Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯನ್ನು ಹನಿಮೂನ್​​ಗೆಂದು ಕರೆದ್ಯೊಯ್ದು, ಶೇಖ್​​​​ಗೆ ಮಾರಿದ ಪತಿ, ಆಕೆ ಭಾರತಕ್ಕೆ ವಾಪಸ್ಸು ಬಂದಿದ್ದೇ ರೋಚಕ

ಪಾಟ್ನಾದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕತಾರ್‌ಗೆ ಹನಿಮೂನ್‌ಗೆಂದು ಕರೆದುಕೊಂಡು ಹೋಗಿ ಅಲ್ಲಿನ ಶೇಖ್‌ಗೆ 10 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದಾನೆ. ಪತ್ನಿಯನ್ನು ಮಾರಾಟ ಮಾಡಿದ ನಂತರ ಭಾರತಕ್ಕೆ ಬಂದ ಪತಿ ಅಂಚೆ ಮೂಲಕ ಆಕೆಗೆ ತ್ರಿವಳಿ ತಲಾಖ್ ನೀಡಿದ್ದಾನೆ. ಭದ್ರತಾ ಸಿಬ್ಬಂದಿಯ ಸಹಾಯದಿಂದ ಮಹಿಳೆ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿ ಭಾರತಕ್ಕೆ ಮರಳಿದ್ದು, ಇದೀಗ ಪತಿ ಮತ್ತು ಅತ್ತೆಯ ವಿರುದ್ಧ ದಿಘಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.

ಪತ್ನಿಯನ್ನು ಹನಿಮೂನ್​​ಗೆಂದು ಕರೆದ್ಯೊಯ್ದು, ಶೇಖ್​​​​ಗೆ ಮಾರಿದ ಪತಿ, ಆಕೆ ಭಾರತಕ್ಕೆ ವಾಪಸ್ಸು ಬಂದಿದ್ದೇ ರೋಚಕ
ಸಾಂದರ್ಭಿಕ ಚಿತ್ರ
Follow us
ಅಕ್ಷತಾ ವರ್ಕಾಡಿ
|

Updated on: Nov 23, 2024 | 3:39 PM

ಬಿಹಾರದ ಪಾಟ್ನಾದ ವ್ಯಕ್ತಿಯೊಬ್ಬ ಪತ್ನಿಯನ್ನು ಹನಿಮೂನ್​​ಗೆಂದು ಕತಾರ್‌ಗೆ ಕರೆದುಕೊಂಡು ಹೋಗಿ ಅಲ್ಲಿನ ಶೇಖ್‌ಗೆ ಮಾರಾಟ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಪತ್ನಿಯನ್ನು ಮಾರಾಟ ಮಾಡಿ ಪಾಟ್ನಾಗೆ ತಲುಪಿದ್ದ ಈತ ಪತ್ನಿಗೆ ಅಂಚೆ ಮೂಲಕ ತ್ರಿವಳಿ ತಲಾಖ್ ಕಳುಹಿಸಿದ್ದಾನೆ. ಮತ್ತೊಂದೆಡೆ, ಭದ್ರತಾ ಸಿಬ್ಬಂದಿಯ ಸಹಾಯದಿಂದ ಮಹಿಳೆ ತನಗಾದ ಕಹಿ ಅನುಭವವನ್ನು ಪತ್ರದಲ್ಲಿ ಬರೆದು ಭಾರತೀಯ ರಾಯಭಾರ ಕಚೇರಿಗೆ ತಲುಪಿಸಿದ್ದಾಳೆ. ನಂತರ ರಾಯಭಾರ ಕಚೇರಿಯ ಸಿಬ್ಬಂದಿಗಳು ಮಹಿಳೆಯನ್ನು ಭಾರತಕ್ಕೆ ಸುರಕ್ಷಿತವಾಗಿ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭಾರತಕ್ಕೆ ಬಂದ ಮಹಿಳೆ ತನಗಾದ ಸಂಕಷ್ಟವನ್ನು ವಿವರಿಸಿದ್ದಾಳೆ. ನಂತರ ಆಕೆಯ ಪತಿ ಮತ್ತು ಅತ್ತೆಯ ವಿರುದ್ಧ ದಿಘಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

2021 ರಲ್ಲಿ ಆರೋಪಿ ಶಹಬಾಜ್ ಹಸನ್​ನೊಂದಿಗೆ ಈ ಮಹಿಳೆಗೆ ವಿವಾಹವಾಗಿತ್ತು. ಮನೆಯವರಿಗೆ ಯುವಕ ವಿದ್ಯುತ್ ಇಲಾಖೆಯಲ್ಲಿ ಸರ್ಕಾರಿ ನೌಕರ ಎಂದು ತಿಳಿಸಿದ್ದರು. ಆದರೆ, ಮದುವೆ ಬಳಿಕ ಗಂಡನ ಮನೆಗೆ ಹೋದಾಗ ಪತಿ ಎನ್ ಜಿಒದಲ್ಲಿ ಕೆಲಸ ಮಾಡುತ್ತಿರುವುದು ಬೆಳಕಿಗೆ ಬಂದಿದೆ. 2021 ರ, ಅಕ್ಟೋಬರ್ 29 ರಂದು, ಅವನು ತನ್ನ ಹೆಂಡತಿಯನ್ನು ಮನವೊಲಿಸಿ ಕತಾರ್‌ಗೆ ಕರೆದುಕೊಂಡು ಹೋಗಿದ್ದಾನೆ.

10 ಲಕ್ಷಕ್ಕೆ ಡೀಲ್:

ಪತಿ ಆಕೆಯನ್ನು ಕತಾರ್ ನ ಶೇಖ್ ಎಂಬುವವರಿಗೆ 10 ಲಕ್ಷ ರೂ.ಗೆ ಮಾರಾಟ ಮಾಡಿದ್ದಾನೆ. ಇದಾದ ನಂತರ ಅವರು ಭದ್ರತಾ ಸಿಬ್ಬಂದಿಯ ಸಹಾಯದಿಂದ ಹೇಗೋ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ, ಇದೀಗ ಸುರಕ್ಷಿತವಾಗಿ ಭಾರತಕ್ಕೆ ತಲುಪಿದ್ದಾಳೆ.

ಇದನ್ನೂ ಓದಿ: 56ನೇ ವಯಸ್ಸಿನ ಈ ರಾಜನಿಗೆ 16 ಮದುವೆ, 45 ಮಕ್ಕಳು

ಈ ಸಂಪೂರ್ಣ ವಿಷಯಕ್ಕೆ ಸಂಬಂಧಿಸಿದಂತೆ, ಮಹಿಳೆ ಇದೀಗ ರಾಜಧಾನಿಯ ದಿಘಾ ಪೊಲೀಸ್ ಠಾಣೆಯಲ್ಲಿ ತನ್ನ ಪತಿ ಮತ್ತು ಅತ್ತೆಯ ವಿರುದ್ಧ ವಂಚನೆ ಪ್ರಕರಣವನ್ನು ದಾಖಲಿಸಿದ್ದಾರೆ. ಇಲ್ಲಿ ಒನ್ ಸ್ಟಾಪ್ ಸೆಂಟರ್ ಮೂಲಕ ಮಹಿಳೆಗೆ ಕಾನೂನು ನೆರವು ನೀಡಲಾಗುತ್ತಿದೆ. ಕೇಂದ್ರಕ್ಕೆ ಬಂದಿರುವ ಮಾಹಿತಿ ಪ್ರಕಾರ ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ಮಹಿಳೆಯ ಅತ್ತೆ ಮಾವಂದಿರಿಗೆ ನೋಟಿಸ್ ನೀಡಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್