AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಕಸದೊಂದಿಗೆ ನಿಮ್ಮ ಪಿಂಡ ಪ್ರದಾನವನ್ನು ಇಲ್ಲೇ ಮಾಡುವ; ವೈರಲ್‌ ಆಯ್ತು ಬ್ಯಾನರ್‌

ಕೆಲ ದಿನಗಳ ಹಿಂದೆ ವಾಹನ ಸವಾರರು ನಿಧಾನವಾಗಿ ಚಲಿಸಿ ಎಂದು ರಸ್ತೆ ಬದಿ ಅಳವಡಿಸಿದ್ದಂತಹ ಎಚ್ಚರಿಕೆಯ ಫಲಕದ ಫೋಟೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗಿತ್ತು. ಇದೀಗ ಅಂತಹದ್ದೇ ಬ್ಯಾನರ್‌ ಫೋಟೋವೊಂದು ಹರಿದಾಡುತ್ತಿದ್ದು, “ಕಸದೊಂದಿಗೆ ನಿಮ್ಮ ಪಿಂಡ ಪ್ರದಾನವನ್ನು ಸಹ ಇಲ್ಲೇ ಮಾಡುವ; ಕಸ ಬಿಸಾಡುವ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ” ಎಂದು ಬರೆದಿರುವ ಬ್ಯಾನರ್‌ ಒಂದನ್ನು ಅಳವಡಿಸಿ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಎಚ್ಚರಿಕೆಯ ಸಂದೇಶವನ್ನು ನೀಡಲಾಗಿದೆ.

Viral: ಕಸದೊಂದಿಗೆ ನಿಮ್ಮ ಪಿಂಡ ಪ್ರದಾನವನ್ನು ಇಲ್ಲೇ ಮಾಡುವ; ವೈರಲ್‌ ಆಯ್ತು ಬ್ಯಾನರ್‌
ವೈರಲ್​ ಪೋಸ್ಟ್​
ಅಕ್ಷಯ್​ ಪಲ್ಲಮಜಲು​​
|

Updated on: Dec 10, 2024 | 12:24 PM

Share

ಇತ್ತೀಚಿಗಂತೂ ರಸ್ತೆ ಬದಿಗಳಲ್ಲಿ, ಕಂಡ ಕಂಡ ಸ್ಥಳಗಳಲ್ಲಿ ಕಸ ಎಸೆದು ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಈ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ, ಕಸ ಎಸೆದರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ರೂ ಜನ ಮಾತ್ರ ಇದಕ್ಕೆಲ್ಲ ಕ್ಯಾರೇ ಅನ್ನದೆ ಎಲ್ಲೆಂದರಲ್ಲಿ ಕಸ ಎಸೆದು ಹೋಗ್ತಾರೆ. ಈ ಕಸದ ಸಮಸ್ಯೆಯಿಂದ ಬೇಸತ್ತ ಇಲ್ಲೊಂದು ಊರಿನ ಜನ “ಕಸದೊಂದಿಗೆ ನಿಮ್ಮ ಪಿಂಡ ಪ್ರದಾನವನ್ನು ಸಹ ಇಲ್ಲೇ ಮಾಡುವ; ಕಸ ಬಿಸಾಡುವ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ” ಎಂದು ಬರೆದಿರುವ ಬ್ಯಾನರ್‌ ಒಂದನ್ನು ಅಳವಡಿಸಿ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ. ಈ ಬ್ಯಾನರ್‌ ಫೋಟೋ ಇದೀಗ ಸಖತ್‌ ವೈರಲ್‌ ಆಗಿದೆ.

ಇಲ್ಲಿ ಕಸ ಹಾಕಬಾರದು ಎಂಬ ಎಚ್ಚರಿಕೆಯ ಫಲಕ ಅಳವಡಿಸಿದರು ಕೂಡಾ ಕೆಲ ಜನ ಆ ಜಗದಲ್ಲಿಯೇ ಕಸವನ್ನು ಹಾಕಿ ಪರಿಸರದ ಸ್ವಚ್ಛತೆಯನ್ನು ಮತ್ತು ಸೌಂದರ್ಯವನ್ನು ಹಾಳು ಮಾಡುತ್ತಿದ್ದಾರೆ. ಕಸ ಎಸೆಯಬೇಡಿ ಎಂದು ಎಷ್ಟೇ ಹೇಳಿದರೂ ಮಾತು ಕೇಳದ ಜನರಿಗೆ ತಕ್ಕ ಪಾಠವನ್ನು ಕಲಿಸಬೇಕೆಂದು ಇಲ್ಲೊಂದು ಊರಿನ ಜನ “ಕಸದೊಂದಿಗೆ ನಿಮ್ಮ ಪಿಂಡ ಪ್ರದಾನವನ್ನು ಸಹ ಇಲ್ಲೇ ಮಾಡುವ; ಕಸ ಬಿಸಾಡುವ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ” ಎಂದು ಬರೆದಿರುವ ಬ್ಯಾನರ್‌ ಒಂದನ್ನು ಅಳವಡಿಸಿ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ.

Mr_chintu_memes ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿರುವ ಈ ಫೋಟೋದಲ್ಲಿ ಬ್ಯಾನರ್‌ ಒಂದರಲ್ಲಿ ನಿನ್ನ ಹೆಣ ಸುಡಲು ಇನ್ನೂ ಕಸ ಬೇಕು ಹಾಗಾಗಿ ಕಸ ತಂದು ಹಾಕು, ಕಸದೊಂದಿಗೆ ನಿನ್ನ ಪಿಂಡ ಪ್ರದಾನ ಇಲ್ಲೇ ಮಾಡುವ ʼಭಾವಪೂರ್ಣ ಶ್ರದ್ಧಾಂಜಲಿ; ಇಲ್ಲಿ ಕಸ ಬಿಸಾಡುವ ದಿವ್ಯ ಆತ್ಮಗಳಿಗೆ ಅರ್ಪಣೆ ಎಂದು ಎಚ್ಚರಿಕೆ ಸಂದೇಶವನ್ನು ಬರೆದಿರುವುದನ್ನು ಕಾಣಬಹುದು. ಈ ಎಚ್ಚರಿಕೆಯ ಬ್ಯಾನರ್‌ ಇದೀಗ ಫುಲ್‌ ವೈರಲ್‌ ಆಗುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ