ಬ್ಯಾಂಕ್​​ನೊಳಗೆ ಬಂದು ಮಹಿಳಾ ಮ್ಯಾನೇಜರ್​ನ ಫೋನ್​ ಒಡೆದು ಬೆದರಿಕೆ ಹಾಕಿದ ವ್ಯಕ್ತಿ; ವಿಡಿಯೋ ವೈರಲ್​

ಪಾಟ್ನಾದ ಕೆನರಾ ಬ್ಯಾಂಕ್‌ನಲ್ಲಿ ಒಬ್ಬ ವ್ಯಕ್ತಿ ಬ್ಯಾಂಕ್ ಮ್ಯಾನೇಜರ್ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ವೈರಲ್ ಆಗಿದೆ. ಸಾಲ ಮಂಜೂರಾಗದ ಕಾರಣ ಕೋಪಗೊಂಡ ಆರೋಪಿ, ಮಹಿಳಾ ಮ್ಯಾನೇಜರ್‌ಗೆ ಬೆದರಿಕೆ ಹಾಕಿ ಅವಮಾನಿಸಿದ್ದಾನೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಮತ್ತು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಬ್ಯಾಂಕ್​​ನೊಳಗೆ ಬಂದು ಮಹಿಳಾ ಮ್ಯಾನೇಜರ್​ನ ಫೋನ್​ ಒಡೆದು ಬೆದರಿಕೆ ಹಾಕಿದ ವ್ಯಕ್ತಿ; ವಿಡಿಯೋ ವೈರಲ್​
Follow us
ಅಕ್ಷತಾ ವರ್ಕಾಡಿ
|

Updated on: Dec 08, 2024 | 12:45 PM

ಪಾಟ್ನಾ: ಬಿಹಾರದ ಪಾಟ್ನಾದಿಂದ ಬೆಳಕಿಗೆ ಬಂದ ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ಮಹಿಳಾ ಬ್ಯಾಂಕ್ ಮ್ಯಾನೇಜರ್ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವುದು ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಆರೋಪಿ ಬ್ಯಾಂಕ್ ಮ್ಯಾನೇಜರ್ ಜೊತೆ ಅನುಚಿತವಾಗಿ ವರ್ತಿಸಿದ್ದು, ಮಹಿಳೆ ತನ್ನ ಕೃತ್ಯವನ್ನು ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಲು ಪ್ರಯತ್ನಿಸುತ್ತಿದ್ದಂತೆ ಆಕೆಯ ಮೊಬೈಲ್ ಫೋನ್ ಅನ್ನು ನೆಲಕ್ಕೆ ಒಡೆದು ಹಾಕಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಮಹಿಳೆ ಪೊಲೀಸರಿಗೆ ವಿಷಯ ತಿಳಿಸಿದ್ದು, ಬೆದರಿಕೆ ಹಾಕಿ ಅನುಚಿತವಾಗಿ ವರ್ತಿಸಿದ ಆರೋಪಿಯನ್ನು ಬಂಧಿಸಲಾಗಿದೆ.

ಪಾಟ್ನಾದ ಗಾಂಧಿ ಮೈದಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಶುಕ್ರವಾರ (ಡಿಸೆಂಬರ್ 6) ಈ ಘಟನೆ ಸಂಭವಿಸಿದ್ದು, ಬ್ಯಾಂಕ್‌ನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಆರೋಪಿಯನ್ನು ರಾಕೇಶ್ ಕುಮಾರ್ ಸಿಂಗ್ ಎಂದು, ಬ್ಯಾಂಕ್ ಮ್ಯಾನೇಜರ್ ವಂದನಾ ವರ್ಮಾ ಎಂದು ಗುರುತಿಸಲಾಗಿದೆ. ರಾಕೇಶ್ ಕುಮಾರ್ ಅವರು ವೃತ್ತಿಯಲ್ಲಿ ಗುತ್ತಿಗೆದಾರರಾಗಿದ್ದು, ಸಾಲಕ್ಕಾಗಿ ಬ್ಯಾಂಕ್‌ಗೆ ಮನವಿ ಮಾಡಿದರು. ಆದರೆ, ಅವರ CIBIL ಸ್ಕೋರ್‌ಗೆ ಅನುಗುಣವಾಗಿಲ್ಲದ ಕಾರಣ ಅವರ ಸಾಲವನ್ನು ಮಂಜೂರು ಮಾಡಿರಲ್ಲಿಲ್ಲ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಜೈಲಿನಲ್ಲಿ ಕೈದಿಯ ವಿಚಿತ್ರ ವರ್ತನೆ; ಎಕ್ಸ್ ರೇ ನೋಡಿ ಪೊಲೀಸರು ಶಾಕ್​​

ಇದರಿಂದ ಕೋಪಗೊಂಡ ರಾಕೇಶ್ ಬ್ಯಾಂಕ್ ಮ್ಯಾನೇಜರ್‌ಗೆ ಬೆದರಿಕೆ ಹಾಕಿದ್ದಾನೆ. ಬ್ಯಾಂಕ್‌ನ ಮಹಿಳಾ ಉದ್ಯೋಗಿಯ ಮೇಲೆ ಕಿಡಿಕಾರಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಯತ್ತ ಬೆರಳು ತೋರಿಸಿ ತನ್ನ CIBIL ಸ್ಕೋರ್ ಸರಿಪಡಿಸುವಂತೆ ಬೆದರಿಕೆ ಹಾಕುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಪಾಟ್ನಾ ಪೊಲೀಸರ ಪ್ರಕಾರ, ಗಾಂಧಿ ಮೈದಾನ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್