Optical Illusion: ಜಸ್ಟ್‌ 13 ಸೆಕೆಂಡುಗಳಲ್ಲಿ ಒಂದೇ ರೀತಿ ಕಾಣುವ ಈ ಎರಡು ಚಿತ್ರದಲ್ಲಿನ 3 ವ್ಯತ್ಯಾಸಗಳನ್ನು ಗುರುತಿಸಿ

ಪ್ರತಿನಿತ್ಯ ಸೋಷಿಯಲ್‌ ಮೀಡಿಯಾದಲ್ಲಿ ಮೆದುಳಿಗೆ ಕೆಲಸ ನೀಡುವ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ವೈರಲ್‌ ಆಗುತ್ತಿರುತ್ತವೆ. ಆದರೆ ಈ ಒಗಟಿನ ಚಿತ್ರ ಬಿಡಿಸುವುದರಲ್ಲಿ ಸುಸ್ತೋ ಸುಸ್ತು ಆಗಿರುತ್ತದೆ. ಕೆಲವರು ಇಂತಹ ಒಗಟುಗಳನ್ನು ಸಲೀಸಾಗಿ ಬಿಡಿಸುತ್ತಾರೆ. ಇದೀಗ ವೈರಲ್ ಆಗಿರುವ ಎರಡು ಚಿತ್ರಗಳ ನಡುವಿನ ವ್ಯತ್ಯಾಸವನ್ನು ಗುರುತಿಸುವ ಸವಾಲು ನೀಡಲಾಗಿದೆ. ಈ ಸವಾಲು ಸ್ವೀಕರಿಸಿ ಜಾಣರು ಎನಿಸಿಕೊಳ್ಳಿ.

Optical Illusion: ಜಸ್ಟ್‌ 13 ಸೆಕೆಂಡುಗಳಲ್ಲಿ ಒಂದೇ ರೀತಿ ಕಾಣುವ ಈ ಎರಡು ಚಿತ್ರದಲ್ಲಿನ 3 ವ್ಯತ್ಯಾಸಗಳನ್ನು ಗುರುತಿಸಿ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ
Image Credit source: Social Media

Updated on: Dec 19, 2025 | 9:54 AM

ಕೆಲವೊಮ್ಮೆ ನೀವು ನಿಮ್ಮ ಮೆದುಳು ಹಾಗೂ ಬುದ್ಧಿವಂತಿಕೆ ಎಷ್ಟಿದೆ ಎಂದು ಪರೀಕ್ಷಿಸಿಕೊಳ್ಳುವುದು ಅತ್ಯಗತ್ಯ. ಹೀಗಾದಾಗ ಈ ಆಪ್ಟಿಕಲ್‌ ಇಲ್ಯೂಷನ್‌ (optical illusion) ಚಿತ್ರಗಳತ್ತ ಗಮನ ಹರಿಸುವುದು ಉತ್ತಮ. ಈ ಚಿತ್ರಗಳಲ್ಲಿ ಕೆಲವೊಂದು ಟ್ರಿಕ್ಕಿ ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸಬಹುದು. ಇದೀಗ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ವೈರಲ್‌ ಆಗಿದೆ. ಎರಡು ಚಿತ್ರಗಳ ನಡುವೆ ಮೂರು ಸಣ್ಣ ವ್ಯತ್ಯಾಸಗಳಿವೆ. ಇಲ್ಲಿ ನಿಮಗಿರುವ ಸವಾಲು ಎಂದರೆ ಆ ವ್ಯತ್ಯಾಸಗಳನ್ನು ಕಂಡುಹಿಡಿಯುವುದು. ಈ ಒಗಟು ಬಿಡಿಸಲು ನಿಮಗೆ 13 ಸೆಕೆಂಡುಗಳು ಮಾತ್ರ ಇವೆ.

ಈ ಚಿತ್ರದಲ್ಲಿ ಏನಿದೆ ಎಂದು ಸೂಕ್ಷ್ಮವಾಗಿ ಗಮನಿಸಿ

ಕಣ್ಣನ್ನು ಮೋಸಗೊಳಿಸಿ, ಮೆದುಳಿಗೆ ಕೆಲಸ ನೀಡುವ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ಒಗಟಿನ ಚಿತ್ರ ಟ್ರಿಕ್ಕಿಯಾಗಿದೆ. ಈ ಬ್ಯಾರೆಲ್‌ನಲ್ಲಿ ಮೂರು ಸೇಬು ಹಣ್ಣುಗಳಂತೆ ಕಾಣುತ್ತದೆ. ಅದರ ಪಕ್ಕದಲ್ಲಿರುವ ಚಿತ್ರವೂ ಒಂದೇ ರೀತಿ ಇದೆ. ಆದರೆ ಎರಡು ಚಿತ್ರಗಳ ನಡುವೆ ಮೂರು ಸಣ್ಣ ವ್ಯತ್ಯಾಸಗಳಿವೆ. 13 ಸೆಕೆಂಡುಗಳಲ್ಲಿ ಈ ವ್ಯತ್ಯಾಸಗಳನ್ನು ಗುರುತಿಸುವ ಚಾಲೆಂಜ್ ನಿಮ್ಮ ಮುಂದಿದೆ. ಈ ಒಗಟು ಬಿಡಿಸಲು ಸಾಧ್ಯವೇ ಎಂದು ಒಮ್ಮೆ ಪ್ರಯತ್ನಿಸಿ.

ಇದನ್ನೂ ಓದಿ: ಈ ಚಿತ್ರದಲ್ಲಿ ಅವಿತು ಕುಳಿತಿರುವ ಇಲಿಯನ್ನು 5 ಸೆಕೆಂಡುಗಳಲ್ಲಿ ಕಂಡುಹಿಡಿಯುವಿರಾ

ಮೂರು ವ್ಯತ್ಯಾಸಗಳನ್ನು ಗುರುತಿಸಲು ಸಾಧ್ಯವಾಯಿತೇ?

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಭ್ರಮೆಯನ್ನುಂಟು ಮಾಡಬಹುದು. ಮೊದಲ ನೋಟದಲ್ಲೇ ನಿಮ್ಮನ್ನು ಮೋಸಗೊಳಿಸಬಹುದು. ಇಲ್ಲಿ ನೀಡಲಾಗಿರುವ ಎರಡು ಚಿತ್ರಗಳ ನಡುವಿನ ವ್ಯತ್ಯಾಸ ಕಂಡುಹಿಡಿಯುವುದು ಹೇಳಿದ್ದಷ್ಟು ಸುಲಭವಲ್ಲ. ಒಂದು ವೇಳೆ ಈ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯವಾಗಿಲ್ಲ ಎಂದಾದರೆ ಹೆಚ್ಚು ಚಿಂತಿಸ ಬೇಡಿ. ಈ ಕೆಳಗಿನ ಚಿತ್ರದಲ್ಲಿ ಮೂರು ವ್ಯತ್ಯಾಸಗಳನ್ನು ಕೆಂಪು ಬಣ್ಣದಲ್ಲಿ ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published On - 9:53 am, Fri, 19 December 25

Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Follow Us