AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಿಗಟ್ಟಲೆ ಹಣ ಖರ್ಚು ಮಾಡಿ ಔತಣ ಕೂಟ, ಭಿಕ್ಷುಕರ ಕುಟುಂಬದ ಆತಿಥ್ಯ ನೋಡಿ ನಿಬ್ಬೆರಗಾದ ಜನ

ಭಿಕ್ಷುಕ ಎಂದಾಕ್ಷಣ ನಮ್ಮ ಕಣ್ಣೆದುರು ಬರುವುದು ಅಸಹಾಯಕ ಮುಖ, ಹರಕಲು ಬಟ್ಟೆ, ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೆ ಗಲ್ಲಿ ಗಲ್ಲಿಗಳಿಗೆ ತೆರಳಿ ಬೇಡುವ ಕೈ. ಆದರೆ ಇಲ್ಲೊಂದು ಅಚ್ಚರಿ ಘಟನೆ ನಡೆದಿದ್ದು, ಭಿಕ್ಷುಕರು ಹೀಗೂ ಇರ್ತಾರಾ ಎನ್ನುವ ಪ್ರಶ್ನೆಯನ್ನು ಹುಟ್ಟುಹಾಕಿದೆ.

ಕೋಟಿಗಟ್ಟಲೆ ಹಣ ಖರ್ಚು ಮಾಡಿ ಔತಣ ಕೂಟ, ಭಿಕ್ಷುಕರ ಕುಟುಂಬದ ಆತಿಥ್ಯ ನೋಡಿ ನಿಬ್ಬೆರಗಾದ ಜನ
ಊಟImage Credit source: News9
ನಯನಾ ರಾಜೀವ್
|

Updated on: Nov 20, 2024 | 12:38 PM

Share

ಭಿಕ್ಷುಕ ಎಂದಾಕ್ಷಣ ನಮ್ಮ ಕಣ್ಣೆದುರು ಬರುವುದು ಅಸಹಾಯಕ ಮುಖ, ಹರಕಲು ಬಟ್ಟೆ, ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೆ ಗಲ್ಲಿ ಗಲ್ಲಿಗಳಿಗೆ ತೆರಳಿ ಬೇಡುವ ಕೈ. ಆದರೆ ಇಲ್ಲೊಂದು ಅಚ್ಚರಿ ಘಟನೆ ನಡೆದಿದ್ದು, ಭಿಕ್ಷುಕರು ಹೀಗೂ ಇರ್ತಾರಾ ಎನ್ನುವ ಪ್ರಶ್ನೆಯನ್ನು ಹುಟ್ಟುಹಾಕಿದೆ.

ಭಿಕ್ಷುಕ ಕುಟುಂಬವೊಂದು ಒಂದು ಕೋಟಿಗೂ ಅಧಿಕ ಹಣ ಖರ್ಚು ಮಾಡಿ, 20 ಸಾವಿರ ಮಂದಿಗೆ ಔತಣಕೂಟ ಏರ್ಪಡಿಸಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಅದೂ ಮದುವೆಗಲ್ಲ ಬದಲಾಗಿ ಅವರ ಅಜ್ಜಿ ತೀರಿಕೊಂಡು 40 ದಿನಗಳು ಕಳೆದಿದ್ದು ಅವರ ಸ್ಮರಣಾರ್ಥ ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಕುಟುಂಬವು ಕೇವಲ ಅತಿಥಿ ಮಾತ್ರವಲ್ಲ ಸುತ್ತಮುತ್ತಲಿನ ಎಲ್ಲಾ ಜನರನ್ನು ಔತಣಕೂಟಕ್ಕೆ ಕರೆದಿದ್ದರು. ಈ ಔತಣಕೂಟವು ಶ್ರೀಮಂತರ ಹುಬ್ಬೇರುವಂತೆ ಮಾಡಿತ್ತು. ಈ ಘಟನೆಯು ಗುಜ್ರಾನ್‌ವಾಲಾದ ರಾಹ್ವಾಲಿ ರೈಲು ನಿಲ್ದಾಣದ ಬಳಿ ನಡೆದಿದ್ದು, ಪಂಜಾಬ್‌ನ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಬಂದಿದ್ದರು.250 ಕುರಿಗಳನ್ನು ಹತ್ಯೆ ಮಾಡಲಾಗಿತ್ತು, ವಿವಿಧ ಮಾಂಸ ಭಕ್ಷ್ಯಗಳನ್ನು ಸಿದ್ಧಪಡಿಸಲಾಗಿತ್ತು.

ಕೆಲವರು ವ್ಯಂಗ್ಯ ಮಾಡಿದರೆ ಇನ್ನೂ ಕೆಲವರು ಸಂತೋಷ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದಲ್ಲಿ, ಆಹಾರಕ್ಕಾಗಿ ಭಿಕ್ಷೆ ಬೇಡುವ ಕಲೆಯನ್ನು ಕಲಿತವರು ಎಂದಿಗೂ ಹಸಿವಿನಿಂದ ಇರಲು ಸಾಧ್ಯವಿಲ್ಲ ಎಂಬುದು ಸತ್ಯ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಈ ದುಂದುವೆಚ್ಚವು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಭಿಕ್ಷುಕರೆಂದು ಹೇಳಿಕೊಳ್ಳುವ ಕುಟುಂಬವು ಇಂತಹ ಅದ್ದೂರಿ ಕಾರ್ಯಕ್ರಮವನ್ನು ಹೇಗೆ ಭರಿಸುತ್ತದೆ ಎಂದು ಹಲವರು ಪ್ರಶ್ನಿಸಿದ್ದಾರೆ. ಕೆಲವರು ಅವರ ಔದಾರ್ಯವನ್ನು ಶ್ಲಾಘಿಸಿದರೆ, ಇತರರು ತಮ್ಮ ಹೇಳಿಕೆಯ ಆರ್ಥಿಕ ಪರಿಸ್ಥಿತಿಯಲ್ಲಿನ ವ್ಯತ್ಯಾಸಗಳನ್ನು ಎತ್ತಿ ತೋರಿಸಿದರು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!