ದಕ್ಷಿಣ ಅಮೆರಿಕಾದ ಪೆರುವಿನ ಅತ್ಯಂತ ಆಘಾತಕಾರಿ ಸಿಸಿಟಿವಿ ದೃಶ್ಯಾವಳಿಯೊಂದು ವೈರಲ್ ಆಗಿದೆ. ಜನರು ಫುಟ್‌ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದಂತೆ ಏಕಾಏಕಿ ಭಾರಿ ಸ್ಫೋಟ ಸಂಭವಿಸಿದ್ದು, ಅಲ್ಲಿದ್ದ ಮಹಿಳೆಯೊಬ್ಬಳು ರಸ್ತೆಯ ಹೊಂಡಕ್ಕೆ ಬಿದ್ದಿದ್ದಾರೆ. ಈ ಹಠಾತ್ ಘಟನೆಯಿಂದ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಭೀಕರ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವೈರಲ್ ಆಗುತ್ತಿರುವ ಸಿಸಿಟಿವಿ ದೃಶ್ಯದಲ್ಲಿ, ಜನರು ಫುಟ್‌ಪಾತ್ ಮೇಲೆ ಹೋಗುತ್ತಿರುವುದನ್ನು ಕಾಣಬಹುದು. ಆದರೆ ಇದಕ್ಕಿದ್ದಂತೆ ಫುಟ್‌ಪಾತ್‌ನ ಅಡಿಯಲ್ಲಿದ್ದ ಎಲೆಕ್ಟ್ರಿಕ್ ಬಾಕ್ಸ್ ನಲ್ಲಿ ಸ್ಫೋಟವಾಗಿದೆ. ಸ್ಫೋಟವು ಎಷ್ಟು ಪ್ರಬಲವಾಗಿದೆ ಎಂದರೆ ರಸ್ತೆ ಆಳವಾದ ಹೊಂಡವಾಗಿದೆ. ಈ ಘಟನೆ ಡಿಸೆಂಬರ್ 5 ರಂದು ಲಿಮಾದಲ್ಲಿ ನಡೆದಿದೆ. ಸ್ಫೋಟದಿಂದಾಗಿ ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ.
ಮಹಿಳೆ ಫುಟ್‌ಪಾತ್‌ನ ಪಕ್ಕದಲ್ಲಿರುವ ಜೀಬ್ರಾ ಕ್ರಾಸಿಂಗ್‌ಗೆ ಬಂದ ತಕ್ಷಣ, ಭೂಗತ ಎಲೆಕ್ಟ್ರಿಕ್ ಬಾಕ್ಸ್‌ನಲ್ಲಿ ಏಕಾಏಕಿ ಸ್ಫೋಟ ಸಂಭವಿಸಿ ಭೀಕರವಾದ ಬೆಂಕಿಯ ಜ್ವಾಲೆ ಉಂಟಾಗಿರುವುದನ್ನು ವೈರಲ್ ವಿಡಿಯೋದಲ್ಲಿ ಕಾಣಬಹುದು.
ಇದನ್ನೂ ಓದಿ: ಚೆನ್ನೈ- ಬೆಂಗಳೂರು ಹೆದ್ದಾರಿಯಲ್ಲಿ ಟ್ರಕ್ ಡಿಕ್ಕಿಯಾಗಿ ಪಲ್ಟಿ ಹೊಡೆದ ಬಸ್; ಭೀಕರ ವಿಡಿಯೋ ವೈರಲ್
ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಕೇಬಲ್ ನಿರ್ವಹಣೆಯ ಕೊರತೆ ಮತ್ತು ಹೆಚ್ಚಿದ ವಿದ್ಯುತ್ ಪೂರೈಕೆಯಿಂದಾಗಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. TRT ವರ್ಲ್ಡ್ ಪ್ರಕಾರ, ಅಪಘಾತದಲ್ಲಿ ಗಾಯಗೊಂಡ ಮಹಿಳೆ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಸ್ಫೋಟಕ್ಕೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ತನಿಖೆ ನಡೆಯುತ್ತಿದೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ