AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರೈಲ್ವೆ ಹಳಿಯ ಮೇಲೆ ಸೈಕಲ್‌, ಸಿಲಿಂಡರ್ ಇಟ್ಟು ವಿಡಿಯೋ ಮಾಡಿದ ಯೂಟ್ಯೂಬರ್, ಲೈಕ್ಸ್‌, ವೀವ್ಸ್‌ಗಾಗಿ ಜನರ ಜೀವದ ಜತೆ ಚೆಲ್ಲಾಟ

ರೈಲ್ವೆ ಹಳಿಗಳ ಮೇಲೆ ಕಲ್ಲು, ರಾಡ್‌ ಇತ್ಯಾದಿ ಯಾವುದೇ ವಸ್ತುಗಳನ್ನು ಇಟ್ಟರೂ ವೇಗವಾಗಿ ಬರುವ ರೈಲು ಹಳಿ ತಪ್ಪಿ ಅಪಘಾತ ಸಂಭವಿಸುವ ಸಾಧ್ಯತೆ ಇರುತ್ತದೆ. ಈ ವಿಷಯ ಗೊತ್ತಿದ್ದರೂ ಇಲ್ಲೊಬ್ಬ ಯೂಟ್ಯೂಬರ್‌ ಹಣ, ಲೈಕ್ಸ್‌, ವೀವ್ಸ್‌ಗಾಗಿ ರೈಲು ಬರುವ ವೇಳೆಯಲ್ಲಿ ರೈಲ್ವೆ ಹಳಿಗಳ ಮೇಲೆ ಕಲ್ಲು, ಸೈಕಲ್‌, ಗ್ಯಾಸ್‌ ಸಿಲಿಂಡರ್ ಇತ್ಯಾದಿ ವಸ್ತುಗಳನ್ನು ಇಟ್ಟು ವಿಡಿಯೋ ಮಾಡಿದ್ದಾನೆ. ಈ ವಿಡಿಯೋ ಇದೀಗ ವೈರಲ್‌ ಆಗಿದ್ದು, ಹುಚ್ಚಾಟ ಮೆರೆದ ಈತ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

Video: ರೈಲ್ವೆ ಹಳಿಯ ಮೇಲೆ ಸೈಕಲ್‌, ಸಿಲಿಂಡರ್ ಇಟ್ಟು ವಿಡಿಯೋ ಮಾಡಿದ ಯೂಟ್ಯೂಬರ್, ಲೈಕ್ಸ್‌, ವೀವ್ಸ್‌ಗಾಗಿ ಜನರ ಜೀವದ ಜತೆ ಚೆಲ್ಲಾಟ
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Aug 01, 2024 | 6:35 PM

Share

ರೈಲ್ವೆ ಹಳಿಗಳ ಮೇಲೆ ಕಲ್ಲು ಇತ್ಯಾದಿ ಯಾವುದೇ ವಸ್ತುಗಳನ್ನು ಇಟ್ಟು ಮೋಜು ಮಸ್ತಿ ಮಾಡಬಾರದು ಎಂದು ಎಚ್ಚರಿಕೆಗಳನ್ನು ನೀಡಲಾಗುತ್ತಿರುತ್ತದೆ. ಹೀಗಿದ್ದರೂ ಕೆಲವೊಬ್ಬರು ರೈಲು ಬರುವ ಸಂದರ್ಭದಲ್ಲಿ ರೈಲ್ವೆ ಹಳಿಯ ಮೇಲೆ ಕಲ್ಲು, ರಾಡ್‌ ಇತ್ಯಾದಿ ವಸ್ತುಗಳನ್ನಿಟ್ಟು ಇಟ್ಟು ದುಶ್ಕೃತ್ಯ ಮೆರೆಯುತ್ತಿರುತ್ತಾರೆ. ಹೀಗೆ ರೈಲ್ವೆ ಹಳಿಗಳ ಮೇಲೆ ಇಂತಹ ವಸ್ತುಗಳನ್ನು ಇಟ್ಟಾಗ ವೇಗವಾಗಿ ಬರುವ ರೈಲು ಹಳಿ ತಪ್ಪಿ ಅಪಘಾತ ಸಂಭವಿಸುವ ಸಾಧ್ಯತೆ ಇರುತ್ತದೆ. ಇದರ ಕನಿಷ್ಠ ಜ್ಞಾನವೂ ಇಲ್ಲದೆ ಇಲ್ಲೊಬ್ಬ ಯೂಟ್ಯೂಬರ್‌ ಲೈಕ್ಸ್‌, ವೀವ್ಸ್‌, ಹಣಕ್ಕಾಗಿ ರೈಲಿನ ಮೇಲೆ ದೊಡ್ಡ ಕಲ್ಲುಗಳು, ಸೈಕಲ್‌, ಗ್ಯಾಸ್‌ ಸಿಲಿಂಡರ್‌ ಇಟ್ಟು ವಿಡಿಯೋ ಮಾಡಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದು, ಆತನ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಉತ್ತರ ಪ್ರದೇಶದ ಲಾಲ್ಗೋಪಾಲ್‌ಗಂಜ್‌ನ ಗುಲ್ಜಾರ್‌ ಶೇಖ್‌ ಎಂಬ ಯುವಕ ಯುಟ್ಯೂಬ್‌ನಲ್ಲಿ ಹಣ, ವೀವ್ಸ್‌ ಗಳಿಸಲು ರೈಲ್ವೆ ಟ್ರಾಕ್‌ ಮೇಲೆ ಸೈಕಲ್‌, ಗ್ಯಾಸ್‌ ಸಿಲಿಂಡರ್‌ ಇತ್ಯಾದಿ ವಸ್ತುಗಳನ್ನಿಟ್ಟು ಡೇಂಜರಸ್‌ ರೀಲ್ಸ್‌ ಮಾಡಿದ್ದಾನೆ. ತನ್ನ ಹುಚ್ಚಾಟಕ್ಕಾಗಿ ಸಾವಿರಾರು ಜೀವದ ಜೊತೆ ಆಟವಾಡಿದ ಈತನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

Trains Of India ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ಕುರಿತ ಪೋಸ್ಟ್‌ ಒಂದನ್ನು ಹಂಚಿಕೊಳ್ಳಲಾಗಿದ್ದು, “ಲೈಕ್ಸ್‌. ವೀವ್ಸ್‌ಗಾಗಿ ರೈಲ್ವೆ ಹಳಿ ಮೇಲೆ ಅಪಾಯಕಾರಿ ವಸ್ತುಗಳನ್ನಿಟ್ಟು ವಿಡಿಯೋ ಮಾಡಿ ಸಾವಿರಾರು ಜೀವಗಳ ಜೊತೆ ಆಟವಾಡಿದ ಈತವ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ. ವೈರಲ್‌ ವಿಡಿಯೋದಲ್ಲಿ ಈ ಯುವಕ ರೈಲು ಇನ್ನೇನು ಬರಬೇಕು ಎನ್ನುವಷ್ಟರಲ್ಲಿ ರೈಲ್ವೆ ಹಳಿಗಳ ಮೇಲೆ ಕೋಳಿ, ಕಲ್ಲುಗಳು, ಸೈಕಲ್‌, ಗ್ಯಾಸ್‌ ಸಿಲಿಂಡರ್‌ ಇಟ್ಟು ಡೇಂಜರಸ್‌ ವಿಡಿಯೋ ಮಾಡುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಅರರೇ… ಹಾವಿಗೂ ರೊಮ್ಯಾಂಟಿಕ್‌ ಲಿಪ್‌ ಕಿಸ್‌ ಕೊಟ್ಟ ಯುವಕ

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 1.4 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಜನರ ಪ್ರಾಣಕ್ಕೆ ಕುತ್ತು ತರುವ ಇಂತಹವರಿಗೆ ಕಠಿಣ ಶಿಕ್ಷೆಯಾಗಬೇಕುʼ ಎಂದು ಕಿಡಿ ಕಾರಿದ್ದಾರೆ. ಇನ್ನೊಬ್ಬ ಬಳಕೆದಾರರು ʼದಯವಿಟ್ಟು ಇವನನ್ನು ಬಂಧಿಸಿʼ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!