AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರಸ್ತೆಯಲ್ಲಿ ಬಿದ್ದಿದ್ದ ಗುಬ್ಬಚ್ಚಿಗೆ ನೀರು ಕುಡಿಸಿ ಬಾಯಾರಿಕೆ ನೀಗಿಸಿದ ಕರ್ತವ್ಯ ನಿರತ ಪೊಲೀಸ್

ಯಾವುದೇ ಸ್ವಾರ್ಥವಿಲ್ಲದೇ ಸಹಾಯ ಮಾಡುವ ಒಳ್ಳೆಯ ಮನಸ್ಸಿನ ವ್ಯಕ್ತಿಗಳನ್ನು ಕಂಡಾಗ ನಿಜಕ್ಕೂ ಖುಷಿಯಾಗುತ್ತದೆ. ಕೆಲವರು ಈ ಮೂಕ ಪ್ರಾಣಿ ಪಕ್ಷಿಗಳ ಹಸಿವನ್ನು ನೀಗಿಸುತ್ತಾರೆ. ಸಂಕಷ್ಟದಲ್ಲಿ ಸಿಲುಕಿದ ಪ್ರಾಣಿ ಪಕ್ಷಿಗಳನ್ನು ರಕ್ಷಿಸಿ ಅವುಗಳ ಜೀವ ಉಳಿಸುತ್ತಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಬಿಸಿಲಿನ ಝಳಕ್ಕೆ ರಸ್ತೆಗೆ ಬಿದ್ದಿದ್ದ ಗುಬ್ಬಚ್ಚಿಯನ್ನು ಪೊಲೀಸಬ್ಬರು ರಕ್ಷಿಸಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಕರ್ತವ್ಯದಲ್ಲಿದ್ದ ಪೊಲೀಸರ ಒಳ್ಳೆಯ ಮನಸ್ಸಿಗೆ ಫಿದಾ ಆಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ರಸ್ತೆಯಲ್ಲಿ ಬಿದ್ದಿದ್ದ ಗುಬ್ಬಚ್ಚಿಗೆ ನೀರು ಕುಡಿಸಿ ಬಾಯಾರಿಕೆ ನೀಗಿಸಿದ ಕರ್ತವ್ಯ ನಿರತ ಪೊಲೀಸ್
ವೈರಲ್ ವಿಡಿಯೋImage Credit source: Facebook
ಸಾಯಿನಂದಾ
|

Updated on: Feb 13, 2026 | 12:04 PM

Share

ನಮ್ಮಲ್ಲಿ ಕೆಲವರಿಗೆ ಈ ಪ್ರಾಣಿ (Animal), ಪಕ್ಷಿಗಳೆಂದರೆ ಎಲ್ಲಿಲ್ಲದ ಪ್ರೀತಿ. ಅವುಗಳಿಗೆ ಆಹಾರ ಹಾಕುವುದು, ನೀರು ಕುಡಿಯಲು ಇಡುವುದು ಹೀಗೆ ಅವುಗಳ ಹಸಿವು ನೀಗಿಸುವಂತಹ ಪ್ರಯತ್ನ ಮಾಡ್ತಾರೆ. ಈ ಮೂಕ ಪ್ರಾಣಿ ಪಕ್ಷಿಗಳು ಸಂಕಷ್ಟಕ್ಕೆ ಸಿಲುಕಿದೆ ಎಂದರೆ ತಮ್ಮ ಪ್ರಾಣ ಒತ್ತೆ ಇಟ್ಟು ಅವುಗಳನ್ನು ರಕ್ಷಿಸುತ್ತಾರೆ. ಈ ವಿಡಿಯೋ ನೋಡಿದರೆ ಪೊಲೀಸಪ್ಪನ ಒಳ್ಳೆಯ ಮನಸ್ಸಿಗೆ ನೀವು ಕರಗಿ ಹೋಗ್ತೀರಾ. ಬಿಸಿಲಿನ ಝಳಕ್ಕೆ ರಸ್ತೆಯಲ್ಲಿ ಬಿದ್ದಿದ್ದ ಗುಬ್ಬಚ್ಚಿಗೆ ನೀರು ಕೊಟ್ಟು ಪೊಲೀಸರೊಬ್ಬರು ಬಾಯಾರಿಕೆ ನೀಗಿಸಿದ್ದಾರೆ. ಈ ಹೃದಯಸ್ಪರ್ಶಿ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Prakash Gadivaddar ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಕರ್ತವ್ಯ ನಿರತರಾಗಿದ್ದ ಪೊಲೀಸರು ವಾಹನದಲ್ಲಿ ಹೋಗುತ್ತಿದ್ದ ವೇಳೆ ಗುಬ್ಬಚ್ಚಿಯೊಂದು ವಾಹನದೊಳಗೆ ಬಂದು ಏನೋ ಸೂಚನೆ ನೀಡಿದೆ. ಇದನ್ನು ಗಮನಿಸಿದ ಪೊಲೀಸರು ವಾಹನ ನಿಲ್ಲಿಸಿದ್ದಾರೆ. ಈ ವೇಳೆ ರಸ್ತೆಯಲ್ಲಿ ಗುಬ್ಬಚ್ಚಿ ಮರಿಯೊಂದು ಬಿಸಿಲಿನ ಝಳಕ್ಕೆ ರಸ್ತೆಗೆ ಬಿದ್ದಿದೆ. ಕೊನೆಗೆ  ಗುಬ್ಬಚ್ಚಿಯನ್ನು ಮೆಲ್ಲನೆ ಮೇಲಕ್ಕೆತ್ತಿ ಅದಕ್ಕೆ ನೀರು ಕುಡಿಸಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಕಾಡುಕೋಣ ಹೇಗೆ ಘೀಳಿಡುತ್ತಿದೆ ಗೊತ್ತಾ? ಈ ವಿಡಿಯೋ ನೋಡಿ

ಈ ವಿಡಿಯೋ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಒಬ್ಬ ಬಳಕೆ ನಿಮ್ಮ ಒಳ್ಳೆಯ ಮನಸ್ಸು ಕಂಡು ಖುಷಿಯಾಯ್ತು ಎಂದಿದ್ದಾರೆ. ಇನ್ನೊಬ್ಬರು, ಮಾಡರ್ನ್ ಪಕ್ಷಿ ಪ್ರೇಮಿ ಸಲಿಂಅಲಿ ಸರ್ ನೀವು. ವೃತ್ತಿ ಜೀವನದ ಜೊತೆಯಲ್ಲಿಯೇ ಪ್ರಾಣಿ ಪಕ್ಷಗಳನ್ನು ಸಂರಕ್ಷಿಸುವಲ್ಲಿ ನಿಮ್ಮ ಪಾತ್ರ ಅಪಾರ ಸರ್.. ಸಾಮಾಜಿಕ ಜಾಲತಾಣದಲ್ಲಿ ನೋಡ್ತಿರ್ತೀವಿ ಸರ್ ಆ ದೇವರು ನಿಮಗೆ ಆಯುಶ್ಯ ಆರೋಗ್ಯಸ್ಥೆ ಕೊಟ್ಟು ಕಾಪಾಡಲಿ ಸರ್ ಜೀ ಎಂದು ಹೇಳಿದ್ದಾರೆ. ಮತ್ತೊಬ್ಬರು, ಮೂಕ ಪಕ್ಷಿಗಳ ಹಿತೈಷಿಗೆ ನಮನಗಳು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ