Viral: ಸರ್ಕಾರಿ ನೌಕರಿ ಗಿಟ್ಟಿಸಲು ತನ್ನ ತಾಯಿ ತೀರಿದ್ದಾರೆಂದು ಸುಳ್ಳು ಹೇಳಿದ ವ್ಯಕ್ತಿಯ ಬಂಧನ

Odisha Train Accident : ಒಡಿಶಾ ರೈಲು ಅಪಘಾತದಲ್ಲಿ ತನ್ನ ತಾಯಿ ತೀರಿ ಹೋಗಿದ್ದಾರೆ, ಪರಿಹಾರದ ಬದಲಾಗಿ ತನಗೆ ಉದ್ಯೋಗ ನೀಡಬೇಕೆಂದು ಕೇಂದ್ರ ರೈಲ್ವೆ ಸಚಿವರನ್ನು ಕಾಣಲು ಪಾಟ್ನಾದ ಈ ವ್ಯಕ್ತಿ ಬಂದಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Viral: ಸರ್ಕಾರಿ ನೌಕರಿ ಗಿಟ್ಟಿಸಲು ತನ್ನ ತಾಯಿ ತೀರಿದ್ದಾರೆಂದು ಸುಳ್ಳು ಹೇಳಿದ ವ್ಯಕ್ತಿಯ ಬಂಧನ
ಪಾಟ್ನಾದ ಸಂಜಯ್ ಕುಮಾರ್
Follow us
TV9 Web
| Updated By: ಶ್ರೀದೇವಿ ಕಳಸದ

Updated on:Jun 09, 2023 | 12:06 PM

Government Job: ಸರ್ಕಾರಿ ನೌಕರಿಯನ್ನು ಗಿಟ್ಟಿಸಲು ವ್ಯಕ್ತಿಯೊಬ್ಬ ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡ ಪ್ರಸಂಗ ದೆಹಲಿಯಲ್ಲಿ ನಡೆದಿದೆ. ಇತ್ತೀಚೆಗೆ ಸಂಭವಿಸಿದ ಒಡಿಶಾ ರೈಲು ಅಪಘಾತದಲ್ಲಿ ತನ್ನ ತಾಯಿ ತೀರಿ ಹೋಗಿದ್ದಾರೆಂದು ಇವನು ಅಧಿಕಾರಿಗಳಿಗೆ ಸುಳ್ಳು ಹೇಳಿದ್ದಾನೆ. ಬಾಲ್​ಸೋರ್​ ರೈಲು ಅಪಘಾತದ ನಂತರ ಸರ್ಕಾರಿ ಉದ್ಯೋಗ ಪಡೆಯುವ ಉದ್ದೇಶದಿಂದ ತಾನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav)​ ಅವರನ್ನು ಭೇಟಿ ಮಾಡಲು ದೆಹಲಿಗೆ ಪ್ರಯಾಣಿಸಿದ್ಧಾಗಿ ತಿಳಿಸಿದ್ದಾನೆ. ಈ ಸಂದರ್ಭದಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಿದಾಗ, ಅವನ ತಾಯಿ 2018ರಲ್ಲಿಯೇ ನಿಧನ ಹೊಂದಿದ್ದರ ಮಾಹಿತಿ ಬೆಳಕಿಗೆ ಬಂದಿದೆ. ತತ್ಪರಿಣಾಮವಾಗಿ ಪೊಲೀಸರು ಅವನನ್ನು ಬಂಧಿಸಿದ್ದಾರೆ.

ಈ ವ್ಯಕ್ತಿಯನ್ನು ಪಾಟ್ನಾದ ಸಂಜಯ್ ಕುಮಾರ್ ಎಂದು ಗುರುತಿಲಾಗಿದೆ. ಇವನು ​ ಗುರುವಾರದಂದು ಸಚಿವರ ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದ್ದಾನೆ. ಆಗ ರೈಲು ಭವನದಲ್ಲಿ ಅವರನ್ನು ಕಾಣಲು ತಿಳಿಸಲಾಗಿದೆ. ಆ ಪ್ರಕಾರ ಅವನು ಸಚಿವರ ಕಚೇರಿಗೆ ತೆರಳಿದ್ಧಾನೆ.  ಅಲ್ಲಿ ಅಧಿಕಾರಿಗಳೊಂದಿಗೆ ಮಾತನಾಡುವಾಗ ಅವನ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ.

ಇದನ್ನೂ ಓದಿ : Viral Video: ಮ್ಯಾಷಪ್​ ವಿಥ್ ಅಮ್ಮಾ; ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಸಿನಿಸಂಗಮ

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ತನ್ನ ತಾಯಿ ಕೋರಮಂಡಲ್​ ಎಕ್ಸ್​ಪ್ರೆಸ್​ ಗೂಡ್ಸ್​ ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದ್ದಾನೆ. ಹಾಗಿದ್ದರೆ ನಿಮ್ಮ ತಾಯಿಯ ಪ್ರಯಾಣಕ್ಕೆ ಸಂಬಂಧಿಸಿದ ಮಾಹಿತಿ, ಸಾಕ್ಷ್ಯಗಳನ್ನು ಒದಗಿಸಿ ಎಂದು ಅಧಿಕಾರಿಗಳು ಕೇಳಿದಾಗ ಅವನು ನಿರುತ್ತರನಾಗಿದ್ದಾನೆ. ಸ್ವಲ್ಪ ಹೊತ್ತಿನ ಬಳಿಕ ತಾನು ಟ್ರಾವೆಲ್ ಏಜೆಂಟ್ ಮೂಲಕ ಟಿಕೆಟ್​ ಬುಕ್​ ಮಾಡಿದ್ದೆ, ಅವನ ಹೆಸರು ನೆನಪಿಲ್ಲ. ಅಲ್ಲದೆ ಸೀಟ್​ ವೇಟಿಂಗ್​ ಲಿಸ್ಟ್​ನಲ್ಲಿತ್ತು ಎಂದು ಹೇಳಲು ಪ್ರಯತ್ನಿಸಿದ್ದಾನಾದರೂ ಸಾಕ್ಷ್ಯಾಧಾರಗಳೊಂದಿಗೆ ಸಾಬೀತುಪಡಿಸುವಲ್ಲಿ ವಿಫಲನಾಗಿದ್ದಾನೆ. ಅಧಿಕಾರಿಗಳಿಗೆ ಅನುಮಾನ ದಟ್ಟವಾಗಿದ್ದರಿಂದ ಅವನನ್ನು ಕೂಡಲೇ ಬಂಧಿಸಿದ್ದಾರೆ.

ಇದನ್ನೂ ಓದಿ : Viral: ”ಕಚರಾ” ಮರುಬಳಕೆ; ಝೊಮ್ಯಾಟೋದ ಕೀಳು ಅಭಿರುಚಿಯ ಜಾತೀವಾದಿ ಜಾಹೀರಾತು

”ಸಂಜಯ್ ತನ್ನ ತಾಯಿಯ ಫೋಟೋ ನಮಗೆ ನೀಡಿದ. ಫೇಷಿಯಲ್ ರಿಕಗ್ನಿಷನ್ ತಂತ್ರಜ್ಞಾನದ ಮೂಲಕ ಆಕೆಯನ್ನು ಹುಡುಕುವುದು ನಮ್ಮ ಗುರಿಯಾಗಿತ್ತು. ಹಾಗಾಗಿ ಎಲ್ಲಾ ರೈಲು ನಿಲ್ದಾಣಗಳಲ್ಲಿಯೂ ಅವರ ತಾಯಿಯನ್ನು ಹುಡುಕಲು ಪ್ರಾರಂಭಿಸಿದೆವು. ಆದರೆ ಅವರು ಪತ್ತೆಯಾಗಲಿಲ್ಲ. ಈ ಪ್ರಕರಣವನ್ನು ನಿರ್ವಹಿಸುತ್ತಿದ್ದ ಹಿರಿಯ ಅಧಿಕಾರಿಯರೆದುರು ಸಂಜಯ್​ ತನ್ನ ತಪ್ಪನ್ನು ಒಪ್ಪಿಕೊಂಡ” ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ : Viral Video: ಮೆಕ್​ಡೊನಾಲ್ಡ್ಸ್​; ಡೇಟಿಂಗ್​, ಪ್ರೇಮದ ಬೆಲೆ ಇಲ್ಲಿ ರೂ. 179?; ನೆಟ್ಟಿಗರ ಆಕ್ರೋಶ

ಬಾಲ್​ಸೋರ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ರೈಲ್ವೇ ಸಚಿವಾಲಯವು ಪರಿಹಾರ ಘೋಷಿಸಿದಾಗ, ಸಂಜಯ್​ ಸಚಿವರನ್ನು ಸಂಪರ್ಕಿಸಿ ಪರಿಹಾರದ ಬದಲಾಗಿ ತನಗೆ ಸರ್ಕಾರಿ ನೌಕರಿ ನೀಡಬೇಕೆಂದು ಕೇಳಲು ನಿರ್ಧರಿಸಿದ. ಅಧಿಕಾರಿಯೆದುರು, ತಾನು ಬಹುಕಾಲದಿಂದ ನಿರುದ್ಯೋಗಿಯಾಗಿದ್ದೆ, ಖಿನ್ನತೆಗೂ ಜಾರಿದ್ದೆ. ಇದಕ್ಕೆ ಉದ್ಯೋಗವೊಂದೇ ಮಾರ್ಗ ಎಂದು ಕಂಡುಕೊಂಡೆ ಎಂದಿದ್ದ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 12:00 pm, Fri, 9 June 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ