Viral: ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸಿ ಪ್ರಯಾಣಿಕನ ಹುಚ್ಚಾಟ; ವಿಡಿಯೋ ವೈರಲ್‌

ವಿಮಾನ ಹಾರಾಟದ ಸಮಯದಲ್ಲಿ ತುರ್ತು ಬಾಗಿಲನ್ನು ಯಾರು ಕೂಡಾ ತೆರೆಯುವಂತಿಲ್ಲ. ಈ ವಿಷಯ ಗೊತ್ತಿದ್ದರೂ ಕೆಲ ಪ್ರಯಾಣಿಕರು ತುರ್ತು ಬಾಗಿಲನ್ನು ತೆರೆಯಲು ಯತ್ನಿಸಿ ಪಜೀತಿಗೆ ಸಿಲುಕಿದ ಘಟನೆಗಳು ಈ ಹಿಂದೆಯೂ ನಡೆದಿವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ವಿಮಾನ ಹಾರಾಟದ ವೇಳೆ ಪ್ರಯಾಣಿಕನೊಬ್ಬ ತುರ್ತು ಬಾಗಿಲನ್ನು ತೆರೆಯಲು ಯತ್ನಿಸಿದ್ದಾನೆ. ಈತನ ಹುಚ್ಚಾಟಕ್ಕೆ ಸರಿಯಾಗಿ ಗೂಸಾ ಬಿದ್ದಿದ್ದು, ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದೆ.

Viral: ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸಿ ಪ್ರಯಾಣಿಕನ ಹುಚ್ಚಾಟ; ವಿಡಿಯೋ ವೈರಲ್‌
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 07, 2024 | 6:14 PM

ವಿಮಾನ ಹಾರಾಟದ ವೇಳೆ ಕೆಲವು ಪ್ರಯಾಣಿಕರು ಮಾಡುವ ಹುಚ್ಚಾಟಗಳು ಒಂದೆರಡಲ್ಲ. ಪ್ರಯಾಣಿಕರು ವಿಮಾನದಲ್ಲಿ ಮಾಡುವ ತರ್ಲೆ, ಕಿತಾಪತಿಗಳಿಗೆ ಸಂಬಂಧಿಸಿದ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ.ಅದರಲ್ಲೂ ಹೆಚ್ಚಾಗಿ ಪ್ರಯಾಣಿಕರು ತಮ್ಮ ಹುಚ್ಚಾಟದಿಂದ ವಿಮಾನ ಹಾರಾಟದ ಸಮಯದಲ್ಲಿ ತುರ್ತು ಬಾಗಿಲನ್ನು ತೆರೆಯಲು ಯತ್ನಿಸುವ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಇಲ್ಲೊಂದು ಅಂತಹದ್ದೇ ಘಟನೆ ನಡೆದಿದ್ದು, ಪ್ರಯಾಣಿಕನೊಬ್ಬ ವಿಮಾನದ ತುರ್ತು ಬಾಗಿಲನ್ನು ತೆರೆಯಲು ಯತ್ನಿಸಿದ್ದಾನೆ. ಈತನ ಹುಚ್ಚಾಟಕ್ಕೆ ಸರಿಯಾಗಿ ಗೂಸಾ ಬಿದ್ದಿದ್ದು, ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದೆ.

ಈ ಆಘಾತಕಾರಿ ಘಟನೆ ಬ್ರೆಜಿಲ್‌ನಿಂದ ಪನಾಮಕ್ಕೆ ಪ್ರಯಾಣಿಸುತ್ತಿದ್ದ ಕೋಪಾ ಏರ್‌ಲೈನ್ಸ್‌ ವಿಮಾನದಲ್ಲಿ ನಡೆದಿದ್ದು, ಈ ವಿಮಾನ ಹಾರಾಟದ ವೇಳೆ ಪ್ರಯಾಣಿಕನೊಬ್ಬ ತುರ್ತು ಬಾಗಿಲನ್ನು ತೆರೆಯಲು ಯತ್ನಿಸಿ ಸರಿಯಾಗಿ ಗೂಸಾ ತಿಂದಿದ್ದಾನೆ. ವಿಮಾನ ಲ್ಯಾಂಡಿಂಗ್‌ಗೆ ಕೇವಲ 30 ನಿಮಿಷಗಳಿರುವಾಗ ಈ ಘಟನೆ ನಡೆದಿದ್ದು, ಈತನ ಹುಚ್ಚಾಟ ಸಹ ಪ್ರಯಾಣಿಕರಲ್ಲಿ ಭಯವನ್ನು ಉಂಟು ಮಾಡಿತ್ತು.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವರದಿಗಳ ಪ್ರಕಾರ ಪ್ರಯಾಣಿಕ ತನ್ನ ಫುಡ್‌ ಟ್ರೇಯಿಂದ ಪ್ಲಾಸ್ಟಿಕ್‌ ಚಾಕುವನ್ನು ಎತ್ತಿಕೊಂಡು ಸೀದಾ ಸೀದಾ ವಿಮಾನದ ಹಿಂಭಾಗಕ್ಕೆ ಧಾವಿಸಿ ಅಲ್ಲಿ ತುರ್ತು ಬಾಗಿಲನ್ನು ತೆರೆಯಲು ಯತ್ನಿಸಿದ್ದಾನೆ. ಈತನ ಹುಚ್ಚಾಟವನ್ನು ಗಮನಿಸಿದ ಫ್ಲೈಟ್‌ ಅಟೆಂಡೆಂಟ್‌ ಜೋರಾಗಿ ಕಿರುಚಿದಾಗ ಸಹ ಪ್ರಯಾಣಿಕರು ಮತ್ತು ಸಿಬ್ಬಂದಿಗಳೆಲ್ಲಾ ಬಂದು ಆತ ಬಾಗಿಲು ತೆರೆಯದಂತೆ ತಡೆ ಹಿಡಿದು ಬಳಿಕ ಆತನನ್ನು ಎಳೆದುಕೊಂಡು ಬಂದು ಸರಿಯಾಗಿ ಗೂಸಾ ಕೊಟ್ಟಿದ್ದಾರೆ. ವಿಮಾನ ಲ್ಯಾಂಡ್‌ ಆದ ಬಳಿಕ ಪನಮಾದ ಭದ್ರತಾ ಪಡೆ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಮತ್ತು ಈತನ ಹುಚ್ಚಾಟದಿಂದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಕೋಪಾ ಏರ್‌ಲೈನ್ಸ್‌ ಹೇಳಿದೆ.

ಇದನ್ನೂ ಓದಿ: 14 ವರ್ಷದ ಬಾಲಕಿಯ ಜತೆ ಸಂಭೋಗ ನಡೆಸಿ ಪ್ರಾಣ ಕಳೆದುಕೊಂಡ 41ರ ಹರೆಯದ ವ್ಯಕ್ತಿ

NelsonCarlosd15 ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ವಿಮಾನ ಹಾರಾಟದ ಸಮಯದಲ್ಲಿ ತುರ್ತು ಬಾಗಿಲನ್ನು ತೆರೆಯಲು ಯತ್ನಿಸಿದ ಪ್ರಯಾಣಿಕನಿಗೆ ವಿಮಾನದ ಸಿಬ್ಬಂದಿಗಳು ಆತನ ಕೈ ಕಟ್ಟಿ ಥಳಿಸುತ್ತಿರುವ ದೃಶ್ಯವನ್ನು ಕಾಣಬಹುದು. ಪ್ರಯಾಣಿಕನ ಈ ಹುಚ್ಚಾಟದ ಸುದ್ದಿಯನ್ನು ಕೇಳಿ ನೆಟ್ಟಿಗರು ಫುಲ್‌ ಶಾಕ್‌ ಆಗಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ