Viral Video: ಕೆಟ್ಟು ನಿಂತ ವಿಮಾನವನ್ನು ರನ್​ವೇಯತ್ತ ತಳ್ಳಿದ ಪ್ರಯಾಣಿಕರು; ವಿಡಿಯೋ ನೋಡಿ

ತಾರಾ ಏರ್‌ಲೈನ್ಸ್‌ಗೆ ಸೇರಿದ ವಿಮಾನದ ಈ ವಿಡಿಯೋವನ್ನು ಸಾಮ್ರಾಟ್ ಎಂಬ ವ್ಯಕ್ತಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಸಾಮಾನ್ಯವಾಗಿ ಬಸ್ ಅಥವಾ ಲಾರಿಯನ್ನು ಈ ರೀತಿಯಾಗಿ ತಳ್ಳುವ ದೃಶ್ಯವನ್ನು ನಾವು ನೋಡಿದ್ದೇವೆ. ಆದರೆ ಈ ರೀತಿ ವಿಮಾನವನ್ನು ಪ್ರಯಾಣಿಕರು ಸೇರಿ ತಳ್ಳಿರುವುದು ಸಾಮಾನ್ಯರಲ್ಲಿ ಆಶ್ಚರ್ಯ ಸೃಷ್ಟಿಸಿದೆ.

Viral Video: ಕೆಟ್ಟು ನಿಂತ ವಿಮಾನವನ್ನು ರನ್​ವೇಯತ್ತ ತಳ್ಳಿದ ಪ್ರಯಾಣಿಕರು; ವಿಡಿಯೋ ನೋಡಿ
ಪ್ರಯಾಣಿಕರು ವಿಮಾನ ತಳ್ಳುತ್ತಿರುವ ದೃಶ್ಯ
Follow us
TV9 Web
| Updated By: preethi shettigar

Updated on: Dec 03, 2021 | 2:03 PM

ನೇಪಾಳದಲ್ಲಿ ರನ್​ವೇಯಲ್ಲಿ ಡಿಢೀರ್ ಕೆಟ್ಟು ನಿಂತ ವಿಮಾನವನ್ನು ರನ್‌ವೇಯಿಂದ ದೂರ ತಳ್ಳಲು ಪ್ರಯಾಣಿಕರ ಗುಂಪೊಂದು ಹರಸಾಹಸ ಪಡುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral video) ಆಗಿದೆ. ನೇಪಾಳದ ವಿಮಾನ ನಿಲ್ದಾಣದಲ್ಲಿ (Airport) ನಡೆದಿರುವ ಈ ಘಟನೆ ಜನರಲ್ಲಿ ಅಚ್ಚರಿ ಮೂಡಿಸಿದೆ. ಟೈರ್ ಸ್ಟೋಟಗೊಂಡು ರನ್​ವೇಯಲ್ಲಿ ತಾರಾ ವಿಮಾನ ನಿಂತಿತ್ತು. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ತಾರಾ ಏರ್‌ಲೈನ್ಸ್‌ಗೆ ಸೇರಿದ ವಿಮಾನದ ಈ ವಿಡಿಯೋವನ್ನು ಸಾಮ್ರಾಟ್ ಎಂಬ ವ್ಯಕ್ತಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಸಾಮಾನ್ಯವಾಗಿ ಬಸ್ ಅಥವಾ ಲಾರಿಯನ್ನು ಈ ರೀತಿಯಾಗಿ ತಳ್ಳುವ ದೃಶ್ಯವನ್ನು ನಾವು ನೋಡಿದ್ದೇವೆ. ಆದರೆ ಈ ರೀತಿ ವಿಮಾನವನ್ನು ಪ್ರಯಾಣಿಕರು ಸೇರಿ ತಳ್ಳಿರುವುದು ಸಾಮಾನ್ಯರಲ್ಲಿ ಆಶ್ಚರ್ಯ ಸೃಷ್ಟಿಸಿದೆ. ಈ ವಿಡಿಯೋದ ಪ್ರಾರಂಭದಲ್ಲಿ ಪ್ರಯಾಣಿಕರು ವಿಮಾನವನ್ನು ನಿಂತ ಸ್ಥಳದಿಂದ ದೂರ ತಳ್ಳಲು ಪ್ರಯತ್ನಿಸುತ್ತಾರೆ. ರನ್‌ವೇಯಲ್ಲಿ ಇಂತಹ ಸನ್ನಿವೇಶವನ್ನು ನೋಡಿದರೆ ನಿಜಕ್ಕೂ ಅಚ್ಚರಿಯಾಗುವುದು ಸಾಮಾನ್ಯ.

ವಿಮಾನದ ಹಿಂಭಾಗದ ಟೈರ್ ರನ್‌ವೇಯಲ್ಲಿ ಸಿಡಿದಿದೆ. ಇದು ಪ್ರಯಾಣಿಕರನ್ನು ಕೆಳಗಿಳಿಸಲು ಮತ್ತು ಲ್ಯಾಂಡಿಂಗ್ ಸ್ಟ್ರಿಪ್‌ನಿಂದ ವಿಮಾನವನ್ನು ತಳ್ಳಲು ಪ್ರೇರೇಪಿಸಿದೆ ಎಂದರೆ ತಪ್ಪಾಗಲಾರದು. ನೇಪಾಳದ ಬಾಜುರಾ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

airplane;

ಸದ್ಯ ಈ ವಿಡಿಯೋಗೆ 50 ಸಾವಿರಕ್ಕೂ ಹೆಚ್ಚು ವ್ಯೂವ್ಸ್ ಬಂದಿದ್ದು, ಹೆಚ್ಚಿನವರು ಕಮೆಂಟ್ ಮೂಲಕ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಕೆಲವರು ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಿದರೆ, ಇತರರು ವಿಮಾನವನ್ನು ಹಾರಿಸುವ ಮೊದಲು ಅಧಿಕಾರಿಗಳು ಹೇಗೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂಬ ಕುರಿತು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Viral Video: ಹೇರ್ ಡ್ರೈಯರ್ ಬದಲು ಕುಕ್ಕರ್​ ಬಳಸಿದ ಯುವಕ; ಅಪರೂಪದ ವಿಡಿಯೋ ನೋಡಿ ಅಚ್ಚರಿಗೊಂಡ ನೆಟ್ಟಿಗರು!

Viral Video: ಚಲಿಸುತ್ತಿದ್ದ ರೈಲಿನಿಂದ ಜಿಗಿದ ಇಬ್ಬರು ಮಹಿಳೆಯರು; ವೀರೋಚಿತ ರಕ್ಷಣೆ

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ