Optical Illusion: ನೀವು ಬುದ್ಧಿವಂತರಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಪಾಂಡವನ್ನು ಕಂಡು ಹಿಡಿಯಿರಿ

ಆಪ್ಟಿಕಲ್‌ ಇಲ್ಯೂಷನ್‌ ಒಗಟಿನ ಚಿತ್ರಗಳನ್ನು ಬಿಡಿಸುವುದಲ್ಲಿರುವ ಮಜಾನೇ ಬೇರೆ. ಕೆಲವರಿಗೆ ಈ ಟ್ರಿಕ್ಕಿ ಒಗಟುಗಳನ್ನು ಬಿಡಿಸುವುದು ಇಷ್ಟ, ಇನ್ನು ಕೆಲವರಿಗೆ ಕಷ್ಟ. ಈ ಜನರ ಗುಂಪಿನ ನಡುವೆ ಅಡಗಿ ಕುಳಿತಿರುವ ಪಾಂಡವನ್ನು ಹತ್ತು ಸೆಕೆಂಡುಗಳಲ್ಲಿ ಕಂಡು ಹಿಡಿಯುವ ಸವಾಲು ನೀಡಲಾಗಿದೆ. ಈ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯವೇ.

Optical Illusion: ನೀವು ಬುದ್ಧಿವಂತರಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಪಾಂಡವನ್ನು ಕಂಡು ಹಿಡಿಯಿರಿ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ
Image Credit source: kurir.mk

Updated on: May 14, 2026 | 10:48 AM

ಪ್ರತಿನಿತ್ಯ ಸೋಶಿಯಲ್ ಮೀಡಿಯಾದಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (optical illusion) ಒಗಟಿನ ಚಿತ್ರಗಳನ್ನು ಬಿಡಿಸುತ್ತ ಕುಳಿತರೆ ಸಮಯ ಕಳೆದಿದ್ದೇ ತಿಳಿಯುವುದಿಲ್ಲ. ಕೆಲವರು ಕ್ಷಣಾರ್ಧದಲ್ಲಿ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳುತ್ತಾರೆ. ಆದರೆ, ಈ ಚಿತ್ರಗಳು ನಿಮ್ಮ ದೃಷ್ಟಿ ಸಾಮರ್ಥ್ಯ ಹಾಗೂ ಬುದ್ಧಿವಂತಿಕೆಗೆ ಸವಾಲೊಡ್ದುತ್ತವೆ. ಇದೀಗ ಈ ಚಿತ್ರದಲ್ಲಿ ಜನರ ಹಿಂಡು ಇದೆ. ಈ ಜನರ ನಡುವೆ ಪಾಂಡವೊಂದು ಅಡಗಿ ಕುಳಿತಿದೆ. ಈ ಪ್ರಾಣಿಯನ್ನು ಕಂಡು ಹಿಡಿಯುವ ಸವಾಲು ನಿಮ್ಮ ಮುಂದಿದೆ. ನಿರ್ದಿಷ್ಟ ಸಮಯದೊಳಗೆ ಈ ಒಗಟು ಬಿಡಿಸಲು ಪ್ರಯತ್ನಿಸಿ.

ಈ ಚಿತ್ರ ನೋಡಿದಾಗ ನಿಮಗೆ ಏನು ಅನಿಸಿತು?

ಟ್ರಿಕ್ಕಿ ಒಗಟಿನ ಚಿತ್ರ ಬಿಡಿಸುವುದು ಅಷ್ಟು ಸುಲಭವಲ್ಲ. ಈ ಒಗಟು ಅಷ್ಟೇ ಸವಾಲಿನದ್ದಾಗಿದೆ. ಈ ಚಿತ್ರದಲ್ಲಿ ನೀವು ಜನರ ಗುಂಪನ್ನು ನೋಡುತ್ತೀರಿ. ಈ ಜನರ ನಡುವೆ ಪಾಂಡವೊಂದು ಅಡಗಿದೆ. ನೀವು 10 ಸೆಕೆಂಡುಗಳ ಒಳಗೆ ಸರಿಯಾದ ಉತ್ತರ ಹೇಳಿದರೆ ನಿಮ್ಮ ವೀಕ್ಷಣಾ ಕೌಶಲ್ಯಕ್ಕೆ ಅತ್ಯುತ್ತಮವಾಗಿದೆ ಎಂದರ್ಥ. ನೀವು ಈ ಸವಾಲಿಗೆ ಸಿದ್ಧರಿದ್ದರೆ, ನಿಮ್ಮ ಸಮಯ ಈಗ ಪ್ರಾರಂಭವಾಗುತ್ತದೆ.

ಇದನ್ನೂ ಓದಿ: ನಿಮ್ಮ ಕಣ್ಣಿಗೊಂದು ಸವಾಲ್; ಶ್ವಾನಗಳ ನಡುವೆ ಇರುವ ಚಿನ್ನದ ನಾಣ್ಯವನ್ನು ಗುರುತಿಸಬಲ್ಲಿರಾ

ಪಾಂಡ ನಿಮ್ಮ ಕಣ್ಣಿಗೆ ಕಾಣಿಸಿತೇ?

ನಿರ್ದಿಷ್ಟ ಸಮಯದೊಳಗೆ ಈ ಚಿತ್ರದಲ್ಲಿ ಅಡಗಿರುವ ಪಾಂಡವನ್ನು ಹುಡುಕಿ ಒಗಟು ಬಿಡಿಸಲು ಸಾಧ್ಯವಾಗಿದ್ದರೆ ನಿಮಗೆ ಅಭಿನಂದನೆಗಳು. ನಿಮಗೆ ಈ ಪ್ರಾಣಿ ಕಣ್ಣಿಗೆ ಬಿದ್ದಿಲ್ಲವಾದರೆ ಹೆಚ್ಚು ಚಿಂತಿಸಬೇಡಿ. ಕೆಳಗೆ ನೀಡಲಾದ ಚಿತ್ರದಲ್ಲಿ ಪಾಂಡ ಇರುವ ಸ್ಥಳವನ್ನು ಕೆಂಪು ವೃತ್ತದಲ್ಲಿ ಗುರುತಿಸಿದ್ದೇವೆ. ನಿಮ್ಮ ಕಣ್ಣಿಗೆ ಪಾಂಡ ಕಾಣಿಸಿತು ಎಂದು ಭಾವಿಸುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published On - 10:47 am, Thu, 14 May 26

Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Follow Us