ತಿದ್ದು, ಇದೀಗ ನಿಮ್ಮ ಬುದ್ಧಿವಂತಿಕೆ ಪರೀಕ್ಷಿಸಲು ಒಳ್ಳೆಯ ಸಮಯ. ಹಚ್ಚಹಸಿರಿನ ಗಿಡಗಳ ನಡುವೆ ಇರುವ ಹಸಿರು ಹಾವನ್ನು ಪತ್ತೆ ಹಚ್ಚುವ ಸವಾಲು ಇಲ್ಲಿದೆ.

Optical Illusion: ಹಚ್ಚ ಹಸಿರಿನ ಗಿಡಗಳ ನಡುವೆ ಅಡಗಿರುವ ಹಸಿರು ಹಾವನ್ನು ಗುರುತಿಸಬಲ್ಲಿರಾ?
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: imgur.com
ಸಾಯಿನಂದಾ
|

Updated on: Jun 02, 2026 | 3:21 PM

Share

ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಬಹಳಷ್ಟು ಜನಪ್ರಿಯತೆ ಗಳಿಸುತ್ತಿವೆ. ಬಿಡುವು ಸಿಕ್ಕಾಗಲೆಲ್ಲಾ ಇಂತಹ ಒಗಟಿನ ಚಿತ್ರ ಬಿಡಿಸಲು ಹೆಚ್ಚಿನವರು ಇಷ್ಟ ಪಡುತ್ತಿದ್ದಾರೆ. ಇದೀಗ ವೈರಲ್ ಆಗಿರುವ ಇಲ್ಯೂಷನ್ ಚಿತ್ರವು ಟ್ರಿಕ್ಕಿಯಾಗಿದೆ. ಮೆದುಳನ್ನು ಚುರುಕುಗೊಳಿಸುವ ಈ ಚಿತ್ರದಲ್ಲಿ ಹಚ್ಚ ಹಸಿರಿನ ಹಾವು ಅಡಗಿ ಕುಳಿತಿದೆ. ನೀವು ಈ ಖತರ್ನಾಕ್ ಹಾವನ್ನು ಹತ್ತು ಸೆಕೆಂಡುಗಳೊಳಗೆ ಪತ್ತೆ ಹಚ್ಚಬೇಕು.

ಈ ಚಿತ್ರದಲ್ಲಿ ನಿಮಗೇನು ಕಾಣಿಸಿತು?

ಆಪ್ಟಿಕಲ್‌ ಇಲ್ಯೂಷನ್‌ ನೋಡುವಷ್ಟು ಸುಲಭವಲ್ಲ. ಈ ಚಿತ್ರದಲ್ಲಿ ನಿಮ್ಮ ಕಣ್ಣಿಗೆ ಬೀಳುವುದೇ ಹಚ್ಚ ಹಸಿರಿನ ಗಿಡಗಳು. ಇಲ್ಲಿ ಎಲ್ಲವೂ ಸಾಮಾನ್ಯವಾಗಿ ಕಂಡರೂ ಈ ಹಸಿರು ಹಾವು ಜಾಣತನದಿಂದ ಎಲೆಗಳ ನಡುವೆ ಅಡಗಿ ಕುಳಿತುಕೊಂಡಿದೆ. ಈ ಹಾವಿನ ಬಣ್ಣವು ಸುತ್ತಮುತ್ತಲಿನ ಪ್ರದೇಶಗಳೊಂದಿಗೆ ಸಂಪೂರ್ಣವಾಗಿ ಬೆರೆತು ಹೋಗಿದ್ದು ನಿಮಗೆ ಗುರುತಿಸಲು ಕಷ್ಟವಾಗಬಹುದು. ಈ ಒಗಟು ಕೇವಲ 10 ಸೆಕೆಂಡುಗಳಲ್ಲಿ ಪೂರ್ಣಗೊಳಿಸಲು ಸವಾಲು ಹಾಕಲಾಗಿದೆ. ನೀವು ಈ ಸವಾಲನ್ನು ಸ್ವೀಕರಿಸಿದ್ದೀರಿ ಎಂದು ಭಾವಿಸುತ್ತೇವೆ.

ಇದನ್ನೂ ಓದಿ: ನೀವು ಜಾಣರೇ, ಈ ಚಿತ್ರದಲ್ಲಿರುವ HOG ಪದವನ್ನು 10 ಸೆಕೆಂಡುಗಳಲ್ಲಿ ಕಂಡು ಹಿಡಿಯುವಿರಾ?

ಹಸಿರು ಹಾವು ನಿಮ್ಮ ಕಣ್ಣಿಗೆ ಬಿದ್ದಿತೇ?

ನೂರು ಜನರಲ್ಲಿ ಐದು ಜನರು ಮಾತ್ರ ನಿಗದಿತ ಸಮಯದಲ್ಲಿ ಈ ಹಾವನ್ನು ಗುರುತಿಸಲು ಸಾಧ್ಯ. ನೀವು ಕೂಡ ಛಲ ಬಿಡದೇ ಪ್ರಯತ್ನಿಸಿ. ಹಾವು ನಿಮ್ಮ ಕಣ್ಣಿಗೆ ಬಿದ್ದಿಲ್ಲವಾದರೆ ಚಿಂತಿಸಬೇಡಿ. ನಾವೇ ನಿಮಗೆ ಹಾವು ಎಲ್ಲಿದೆ ಎಂದು ಹೇಳುತ್ತೇವೆ. ಈ ಕೆಳಗಿನ ಚಿತ್ರವನ್ನು ಗಮನಿಸಿ, ನಿಮ್ಮ ಕಣ್ಣಿಗೆ ಹಸಿರು ಹಾವು ಕಾಣಿಸುತ್ತದೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More