AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ನಿಮ್ಮದು ಹದ್ದಿನ ಕಣ್ಣಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಕಳ್ಳ ಬೆಕ್ಕನ್ನು ಗುರುತಿಸಬಲ್ಲಿರಾ

ಕಣ್ಣು ಹಾಗೂ ಮೆದುಳಿಗೆ ಸವಾಲೊಡ್ದುವ ಕುತೂಹಲಕಾರಿ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳನ್ನು ಬಿಡಿಸುವುದು ಎಲ್ಲರಿಗೂ ಇಷ್ಟನೇ. ಆದರೆ ಇಂತಹ ಒಗಟಿನ ಆಟಗಳನ್ನು ಬಿಡಿಸಲು ಬುದ್ಧಿ ಖರ್ಚು ಮಾಡಬೇಕಾಗುತ್ತದೆ. ಇದೀಗ ಇಂತಹದ್ದೇ ಕಠಿಣ ಸವಾಲಿನ ಚಿತ್ರವೊಂದು ಇಲ್ಲಿದೆ. ಈ ಚಿತ್ರದಲ್ಲಿ ಕಳ್ಳ ಬೆಕ್ಕನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ. ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಿ.

Optical Illusion: ನಿಮ್ಮದು ಹದ್ದಿನ ಕಣ್ಣಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಕಳ್ಳ ಬೆಕ್ಕನ್ನು ಗುರುತಿಸಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: hindustantimes.com
ಸಾಯಿನಂದಾ
|

Updated on: Jun 12, 2026 | 10:38 AM

Share

ಆಪ್ಟಿಕಲ್‌ ಇಲ್ಯೂಷನ್‌ನಂತಹ (optical illusion) ಈ ಒಗಟಿನ ಚಿತ್ರಗಳು ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸಬಹುದು. ಹೀಗಾಗಿ ಈ ಒಗಟನ್ನು ಬಿಡಿಸಲು ಎಲ್ಲರಿಂದಲೂ ಸಾಧ್ಯವಿಲ್ಲ. ಹೆಚ್ಚಿನವರು ಈ ಒಗಟು ಬಿಡಿಸಲು ಸಾಧ್ಯವಿಲ್ಲ ಎಂದು ಸೋಲನ್ನು ಒಪ್ಪಿಕೊಳ್ಳುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ಕಳ್ಳ ಬೆಕ್ಕೊಂದು ಅಡಗಿ ಕುಳಿತಿದೆ. 15 ಸೆಕೆಂಡುಗಳಲ್ಲಿ ಈ ಬೆಕ್ಕನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ. ಈ ಒಗಟು ಬಿಡಿಸಲು ನೀವು ರೆಡಿ ಇದ್ದರೆ ನಿಮ್ಮ ಟೈಮ್ ಈಗಲೇ ಆರಂಭವಾಗುತ್ತದೆ.

ಈ ಚಿತ್ರದಲ್ಲಿ ಏನು ಕಾಣಿಸಿತು?

ಒಗಟಿನ ಆಟಗಳು ಮನೋರಂಜನೆಯನ್ನು ನೀಡುತ್ತದೆಯೋ ಹಾಗೆ ಯೋಚನಾ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ಚಿತ್ರವು ಡ್ರೈವ್‌ವೇಯಲ್ಲಿ ನಿಲ್ಲಿಸಿರುವ ಹೊಳಪುಳ್ಳ ಕಪ್ಪು ಬಣ್ಣದ ಎಸ್ ಯುವಿಯನ್ನು ಕಾಣಬಹುದು. ಅದರ ಸುತ್ತಲೂ ಅಂದಗೊಳಿಸಲಾದ ಹಸಿರು ಹುಲ್ಲುಹಾಸು, ಹಚ್ಚ ಹಸಿರಿನ ಮರಗಳು ಇವೆ. ಚಿತ್ರದ ಮುಂಭಾಗದಲ್ಲಿರುವ ಗೋಡೆಯ ಪಕ್ಕದಲ್ಲಿ ಹೂವಿನ ಕುಂಡ ಇರಿಸಲಾಗಿದೆ. ಈ ಕುಂಡದಲ್ಲಿ ವಿಶಿಷ್ಟವಾದ ಬಿಳಿ ಹೂವುಗಳನ್ನು ಹೊಂದಿರುವ ರೋಮಾಂಚಕ ಸಸ್ಯವಿದೆ. ಇಲ್ಲಿ ಕಳ್ಳ ಬೆಕ್ಕೊಂದು ಮರೆ ಮಾಡಿ ಕುಳಿತುಕೊಂಡಿದೆ. ಹದಿನೈದು ಸೆಕೆಂಡುಗಳೊಳಗೆ ಈ ಸಾಕು ಪ್ರಾಣಿಯನ್ನು ಹುಡುಕಲು ಪ್ರಯತ್ನಿಸಿ.

ಇದನ್ನೂ ಓದಿ: ನಿಮ್ಮ ಬುದ್ಧಿವಂತಿಕೆಗೊಂದು ಸವಾಲ್; ಈ ಪ್ರಶ್ನೆಯಲ್ಲೇ ಅಡಗಿರುವ ಉತ್ತರವನ್ನು ಹೇಳಬಲ್ಲಿರಾ?

ನಿಮ್ಮ ಕಣ್ಣಿಗೆ ಕಳ್ಳ ಬೆಕ್ಕು ಕಾಣಿಸಿತೇ?

ಅಬ್ಬಬ್ಬಾ ಎಷ್ಟೇ ಹುಡುಕಿದರೂ ಚಿತ್ರದಲ್ಲಿ ಅಡಗಿರುವ ಬೆಕ್ಕನ್ನು ಕಂಡು ಹಿಡಿಯಲು ಸಾಧ್ಯವಾಗುತ್ತಿಲ್ಲ ಎಂದು ತಲೆ ಕೆಡಿಸಿಕೊಳ್ಳಬೇಡಿ. ನೀವು ಅಡಗಿರುವ ಕಳ್ಳ ಬೆಕ್ಕನ್ನು ಗುರುತಿಸುವಲ್ಲಿ ಯಶಸ್ವಿಯಾಗಿದ್ದೀರಾ ಎಂದಾದ್ರೆ ನಿಮ್ಮದು ಹದ್ದಿನ ಕಣ್ಣು ಎಂದರ್ಥ. ಈ ಸಾಕು ಪ್ರಾಣಿ ನಿಮ್ಮ ಕಣ್ಣಿಗೆ ಕಾಣಿಸಿಲ್ಲ ಎಂದಾದರೆ ನಾವೇ ನಿಮಗೆ ಉತ್ತರ ಹೇಳುತ್ತೇವೆ. ಈ ಕೆಳಗಿನ ಚಿತ್ರದಲ್ಲಿ ಕಾರಿನ ಪಕ್ಕದಲ್ಲಿ ಬೆಕ್ಕು ಕುಳಿತುಕೊಂಡಿದೆ. ಈ ಕೆಳಗಿನ ಚಿತ್ರದಲ್ಲಿ ಕಪ್ಪು ಬಣ್ಣದ ಬೆಕ್ಕನ್ನು ಗುರುತಿಸಿರುವುದನ್ನು ನೀವು ಕಾಣಬಹುದು.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್