Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ

Artist from Pakistan : ಕಲೆಯ ಮೂಲಕ ಸಾಮರಸ್ಯವನ್ನು ಅರಳಿಸುವ ಪ್ರಯತ್ನಕ್ಕೆ ಘನವಾದ ಇತಿಹಾಸವೇ ಇದೆ. ಪಾಕಿಸ್ತಾನದ ಕಲಾವಿದರೊಬ್ಬರು ರಬಾಬ್​ ವಾದ್ಯದಲ್ಲಿ ನಮ್ಮ ರಾಷ್ಟ್ರಗೀತೆ ನುಡಿಸಿದ ಈ ವಿಡಿಯೋ 8 ಲಕ್ಷ ನೆಟ್ಟಿಗರಿಂದ ವೀಕ್ಷಿಸಲ್ಪಟ್ಟಿದೆ.

Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
ರಬಾಬ್ ಕಲಾವಿದ ಸಿಯಾಲ್ ಖಾನ್
Follow us
| Edited By: ಶ್ರೀದೇವಿ ಕಳಸದ

Updated on:Aug 15, 2022 | 5:08 PM

Independence Day 2022 : ಪಾಕಿಸ್ತಾನದ ಕಲಾವಿದರೊಬ್ಬರು ಭಾರತದ 76ನೇ ಸ್ವಾತಂತ್ರ್ಯ ದಿನಕ್ಕೆ ಸಂಗೀತದ ವಿಡಿಯೋ ತುಣುಕೊಂದನ್ನು ಉಡುಗೊರೆಯಾಗಿ ಕಳಿಸಿದ್ದಾರೆ. ರಬಾಬ್ ಎಂಬ ಅಪರೂಪದ ವಾದ್ಯ ಕಲಾವಿದರಾದ ಸಿಯಾಲ್ ಖಾನ್, ಸುಮಧುರವಾಗಿ ಜನ ಗಣ ಮನವನ್ನು ನುಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಈ ವಿಶೇಷ ದಿನದಂದು ಗೌರವ ಸಲ್ಲಿಸಿದ್ದಾರೆ. ಈ ವಿಡಿಯೋ ಆನ್​ಲೈನ್​ನಲ್ಲಿ ಅನೇಕರ ಮನಗೆದ್ದಿದ್ದು ಈಗ ವೈರಲ್ ಆಗಿದೆ. ಫೇಸ್​ಬುಕ್​ ವಿವರದ ಪ್ರಕಾರ ಸಿಯಾಲ್, ಪೇಶಾವರ ವಿಶ್ವವಿದ್ಯಾಲಯದ ರಾಜಕೀಯ ವಿಜ್ಞಾನದ ವಿದ್ಯಾರ್ಥಿ. ‘ಗಡಿಯಲ್ಲಿರುವ ನನ್ನ ವೀಕ್ಷಕರಿಗೆ ಈ ಉಡುಗೊರೆ’ ಎಂದು ಅವರು ಪೋಸ್ಟ್​ ಹಂಚಿಕೊಂಡಿದ್ದಾರೆ. ಸುಮಾರು 8 ಲಕ್ಷ ನೆಟ್ಟಿವರು ರೀಟ್ವೀಟ್ ಮಾಡಿದ್ದಾರೆ. ಇಷ್ಟಪಟ್ಟವರ ಸಂಖ್ಯೆ ಇನ್ನೇನು 50,000 ತಲುಪಲಿದೆ.

 ರಬಾಬ್​ನಲ್ಲಿ ಕೇಳಿ ಜನ ಗಣ ಮನ…

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಕಲೆ ಇರುವುದೇ ಗಡಿಗಳನ್ನು ಮೀರಲು ಮನಸ್ಸನ್ನು ಅರಳಿಸಲು. ಅಂದಿನಿಂದ ಇಂದಿನತನಕವೂ ವಿಶ್ವದ ಎಲ್ಲ ಕಲಾವಿದರುಗಳು ತಲೆಮಾರುಗಳಿಂದಲೂ ಈ ರಸಪ್ರಯತ್ನದಲ್ಲಿ ನಿರತರಾಗಿದ್ದಾರೆ. ಇದು ಹರಿಯುವ ನಾದದ ನದಿ. ಹರಿಯುತ್ತಲೇ ಇರಲಿ.

ಮತ್ತಷ್ಟು ಇಂಥ ವೈರಲ್ ವಿಡಿಯೋಗಳಿಗಾಗಿ ಕ್ಲಿಕ್ ಮಾಡಿ

Published On - 5:05 pm, Mon, 15 August 22

ತಾಜಾ ಸುದ್ದಿ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್