AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಾನವೀಯತೆ ಅಂದ್ರೆ ಇದೇ ಅಲ್ಲವೇ; ಕಾಲಿಲ್ಲದ ಶ್ವಾನಕ್ಕೆ ರಸ್ತೆ ದಾಟಲು ನೆರವಾದ ಹೃದಯವಂತರು

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ದೃಶ್ಯಗಳು ನೆಟ್ಟಿಗರ ಗಮನ ಸೆಳೆಯುತ್ತವೆ. ಆದರೆ ಇದೀಗ ಕಾಲಿಲ್ಲದೇ ರಸ್ತೆ ದಾಟಲು ಕಷ್ಟ ಪಡುತ್ತಿದ್ದ ಶ್ವಾನಕ್ಕೆ ವ್ಯಕ್ತಿಗಳಿಬ್ಬರೂ ಸಹಾಯ ಮಾಡಿದ್ದಾರೆ. ಈ ಹೃದಯ ಸ್ಪರ್ಶಿ ಕ್ಷಣದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮಾನವೀಯತೆ ಅಂದ್ರೆ ಇದೇ ಅಲ್ಲವೇ; ಕಾಲಿಲ್ಲದ ಶ್ವಾನಕ್ಕೆ ರಸ್ತೆ ದಾಟಲು ನೆರವಾದ ಹೃದಯವಂತರು
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Oct 15, 2026 | 10:44 AM

Share

ಈಗಿನ ಕಾಲದಲ್ಲಿ ಮಾನವೀಯತೆ ಅನ್ನೋದು ಮರೆಯಾಗಿದೆ ಎನ್ನುವ ಮಾತಿದೆ. ಹೀಗಾಗಿ ಇತರರಿಗೆ ಸಹಾಯ ಮಾಡುವುದು ಬಿಡಿ, ಅವರ ಕಷ್ಟಗಳನ್ನು ನೋಡಿಯೂ ನೋಡದಂತೆ ಹೋಗುವವರೇ ಹೆಚ್ಚು. ಆದರೆ ಈ ವ್ಯಕ್ತಿಗಳು ತಮ್ಮ ಒಳ್ಳೆತನದಿಂದಲೇ ಎಲ್ಲರ ಗಮನ ಸೆಳೆದಿದ್ದಾರೆ. ಒಂದು ಕಾಲು ಕಳೆದುಕೊಂಡ ಶ್ವಾನವು (Dog) ರಸ್ತೆ ದಾಟಲು ಕಷ್ಟ ಪಡುತ್ತಿದೆ. ಈ ಶ್ವಾನಕ್ಕೆ ರಸ್ತೆ ದಾಟಿಸಿ ವ್ಯಕ್ತಿಗಳಿಬ್ಬರು ಹೃದಯ ಶ್ರೀಮಂತಿಕೆ ಮೆರೆದಿದ್ದಾರೆ. ವ್ಯಕ್ತಿಗಳಿಬ್ಬರ ಒಳ್ಳೆತನವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

ಕಾಲಿಲ್ಲದ ಶ್ವಾನಕ್ಕೆ ರಸ್ತೆ ದಾಟಲು ನೆರವಾದ ಹೃದಯವಂತರು

ಹಸನ್ ಸಿಕ್ದರ್ ಡಿಎಸ್ (Hasansikder. ds) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಶೀರ್ಷಿಕೆಯಲ್ಲಿ ಇಂತಹ ಜನರ ಅಗತ್ಯ ಜಗತ್ತಿಗೆ ಹೆಚ್ಚಿದೆ. ನಡೆಯಲಾರದವರಿಗೆ ಸಹಾಯ ಮಾಡಲು ನಿಲ್ಲುವಂತಹ, ಮೃದು ಹೃದಯದ ವ್ಯಕ್ತಿಗಳು ಇವರು ಎಂದು ಬರೆಯಲಾಗಿದೆ. ಇಲ್ಲಿ ಮೂಕ ಪ್ರಾಣಿಯ ಕಷ್ಟಕ್ಕೆ ಸ್ಪಂದಿಸಿದ ವ್ಯಕ್ತಿಗಳಿಬ್ಬರ ಒಳ್ಳೆತನವನ್ನು ಕಾಣಬಹುದು. ರೆಡ್ ಸಿಗ್ನಲ್ ನಲ್ಲಿ ವಾಹನಗಳು ನಿಂತಿದ್ದು, ಶ್ವಾನವು ರಸ್ತೆ ದಾಟಲು ಕಷ್ಟಪಡುತ್ತಿದೆ. ಇದನ್ನು ಗಮನಿಸಿದ ವ್ಯಕ್ತಿಗಳಿಬ್ಬರು ಈ ಶ್ವಾನವನ್ನು ನಿಧಾನವಾಗಿ ರಸ್ತೆ ದಾಟಿಸಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಚೇರ್ ಒಳಗೆ ತಲೆ ಸಿಲುಕಿಕೊಂಡು ಒದ್ದಾಡಿದ ಶ್ವಾನ, ವೈರಲ್‌ ಆಯ್ತು ದೃಶ್ಯ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ವ್ಯಕ್ತಿಗಳ ಒಳ್ಳೆತನಕ್ಕೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿವೆ. ಒಬ್ಬ ಬಳಕೆದಾರ, ಒಳ್ಳೆಯ ಕೆಲಸ ಸರ್ ಎಂದು ಹೇಳಿದರೆ, ಮತ್ತೊಬ್ಬರು, ಬೇರೆಯವರ ಕಷ್ಟಕ್ಕೆ ಮಿಡಿಯುವ ಇಂತಹ ವ್ಯಕ್ತಿಗಳು ಕಂಡಾಗ ನಿಜಕ್ಕೂ ಖುಷಿಯಾಗುತ್ತದೆ ಎಂದಿದ್ದಾರೆ. ಇನ್ನೊಬ್ಬ ಬಳಕೆದಾರ, ಕಣ್ಣಲ್ಲಿ ನೀರು ಬಂತು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
₹90 ಲಕ್ಷ ಹೂವಿನ ಅಲಂಕಾರ: ಹಾಸನಾಂಬೆ ಜಾತ್ರೆ ಖರ್ಚು ಕೇಳಿ ರೇವಣ್ಣ ಶಾಕ್!
₹90 ಲಕ್ಷ ಹೂವಿನ ಅಲಂಕಾರ: ಹಾಸನಾಂಬೆ ಜಾತ್ರೆ ಖರ್ಚು ಕೇಳಿ ರೇವಣ್ಣ ಶಾಕ್!
ಅಂಕಿತಾ ಭಂಡಾರಿ ಕೊಲೆ, ಪೋಷಕರ ಪ್ರತಿಭಟನೆಗೆ ರಾಹುಲ್, ಪ್ರಿಯಾಂಕಾ ಸಾಥ್
ಅಂಕಿತಾ ಭಂಡಾರಿ ಕೊಲೆ, ಪೋಷಕರ ಪ್ರತಿಭಟನೆಗೆ ರಾಹುಲ್, ಪ್ರಿಯಾಂಕಾ ಸಾಥ್
ಒಳಗೊಳಗೆ ಮಸಲತ್ತು ಮಾಡಿದ ಗಾನವಿ; ತಮ್ಮ ತಂಡಕ್ಕೆ ಮೋಸ?
ಒಳಗೊಳಗೆ ಮಸಲತ್ತು ಮಾಡಿದ ಗಾನವಿ; ತಮ್ಮ ತಂಡಕ್ಕೆ ಮೋಸ?
ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಿಸಿದ ಕಬ್ಬು ಬೆಳೆಗಾರರು
ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಿಸಿದ ಕಬ್ಬು ಬೆಳೆಗಾರರು
ಅಗ್ನಿ ಪರೀಕ್ಷೆಗೆ 18 ಕಿಲೋಮೀಟರ್ ನಡೆದುಕೊಂಡು ಹೋಗಿದ್ದೆ: ಕಷ್ಟ ನೆನೆದ ಮಂಜ
ಅಗ್ನಿ ಪರೀಕ್ಷೆಗೆ 18 ಕಿಲೋಮೀಟರ್ ನಡೆದುಕೊಂಡು ಹೋಗಿದ್ದೆ: ಕಷ್ಟ ನೆನೆದ ಮಂಜ
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು