AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಈ ಚಿತ್ರದಲ್ಲಿ ಅಡಗಿರುವ ಮೀನನ್ನು ಹುಡುಕಿದ್ರೆ ನೀವು ಬುದ್ಧಿವಂತರು

ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳನ್ನು ಬಿಡಿಸುವವರ ಸಂಖ್ಯೆ ಹೆಚ್ಚಾಗಿದೆ. ಈ ಟ್ರಿಕ್ಕಿ ಚಿತ್ರಗಳು ನಿಮ್ಮ ಬುದ್ಧಿವಂತಿಕೆ ಹಾಗೂ ದೃಷ್ಟಿ ಸಾಮರ್ಥ್ಯವನ್ನು ಪರೀಕ್ಷಿಸುತ್ತದೆ. ಇದೀಗ ಇಂತಹದೊಂದು ಚಿತ್ರ ವೈರಲ್ ಆಗಿದೆ. ಹಳ್ಳಿಯ ಸುಂದರ ನೋಟ ಬೀರುವ ಚಿತ್ರದಲ್ಲಿ ಅಡಗಿರುವ ಮೀನನ್ನು ಹುಡುಕಬೇಕು. ಈ ಒಗಟು ಬಿಡಿಸಲು ನೀವು ರೆಡಿ ಇದ್ರೆ, ಈ ಚಿತ್ರದತ್ತ ಒಮ್ಮೆ ಗಮನ ಹರಿಸಿ.

Optical Illusion: ಈ ಚಿತ್ರದಲ್ಲಿ ಅಡಗಿರುವ ಮೀನನ್ನು ಹುಡುಕಿದ್ರೆ ನೀವು ಬುದ್ಧಿವಂತರು
ಆಪ್ಟಿಕಲ್‌ ಇಲ್ಯೂಷನ್‌Image Credit source: Social Media
ಸಾಯಿನಂದಾ
|

Updated on: Dec 07, 2025 | 10:22 AM

Share

ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಬ್ರೈನ್ ಟೀಸರ್‌ನಂತಹ ಒಗಟಿನ ಚಿತ್ರಗಳು ನೋಡಲು ಸುಲಭವಾಗಿ ಕಂಡರೂ ಬಿಡಿಸುವುದು ತುಂಬಾನೇ ಕಷ್ಟ. ಇಂತಹ ಒಗಟಿನ ಆಟಗಳು ನಿಮ್ಮ ದೃಷ್ಟಿ ಹಾಗೂ ಬುದ್ಧಿಗೆ ಸವಾಲು ಎಸೆಯುತ್ತದೆ. ಈ ಚಿತ್ರದಲ್ಲಿ ಮೀನು ಎಲ್ಲಿದೆ ಎಂದು ಹೇಳುವ ಸವಾಲು ನಿಮಗೆ ನೀಡಲಾಗಿದೆ. ಹತ್ತು ಜನರಲ್ಲಿ ಒಬ್ಬರಿಗೆ ಮಾತ್ರ ಈ ಒಗಟನ್ನು ಬಿಡಿಸಲು ಸಾಧ್ಯವಿದ್ದು ಈ ಒಗಟು ಬಿಡಿಸಲು ನೀವು ರೆಡಿನಾ.

ಈ ಚಿತ್ರದಲ್ಲಿ ಏನಿದೆ?

Optical Illusion Photo

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರವನ್ನು ನೀವು ಮೊದಲು ನೋಡಿದಾಗ ನಿಮಗೆ ಹಳ್ಳಿಯ ಚಿತ್ರಣವು ಕಾಣಿಸುತ್ತದೆ. ಬೇಲಿಯ ಬಳಿ ವ್ಯಕ್ತಿಯೊಬ್ಬ ಕೋಲು ಹಿಡಿದು ನಿಂತಿದ್ದು, ಅವನ ಜತೆ ನಾಯಿಯೂ ಇದೆ. ಮರಗಳು, ಮರದ ಸೇತುವೆ ಹಾಗೂ ಶಾಂತವಾಗಿ ಹರಿಯುತ್ತಿರುವ ನದಿಯನ್ನು ನೀವು  ಕಾಣಬಹುದು. ದೂರದಲ್ಲಿ ಹಬ್ಬಿಕೊಂಡಿರುವ ಬೆಟ್ಟಗಳನ್ನು ನೋಡಬಹುದು. ಹಳ್ಳಿಗಾಡಿನ ಐತಿಹಾಸಿಕ ನೋಟವನ್ನು ಬೀರುವ ಈ ಚಿತ್ರದಲ್ಲಿ ಮೀನನ್ನು ಜಾಣತನದಿಂದ ಮರೆ ಮಾಡಲಾಗಿದೆ. ಏಳು ಸೆಕೆಂಡುಗಳಲ್ಲಿ ಮೀನನ್ನು ಗುರುತಿಸಿ ನಿಮ್ಮ ವೀಕ್ಷಣಾ ಸಾಮರ್ಥ್ಯ ಅತ್ಯುತ್ತಮವಾಗಿದೆ ಎಂದು ಖಚಿತ ಪಡಿಸಿಕೊಳ್ಳಿ.

ಇದನ್ನೂ ಓದಿ: ಈ ಚಿತ್ರದಲ್ಲಿ ಅಡಗಿರುವ ಕಳ್ಳ ಬೆಕ್ಕನ್ನು ಹುಡುಕಬಲ್ಲಿರಾ?

ಮೀನು ನಿಮ್ಮ ಕಣ್ಣಿಗೆ ಕಾಣಿಸಿತೇ?

ಈ ಚಿತ್ರದತ್ತ ಕಣ್ಣುಹಾಯಿಸಿದರೂ ಮೀನು ನಿಮ್ಮ ಕಣ್ಣಿಗೆ ಮೀನು ಬಿದ್ದಿಲ್ಲವೇ. ವಿಂಟೇಜ್-ಸ್ಟೈಲ್‌ನ ಸವಾಲಿನ ಚಿತ್ರದಲ್ಲಿ ಮೀನು ಎಲ್ಲಿ ಅಡಗಿದೆ ಎಂದು ತಿಳಿಯಲು ನೀವು ಉತ್ಸುಕರಾಗಿದ್ದೀರಾ. ಈ ಚಿತ್ರವನ್ನು ಎಚ್ಚರಿಕೆಯಿಂದ ನೋಡಿ. ಎಡಭಾಗದಲ್ಲಿರುವ ಮರದ ಮಧ್ಯದಲ್ಲಿ ಮೀನನ್ನು ನೋಡಬಹುದು. ಈ ಚಿತ್ರದಲ್ಲಿ ಮೀನನ್ನು ಕೆಂಪು ಬಣ್ಣದಿಂದ ಗುರುತಿಸಿದ್ದೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ