AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ದೆಗೆ ಜಾರಿದ ಸ್ಟೇಷನ್ ಮಾಸ್ಟರ್​, ಗ್ರೀನ್​ ಸಿಗ್ನಲ್​ ಸಿಗದೆ ಅರ್ಧ ಗಂಟೆ ನಿಂತಿತ್ತು ರೈಲು

ಸ್ಟೇಷನ್ ಮಾಸ್ಟರ್​ ನಿದ್ದೆಗೆ ಜಾರಿದ್ದ ಕಾರಣ ರೈಲೊಂದು ಗ್ರೀನ್​ ಸಿಗ್ನಲ್​ ಸಿಗದೆ ಅರ್ಧಗಂಟೆ ತಡವಾಗಿ ಹೊರಟಿರುವ ಘಟನೆ ಆಗ್ರಾದಲ್ಲಿ ನಡೆದಿದೆ.

ನಿದ್ದೆಗೆ ಜಾರಿದ ಸ್ಟೇಷನ್ ಮಾಸ್ಟರ್​, ಗ್ರೀನ್​ ಸಿಗ್ನಲ್​ ಸಿಗದೆ ಅರ್ಧ ಗಂಟೆ ನಿಂತಿತ್ತು ರೈಲು
ರೈಲು
ನಯನಾ ರಾಜೀವ್
|

Updated on: May 05, 2024 | 11:38 AM

Share

ರೈಲು(Train) ವಿಳಂಬವಾಗುವುದು ಭಾರತದಲ್ಲಿ ಹೊಸತೇನಲ್ಲ, ಕೆಲವೊಮ್ಮೆ ತಾಂತ್ರಿಕ ಸಮಸ್ಯೆಗಳಿಂದಲೂ, ಕೆಲವೊಮ್ಮೆ ಹವಾಮಾನ ವೈಪರೀತ್ಯದಿಂದಲೂ ರೈಲುಗಳು ಗಂಟೆಗಟ್ಟಲೆ ನಿಂತಿರುವುದನ್ನು ಕಾಣಬಹುದು. ಆದರೆ ಆಗ್ರಾದ ರೈಲು ನಿಲ್ದಾಣವೊಂದರಲ್ಲಿ ಯಾವುದೇ ಸಮಸ್ಯೆ ಇಲ್ಲದಿದ್ದರೂ ರೈಲು ಅರ್ಧ ಗಂಟೆ ನಿಂತಲ್ಲೇ ನಿಂತಿತ್ತು.

ಸ್ಟೇಷನ್​ ಮಾಸ್ಟರ್​ ನಿದ್ರೆಗೆ ಜಾರಿದ್ದ ಕಾರಣ ಗ್ರೀನ್​ ಸಿಗ್ನಲ್ ಸಿಗದೆ ರೈಲೊಂದು ಅರ್ಧಗಂಟೆಗಳ ಕಾಲ ನಿಲ್ದಾಣದಲ್ಲೇ ನಿಂತಿದ್ದ ಘಟನೆ ನಡೆದಿದೆ.

ನಾವು ಸ್ಟೇಷನ್ ಮಾಸ್ಟರ್​ ವಿರುದ್ಧ ಕ್ರಮ ಕೈಗೊಲ್ಳುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಡಿ ಮೋಡ್ ರೈಲು ನಿಲ್ದಾಣವು ಇಟಾವಾಗೆ ಮುಂಚಿತವಾಗಿ ಬರುವ ಒಂದು ಸಣ್ಣ ಹಾಗೂ ಪ್ರಮುಖ ನಿಲ್ದಾಣವಾಗಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ. ಏಕೆಂದರೆ ಆಗ್ರಾ ಜೊತೆಗೆ ಝಾನ್ಸಿಯಿಂದ ಪ್ರಯಾಗರಾಜ್‌ಗೆ ಹೋಗುವ ರೈಲುಗಳು ಸಹ ಈ ನಿಲ್ದಾಣದ ಮೂಲಕ ಹಾದು ಹೋಗುತ್ತವೆ.

ಮತ್ತಷ್ಟು ಓದಿ:Indian Railway: ರೈಲುಗಳಿಗೂ ಇದೆ ಜೀವಿತಾವಧಿ; ರೈಲು ಎಷ್ಟು ಸಮಯದವರೆಗೆ ಸೇವೆ ನೀಡಬಲ್ಲದು?

ರೈಲಿನ ಲೋಕೋ ಪೈಲಟ್ ಸ್ಟೇಷನ್ ಮಾಸ್ಟರ್ ಅನ್ನು ಎಬ್ಬಿಸಲು ಹಲವಾರು ಬಾರಿ ಹಾರ್ನ್ ಹಾಕಬೇಕಾಯಿತು. ಸ್ಟೇಷನ್​ ಮಾಸ್ಟರ್​ ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ್ದಾರೆ. ಡ್ಯೂಟಿಯಲ್ಲಿದ್ದ ‘ಪಾಯಿಂಟ್ಸ್ ಮನ್’ ಹಳಿಗಳ ಪರಿಶೀಲನೆಗೆ ಜೊತೆಯಲ್ಲಿ ಹೋಗಿದ್ದರಿಂದ ನಿಲ್ದಾಣದಲ್ಲಿ ಒಬ್ಬರೇ ಇದ್ದಿದ್ದಾಗಿ ಹೇಳಿದರು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ