AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪ್ರೇಮಿಗಳ ದಿನದಂದು ಮಧುವಣಗಿತ್ತಿಯಂತೆ ಸಿಂಗಾರಗೊಂಡ ಓಯೋ…

ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ಹರಿದಾಡುತ್ತಿರುತ್ತವೆ. ಅವುಗಳಲ್ಲಿ ಕೆಲವು ದೃಶ್ಯಗಳು ಭಾವನಾತ್ಮಕವಾಗಿದ್ದರೆ, ಇನ್ನೂ ಕೆಲವು ವಿಡಿಯೋಗಳು ಹಾಸ್ಯಮಯವಾಗಿರುತ್ತದೆ. ಸದ್ಯ ಇದೇ ರೀತಿ ಇಲ್ಲೊಂದು ವಿಡಿಯೋ ಹರಿದಾಡುತ್ತಿದ್ದು, ಪ್ರೇಮಿಗಳ ದಿನದ ಹಿನ್ನೆಲೆಯಲ್ಲಿ ಮಧುವಣಗಿತ್ತಿಯಂತೆ ಸಿಂಗಾರಗೊಂಡ ಓಯೋ ರೂಮ್ ಒಂದರ ವಿಡಿಯೋ ತುಣುಕನ್ನು ಕಂಡು ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ.

Viral Video: ಪ್ರೇಮಿಗಳ ದಿನದಂದು ಮಧುವಣಗಿತ್ತಿಯಂತೆ ಸಿಂಗಾರಗೊಂಡ ಓಯೋ…
ಮಧುವಣಗಿತ್ತಿಯಂತೆ ಸಿಂಗಾರಗೊಂಡ ಓಯೋImage Credit source: Pinterest
ಮಾಲಾಶ್ರೀ ಅಂಚನ್​
| Edited By: |

Updated on: Feb 14, 2024 | 6:33 PM

Share

ಓಯೋ ರೂಮ್ ಬುಕ್ ಮಾಡುವುದು ನವಯುಗದ ಹೊಸ ಟ್ರೆಂಡ್ ಆಗಿದೆ. ಏಕಾಂತ ಬಯಸುವ ಜೋಡಿಗಳು ಓಯೋ ರೂಮ್ ಕಡೆಗೆ ಮುಖ ಮಾಡುತ್ತಾರೆ. ಅದರಲ್ಲೂ ಪ್ರೇಮಿಗಳ ದಿನದಂದು ಹೆಚ್ಚಿನವರು ತಮ್ಮ ಪ್ರೇಮಿಯೊಂದಿಗೆ ಉತ್ತಮ ಸಮಯವನ್ನು ಕಳೆಯಬೇಕೆಂದು ಓಯೋ ರೂಮ್ ಬುಕ್ ಮಾಡುತ್ತಾರೆ. ಕೆಲವು ಜೋಡಿಗಳು ಪ್ರೇಮಿಗಳ ದಿನದಂದು ರೊಮ್ಯಾಂಟಿಕ್ ತಾಣಗಳಿಗೆ ಪ್ರವಾಸ ಹೋದ್ರೆ, ಇನ್ನೂ ಕೆಲವು ಜೋಡಿಗಳು ಏಕಾಂತವಾಗಿ ಸಮಯ ಕಳೆಯಲು ಓಯೋ ರೂಮ್ ಕಡೆಗೆ ಮುಖ ಮಾಡುತ್ತಾರೆ. ಇದೀಗ ಪ್ರೇಮಿಗಳ ಈ ದಿನದಂದು, ಓಯೋ ರೂಮ್ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪ್ರೇಮಿಗಳ ದಿನದ ಹಿನ್ನೆಲೆಯಲ್ಲಿ ಯಾವುದೋ ಊರಿನ ಓಯೋ ರೂಮ್ ಅನ್ನು ಮಧುವಣಗಿತ್ತಿಯಂತೆ ಸಿಂಗರಿಸಲಾಗಿದ್ದು, ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವಂತಹ ವಿಡಿಯೋದಲ್ಲಿ ಪ್ರೇಮಿಗಳ ದಿನದ ಹಿನ್ನೆಲೆಯಲ್ಲಿ ಓಯೋ ರೂಮ್ ಒಂದನ್ನು ಭರ್ಜರಿಯಾಗಿ ಡೆಕೊರೇಷನ್ ಮಾಡಿರುವುದನ್ನು ಕಾಣಬಹುದು. ಈ ವಿಡಿಯೋವನ್ನು @loveraj1122 ಎಂಬ ಹೆಸರಿನ X ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಮಧುವಿನಂತೆ ಸಿಂಗಾರಗೊಂಡ ಓಯೋʼ ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ವಿಡಿಯೋ ಇಲ್ಲಿದೆ ನೋಡಿ:

ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಯಾವುದೋ ಊರಿನಲ್ಲಿರುವ ಓಯೋ ರೂಮ್ ನ ಪ್ರತಿಯೊಂದು ಕೋಣೆಗಳನ್ನು ಹೂವುಗಳು ಮತ್ತು ಕೆಂಪು ಹಾಗೂ ಬಿಳಿ ಬಣ್ಣದ ಬಲೂನ್ ಗಳಿಂದ ಭರ್ಜರಿಯಾಗಿ ಸಿಂಗರಿಸಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಮೋದಿ ಕಟೌಟ್‌ ತಬ್ಬಿಕೊಂಡು, ಸೊಂಟ ಬಳುಕಿಸುತ್ತಾ ರೀಲ್ಸ್​​ ಮಾಡಿದ ಮಹಿಳೆ

ಫೆಬ್ರವರಿ 14 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಒಂದುವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ 984 ಲೈಕ್ಸ್ ಗಳನ್ನು ಪಡೆದುಕೊಂಡಿದೆ. ಹಾಗೂ ತರಹೇವಾರಿ ಕಮೆಂಟ್ಸ್ಗಳೂ ಹರಿದು ಬಂದಿವೆ. ಒಬ್ಬ ಬಳಕೆದಾರರು ʼರಿತೇಶ್ ಅಗರ್ವಾಲ್ ಅವರ ಇಂದಿನ ಆದಾಯ ದ್ವಿಗುಣಗೊಳ್ಳುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆʼ ಎಂಬ ತಮಾಷೆಯ ಕಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇದು ತಮಾಷೆಯಾಗಿದೆʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಇದೆಂತ ವಿಚಿತ್ರ ಎಂದು ಈ ವಿಡಿಯೋವನ್ನು ಕಂಡು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More