AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ವೈರಲ್: ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಹಾವು, ಅದ ನೋಡಿದ ಪ್ರಯಾಣಿಕರ ಗತಿಯೇನು?

ವಿಮಾನ ಟೇಕ್ ಆಫ್ ಆಗುತ್ತಿರುವಾಗಲೇ ಸಿಬ್ಬಂದಿ ಅದನ್ನು ಪ್ಲಾಸ್ಟಿಕ್ ಬಾಟಲಿಯಲ್ಲಿ ಸೆರೆ ಹಿಡಿದಿದ್ದಾರೆ. ವಿಮಾನ ಲ್ಯಾಂಡ್ ಆದ ಕೂಡಲೇ ಹೆಚ್ಚಿನ ಪರಾಮರ್ಷೆ ಮಾಡಿ ಅದು ವಿಷಕಾರಿಯಲ್ಲ ಎಂದು ಪ್ರಯಾಣಿಕರಿಗೆ ಮಾಹಿತಿ ನೀಡಿದ್ದಾರೆ. ವಿಮಾನಗಳು ಹೊರಡಲು ಸಿದ್ಧವಾದಾಗ ಫುಕೆಟ್ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಕ್ಯಾರಿ-ಆನ್ ಲಗೇಜ್ ಅನ್ನು ಸಂಪೂರ್ಣವಾಗಿ ಪರಿಶೀಲಿಸಲಾಗಿತ್ತು. ಆದರೂ ಹಾವು ಹೇಗೆ ಒಳಗೆ ನುಸುಳಿ ಬಂದಿತ್ತು ಎಂಬುದು ನಿಗೂಢವಾಗಿದೆ.

ವಿಡಿಯೋ ವೈರಲ್: ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಹಾವು, ಅದ ನೋಡಿದ ಪ್ರಯಾಣಿಕರ ಗತಿಯೇನು?
ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಹಾವು, ಅದ ನೋಡಿದ ಪ್ರಯಾಣಿಕರ ಗತಿಯೇನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 20, 2024 | 9:51 AM

Share

ಥಾಯ್ ಏರ್ ಏಷ್ಯಾ ಇದು ಕಡಿಮೆ ದರದಲ್ಲಿ ವಿಮಾನಯಾನ ಸೇವೆ ಪೂರೈಕೆ ಮಾಡುವ ಕಂಪನಿ. ಆದರೆ ಇತ್ತೀಚೆಗೆ ಈ ವಿಮಾನದಲ್ಲಿ ಹಾವು ಕಾಣಿಸಿಕೊಂಡಿತ್ತು. ಅದೂ ವಿಮಾನ ಆಗಸದಲ್ಲಿದ್ದಾಗ! ಇದರಿಂದ ವಿಮಾನದಲ್ಲಿದ್ದ ಪ್ರಯಾಣಿಕರು ಹೌಹಾರಿ, ಬೆಚ್ಚಿಬಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಬ್ಯಾಂಕಾಕ್‌ನಿಂದ ಫುಕೆಟ್‌ಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರು ತಮ್ಮ ಸಣ್ಣಪುಟ್ಟ ಲಗೇಜ್​ ಇಡುವ ಮೇಲಿನ ಕ್ಯಾಬಿನ್​​​ನಲ್ಲಿ ಹಾವು ಹರಿದಾಡುತ್ತಿರುವುದು ವ್ಯಕ್ತಿಯೊಬ್ಬರ ಕಣ್ಣಿಗೆ ಬಿದ್ದಿದೆ. ಅದನ್ನು ಅವರು ವಿಡಿಯೋ ರೀಲ್‌ ಮಾಡುತ್ತಾ, ರಕ್ಷಿಸಿದ್ದಾರೆ. ಜೊತೆಗೆ ಪ್ರಯಾಣಿಕರನ್ನೂ ರಕ್ಷಿಸಿದ್ದಾರೆ ಅನ್ನಿ. ಕೊನೆಗೆ ಪ್ರಯಾಣಿಕರು ನಿಟ್ಟುಸಿರುಬಿಟ್ಟಿದ್ದಾರೆ.

ಆ ಇಡೀ ಘಟನೆಯ ವಿಡಿಯೋವನ್ನು ತನ್ನ ಫೋನ್‌ನಲ್ಲಿ ಆ ಪ್ರಯಾಣಿಕ ತೆಗೆದಿರಿಸಿಕೊಂಡಿದ್ದಾರೆ. ಅದನ್ನು ತಮ್ಮ ವೈಯಕ್ತಿಕ ರೀಲ್ಸ್ ಖಾತೆಯೊಂದಿಗೆ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಆ ವಿಡಿಯೋ ಈಗ ಟ್ರೆಂಡಿಂಗ್ ಆಗಿದೆ. ಇದನ್ನು ನೋಡಿದ ಜನ ನಾನಾ ರೀತಿ ಕಮೆಂಟ್ ಮಾಡುತ್ತಿದ್ದಾರೆ. ಈ ಹಿಂದೆ ಬಸ್ಸು, ರೈಲುಗಳಲ್ಲಿ ಹಾವುಗಳು ಹರಿದಾಡುವುದನ್ನು ನೋಡಿದ್ದೇವೆ. ಆದರೆ ಇದೇನಿದು ಮೇಲಿನ ಆಗಸದಲ್ಲಿ ತೇಲುವಾಗ, ಅತ್ಯಂತ ಸ್ವಚ್ಛವಾದ, ವಿಶೇಷ ಭದ್ರತೆಯ ವಿಮಾನ ಯಾನಗಳಲ್ಲಿಯೂ ಸಹ ಇಂತಹ ಹಾವಿನ ಆಟಾಟೋಪ ಕಂಡುಬಂದರೆ ಗತಿಯೇನು? ಪ್ರಯಾಣಿಕರು ಆಘಾತಕ್ಕೊಳಗಾಗುವುದಿಲ್ಲವೇ ಎಂದು ಜನ ಪ್ರಶ್ನಿಸಿದ್ದಾರೆ.

ಜನವರಿ 13 ರಂದು, ಥಾಯ್ ಏರ್ ಏಷ್ಯಾಕ್ಕೆ ಸೇರಿದ FD3015 ವಿಮಾನದಲ್ಲಿ ಈ ಘಟನೆ ಸಂಭವಿಸಿದೆ. ವಿಮಾನ ಇಳಿಯುವ ಮುನ್ನವೇ ಪ್ರಯಾಣಿಕರ ನೆರವಿನೊಂದಿಗೆ ವಿಮಾನದ ಸಿಬ್ಬಂದಿ ಹಾವನ್ನು ಹಿಡಿದಿದ್ದಾರೆ. ಇದರಿಂದ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಥಾಯ್ ಏರ್‌ಏಷ್ಯಾ ವಿಮಾನವು ಡಾನ್ ಮುವಾಂಗ್ ವಿಮಾನ ನಿಲ್ದಾಣದಿಂದ ಹೊರಟು ಫುಕೆಟ್‌ನಲ್ಲಿ ಇಳಿಯಲು ಹೊರಟಿತ್ತು. ವಿಮಾನವು ಹಾರುತ್ತಿರುವಾಗ, ಪ್ರಯಾಣಿಕರೊಬ್ಬರು ಹಾವನ್ನು ಗುರುತಿಸಿದ್ದಾರೆ.

ಕೂಡಲೇ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ವಿಮಾನ ಟೇಕ್ ಆಫ್ ಆಗುತ್ತಿರುವಾಗಲೇ ಸಿಬ್ಬಂದಿ ಅದನ್ನು ಪ್ಲಾಸ್ಟಿಕ್ ಬಾಟಲಿಯಲ್ಲಿ ಸೆರೆ ಹಿಡಿದಿದ್ದಾರೆ. ವಿಮಾನ ಲ್ಯಾಂಡ್ ಆದ ಕೂಡಲೇ ಹೆಚ್ಚಿನ ಪರಾಮರ್ಷೆ ಮಾಡಿ ಅದು ವಿಷಕಾರಿಯಲ್ಲ ಎಂದು ಪ್ರಯಾಣಿಕರಿಗೆ ಮಾಹಿತಿ ನೀಡಿದ್ದಾರೆ. ವಿಮಾನಗಳು ಹೊರಡಲು ಸಿದ್ಧವಾದಾಗ ಫುಕೆಟ್ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಕ್ಯಾರಿ-ಆನ್ ಲಗೇಜ್ ಅನ್ನು ಸಂಪೂರ್ಣವಾಗಿ ಪರಿಶೀಲಿಸಲಾಗಿತ್ತು. ಆದರೂ ಹಾವು ಹೇಗೆ ಒಳಗೆ ನುಸುಳಿ ಬಂದಿತ್ತು ಎಂಬುದು ನಿಗೂಢವಾಗಿದೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!