AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh: ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

Viral Video: ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಪುಟ್ಟ ವಿದ್ಯಾರ್ಥಿಗಳೆಲ್ಲಾ ಸ್ನೇಹಿತನ ವಿರುದ್ಧ ದೂರು ಕೊಡಲು ಪೊಲೀಸ್ ಠಾಣೆಗೆ ಹೋಗಿದ್ದಾರೆ. ಸ್ನೇಹಿತ ಪೆನ್ಸಿಲ್ ಕದ್ದವ ಹಿಂತಿರುಗಿಸಲೇ ಇಲ್ಲ! ನಮಗೆ ನ್ಯಾಯ ಒದಗಿಸಬೇಕು ಎಂದು ಪೊಲೀಸರ ಮುಂದೆ ಹೇಳಿಕೊಂಡಿದ್ದಾರೆ. ಈ ದೃಶ್ಯದ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.

Andhra Pradesh: ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!
ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು
TV9 Web
| Edited By: |

Updated on:Nov 26, 2021 | 3:24 PM

Share

ಪುಟ್ಟ ವಿದ್ಯಾರ್ಥಿಗಳಿದ್ದಾಗ ಶಾಲೆಯಲ್ಲಿ ಕಳೆದ ದಿನಗಳನ್ನು ನೆನೆಸಿಕೊಂಡರೆ ಎಷ್ಟು ಖುಷಿಯಾಗುತ್ತೆ ಅಲ್ವೇ? ಪಕ್ಕದಲ್ಲಿ ಕುಳಿತುಕೊಳ್ಳುತ್ತಿದ್ದ ಸ್ನೇಹಿತನನ್ನು ಕಂಡರೆ ಕೋಪ, ನನ್ನ ಬಳಪ, ನನ್ನ ಪೆನ್ಸಿಲ್, ನನ್ನ ಪೆನ್ನು ಎನ್ನುತ್ತಾ ಸಣ್ಣ ಸಣ್ಣ ವಿಷಯಕ್ಕೂ ಜಗಳವಾಡುತ್ತಿದ್ದ ನೆನಪುಗಳೆಲ್ಲಾ ಮರುಕಳಿಸಿದ್ರೆ, ಬಾಲ್ಯಾವಸ್ಥೆಯೇ ಚೆನ್ನಾಗಿರ್ತಿತ್ತು ಅನ್ಸುತ್ತೆ. ಇದೀಗ ವೈರಲ್ ಆದ ವಿಡಿಯೊದಲ್ಲಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಪುಟ್ಟ ವಿದ್ಯಾರ್ಥಿಗಳೆಲ್ಲಾ ಸ್ನೇಹಿತನ ವಿರುದ್ಧ ದೂರು ಕೊಡಲು ಪೊಲೀಸ್ ಠಾಣೆಗೆ ಹೋಗಿದ್ದಾರೆ. ಸ್ನೇಹಿತ ಪೆನ್ಸಿಲ್ ಕದ್ದವ ಹಿಂತಿರುಗಿಸಲೇ ಇಲ್ಲ! ನಮಗೆ ನ್ಯಾಯ ಒದಗಿಸಬೇಕು ಎಂದು ಪೊಲೀಸರ ಮುಂದೆ ಹೇಳಿಕೊಂಡಿದ್ದಾರೆ. ಈ ದೃಶ್ಯದ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.

ಆಂಧ್ರಪ್ರದೇಶ ಕರ್ನೂಲ್ ಜಿಲ್ಲೆಯ ಪೊಲೀಸರು, ಪುಟ್ಟ ಬಾಲಕರೆಲ್ಲಾ ಪೊಲೀಸ್ ಠಾಣೆಗೆ ಬಂದು ದೂರು ಹೇಳುತ್ತಿರುವುದನ್ನು ಕಂಡು ಆಶ್ಚರ್ಯಚಕಿತರಾಗಿದ್ದಾರೆ. ಈ ದೃಶ್ಯದ ವಿಡಿಯೊವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಪೊಲೀಸರು ಪ್ರಶ್ನೆ ಕೆಳುತ್ತಿದ್ದಂತೆಯೇ ಮಕ್ಕಳು ಉತ್ತರ ಕೊಡುತ್ತಿದ್ದಾರೆ. ಅಲ್ಲೊಬ್ಬ ಪುಟ್ಟ ಬಾಲಕ ಹೇಳುತ್ತಿರುವುದನ್ನು ವಿಡಿಯೊದಲ್ಲಿ ನೋಡಬಹುದು. ನನ್ನ ಪೆನ್ಸಿಲ್ ತೆಗೆದುಕೊಂಡವ ವಾಪಾಸ್ ಕೊಡಲೇ ಇಲ್ಲ! ಅನ್ನುತ್ತಿದ್ದಾನೆ. ಈ ಸಮಸ್ಯೆಯನ್ನು ಪರಿಹರಿಸುವಂತೆ ಪೊಲೀಸರ ಬಳಿ ಕೇಳಿಕೊಳ್ಳುತ್ತಿದ್ದಾನೆ. ಈ ದೃಶ್ಯದ ವಿಡಿಯೊವನ್ನು ಆಂಧ್ರಪ್ರದೇಶದ ಪೊಲೀಸರು ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈತ ನನ್ನ ಪೆನ್ಸಿಲ್ ತೆಗೆದುಕೊಂಡು ಹಿಂತಿರುಗಿಸಲೇ ಇಲ್ಲ ಎಂದು ಪುಟ್ಟ ಬಾಲಕ ದೂರು ನೀಡುತ್ತಿರುವುದನ್ನು ವಿಡಿಯೊದಲ್ಲಿ ನೋಡಬಹುದು. ಈಗ ನಾನು ಏನು ಮಾಡಬೇಕು ಎಂದು ಪೋಲೀಸರು ಕೇಳುತ್ತಿದ್ದಂತೆಯೇ, ಈತನ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಪೆಟ್ಟ ಬಾಲಕ ಹೇಳುತ್ತಾನೆ. ಈ ಸಂದರ್ಭದಲ್ಲಿ ಆತನ ಇನ್ನಿತರ ಸ್ನೇಹತರೂ ಸಹ ಹಿಂದೆ ಸಾಕ್ಷಿದಾರರಾಗಿ ನಿಂತು ನಗುತ್ತಿರುವುದನ್ನು ನೋಡಬಹುದು.

ಪೊಲೀಸರು, ಇಬ್ಬರ ಬಳಿಯೂ ಮಾತನಾಡಿ ಮಕ್ಕಳ ನಡುವಿನ ಮನಸ್ತಾಪವನ್ನು ಸರಿಪಡಿಸಿದ್ದಾರೆ. ವಿಡಿಯೋದ ಕೊನೆಯಲ್ಲಿ ನೋಡುವಂತೆ, ಇಬ್ಬರು ಪುಟ್ಟ ಬಾಲಕರು ರಾಜಿ ಮಾಡಿಕೊಂಡು ಕೈಹಿಡಿದು ಪರಸ್ಪರ ಇಬ್ಬರು ಮುಖ ನೋಡಿ ನಗುವುದನ್ನು ನೋಡಬಹುದು.

ಇದನ್ನೂ ಓದಿ:

Viral Video: ಬಾಯಾರಿಕೆ ತಡೆಯಲಾಗದೇ ಹ್ಯಾಂಡಲ್ ಪಂಪ್ ಒತ್ತಿ ನೀರು ಕುಡಿದ ಎಮ್ಮೆ; ವಿಡಿಯೊ ನೋಡಿ

Viral Video: ಮನಿಕೆ ಮಗೆ ಹಿತೆ ಹಾಡಿಗೆ ಪುಟ್ಟ ಬಾಲಕಿಯ ಸಕತ್​ ಸ್ಟೆಪ್

Published On - 3:23 pm, Fri, 26 November 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ