Viral Video: ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌- ಲೇಡಿ ಟೀಚರ್‌ ರೊಮ್ಯಾನ್ಸ್‌, ವೈರಲ್‌ ಆಯ್ತು ಸರಸ ಸಲ್ಲಾಪದ ದೃಶ್ಯ

ಪ್ರತಿಷ್ಠಿತ ಶಾಲೆಯೊಂದರಲ್ಲಿ ನಾಚಿಕೆಗೇಡಿನ ಸಂಗತಿಯೊಂದು ನಡೆದಿದ್ದು, ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌ ಮತ್ತು ಲೇಡಿ ಟೀಚರ್‌ ಮೈಮರೆತು ಸರಸ ಸಲ್ಲಾಪದಲ್ಲಿ ತೊಡಗಿದ್ದಾರೆ. ಇವರ ರೊಮ್ಯಾನ್ಸ್‌ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ವಿದ್ಯಾ ದೇಗುಲದಲ್ಲಿ ಇಂತಹ ಹೇಯ ಕೃತ್ಯ ನಡೆಸಿರುವುದಕ್ಕೆ ನೆಟ್ಟಿಗರು ಭಾರೀ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

Viral Video: ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌- ಲೇಡಿ ಟೀಚರ್‌ ರೊಮ್ಯಾನ್ಸ್‌, ವೈರಲ್‌ ಆಯ್ತು ಸರಸ ಸಲ್ಲಾಪದ ದೃಶ್ಯ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 09, 2024 | 6:09 PM

ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಮಾದರಿಯಾಗಬೇಕು, ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ದಾರಿದೀಪವಾಗಬೇಕು. ಆದರೆ ಇಲ್ಲೊಂದು ಶಾಲೆಯಲ್ಲಿ ಮಕ್ಕಳಿಗೆ ಮಾದರಿಯಾಗಬೇಕಿದ್ದ ಶಿಕ್ಷಕರೇ ದಾರಿ ತಪ್ಪಿದ್ದಾರೆ. ಹೌದು ಇತ್ತೀಚಿಗೆ ಪ್ರತಿಷ್ಠಿತ ಶಾಲೆಯೊಂದರಲ್ಲಿ ನಾಚಿಕೆಗೇಡಿನ ಸಂಗತಿಯೊಂದು ನಡೆದಿದ್ದು, ಹೆಡ್‌ ಮಾಸ್ಟರ್‌ ಮತ್ತು ಲೇಡಿ ಟೀಚರ್‌ ಶಾಲಾ ಕೊಠಡಿಯಲ್ಲಿಯೇ ರೊಮ್ಯಾನ್ಸ್‌ ಮಾಡಿದ್ದಾರೆ. ಇವರ ಚಕ್ಕಂದದ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ವಿದ್ಯಾ ದೇಗುಲದಲ್ಲಿ ಇಂತಹ ಹೇಯ ಕೃತ್ಯ ನಡೆಸಿರುವುದಕ್ಕೆ ನೆಟ್ಟಿಗರು ಭಾರೀ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ವರದಿಗಳ ಪ್ರಕಾರ ಈ ನಾಚಿಕೆಗೇಡಿನ ಘಟನೆ ಉತ್ತರ ಪ್ರದೇಶದ ಜಾನ್‌ಪುರದಲ್ಲಿ ನಡೆದಿದ್ದು, ಇಲ್ಲಿನ ಪ್ರತಿಷ್ಠಿತ ಕಾನ್ವೆಂಟ್‌ ಶಾಲೆಯೊಂದರಲ್ಲಿ ಪ್ರಿನ್ಸಿಪಾಲ್‌ ಮತ್ತು ಶಿಕ್ಷಕಿಯೊಬ್ಬರು ಚಕ್ಕಂದವಾಡಿ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದಾರೆ. ಈ ಇಬ್ಬರೂ ಶಾಲಾ ಕೊಠಡಿಯಲ್ಲಿಯೇ ಒಬ್ಬರನ್ನೊಬ್ಬರು ತಬ್ಬಿಕೊಂಡು ಸರಸ ಸಲ್ಲಾಪದಲ್ಲಿ ತೊಡಗಿದ್ದು, ಈ ದೃಶ್ಯವನ್ನು ಕ್ಯಾಮೆರಾದಲ್ಲಿ ರೆಕಾರ್ಡ್‌ ಮಾಡಿ ಯಾರೋ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಶಾಲೆಯಲ್ಲಿ ಮಹಾನ್‌ ವ್ಯಕ್ತಿಗಳ ಫೋಟೋಗಳ ಮುಂದೆಯೇ ಇಂತಹ ಕೃತ್ಯ ಎಸಗಿದ ಈ ಇಬ್ಬರೂ ಶಿಕ್ಷಕರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಕುರಿತ ಪೋಸ್ಟ್‌ ಒಂದನ್ನು Hindikhabar ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಮಹಿಳಾ ಶಿಕ್ಷಕಿಯೊಂದಿಗೆ ಪ್ರಿನ್ಸಿಪಾಲ್‌ ಚಕ್ಕಂದವಾಡಿದ ವಿಡಿಯೋ ವೈರಲ್‌ ಆಗಿದೆ, ಶಿಕ್ಷಕರು ತಮ್ಮ ಘನತೆಯನ್ನು ಮರೆತಾಗ ವಿದ್ಯಾರ್ಥಿಗಳ ಭವಿಷ್ಯ ಏನಾಗಬಹುದು?” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ ( ಎಕ್ಸ್​​ ಖಾತೆ)

ವೈರಲ್‌ ವಿಡಿಯೋದಲ್ಲಿ ಶಾಲಾ ಕೊಠಡಿಯೊಳಗೆ ಮಹಾನ್‌ ವ್ಯಕ್ತಿಗಳ ಫೋಟೋಗಳ ಮುಂದೆಯೇ ಹೆಡ್‌ ಮಾಸ್ಟರ್‌ ಮತ್ತು ಟೀಚರ್‌ ಒಬ್ಬರನ್ನೊಬ್ಬರು ತಬ್ಬಿಕೊಂಡು ಸರಸ ಸಲ್ಲಾಪದಲ್ಲಿ ತೊಡಗಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ನಡುರಸ್ತೆಯಲ್ಲಿ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿದ ಕಾಮುಕ; ವಿಡಿಯೋ ವೈರಲ್‌

ಜೂನ್‌ 08 ರಂದು ಹಂಚಿಕೊಳ್ಳಲಾದ ಈ ವಿಡಿಯೋ 3 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಅಲ್ಲಾ ಇಂತಹ ಶಿಕ್ಷಕರು ನಾಚಿಕೆ ಮತ್ತು ವಿನಯವನ್ನು ಬದಿಗಿಟ್ಟು ವಿದ್ಯಾರ್ಥಿಗಳಿಗೆ ಏನನ್ನು ಕಲಿಸುತ್ತಾರೆʼ ಎಂದು ಕಿಡಿಕಾರಿದ್ದಾರೆ. ಇನ್ನೂ ಅನೇಕರು ವಿದ್ಯಾ ದೇಗುಲದಲ್ಲಿ ಇಂತಹ ಹೇಯ ಕೃತ್ಯ ನಡೆಸಿರುವುದಕ್ಕೆ ಭಾರೀ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವಿಧಾನಸೌಧದಲ್ಲಿ ಶ್ರೀರಾಮನ ಭಜನೆ ಮಾಡುತ್ತ ಧರಣಿ: ವಿಡಿಯೋ ನೋಡಿ
ವಿಧಾನಸೌಧದಲ್ಲಿ ಶ್ರೀರಾಮನ ಭಜನೆ ಮಾಡುತ್ತ ಧರಣಿ: ವಿಡಿಯೋ ನೋಡಿ
ಸದನದ ಕಾರ್ಯಕಲಾಪಗಳನ್ನು ರಾಜ್ಯಪಾಲರ ಗಮನಕ್ಕೆ ತಂದ ಸಿಎಂ ಸಿದ್ದರಾಮಯ್ಯ
ಸದನದ ಕಾರ್ಯಕಲಾಪಗಳನ್ನು ರಾಜ್ಯಪಾಲರ ಗಮನಕ್ಕೆ ತಂದ ಸಿಎಂ ಸಿದ್ದರಾಮಯ್ಯ
ಕೊಲೆ ಕೇಸ್​ನಲ್ಲಿ 11 ವರ್ಷ ಜೈಲು ಶಿಕ್ಷೆ ಬಗ್ಗೆ ಖೈದಿ ಹೇಳಿದ್ದೇನು?
ಕೊಲೆ ಕೇಸ್​ನಲ್ಲಿ 11 ವರ್ಷ ಜೈಲು ಶಿಕ್ಷೆ ಬಗ್ಗೆ ಖೈದಿ ಹೇಳಿದ್ದೇನು?
‘ನನ್ನ ಕ್ಷೇತ್ರದ ಅನುದಾನ ನೀವು ಕಿತ್ಕೊಂಡ್ರಿ; ಮಾಜಿ MLA ಮಂಜುನಾಥ್‌ ಕಿಡಿ
‘ನನ್ನ ಕ್ಷೇತ್ರದ ಅನುದಾನ ನೀವು ಕಿತ್ಕೊಂಡ್ರಿ; ಮಾಜಿ MLA ಮಂಜುನಾಥ್‌ ಕಿಡಿ
ಯುವನಟ ಮನೋಜ್ ವಿಹಾನ್ ಗೆ ಸಿಗಲಿಲ್ಲ ದರ್ಶನ್ ರನ್ನು ಭೇಟಿಯಾಗುವ ಅವಕಾಶ
ಯುವನಟ ಮನೋಜ್ ವಿಹಾನ್ ಗೆ ಸಿಗಲಿಲ್ಲ ದರ್ಶನ್ ರನ್ನು ಭೇಟಿಯಾಗುವ ಅವಕಾಶ
ಸಭಾಧ್ಯಕ್ಷ ಯುಟಿ ಖಾದರ್ ಪಕ್ಷಾಪಾತ ದೋರಣೆ ಪ್ರದರ್ಶಿಸುತ್ತಿದ್ದಾರೆ ; ಅಶೋಕ
ಸಭಾಧ್ಯಕ್ಷ ಯುಟಿ ಖಾದರ್ ಪಕ್ಷಾಪಾತ ದೋರಣೆ ಪ್ರದರ್ಶಿಸುತ್ತಿದ್ದಾರೆ ; ಅಶೋಕ
ಹೇಮಾವತಿ ಜಲಾಶಯದಿಂದ ಸಿಡಿದ ತುಂತುರು ಹನಿಗಳಲ್ಲಿ ಮಿಂದ ಯುವಕ ಯುವತಿಯರು
ಹೇಮಾವತಿ ಜಲಾಶಯದಿಂದ ಸಿಡಿದ ತುಂತುರು ಹನಿಗಳಲ್ಲಿ ಮಿಂದ ಯುವಕ ಯುವತಿಯರು
ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಡಾ ಸಾಲಿ ಮಂಜಪ್ಪ ವಸೂಲಿ ಮಂಜಪ್ಪನಾದ ವಿಡಿಯೋ!
ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಡಾ ಸಾಲಿ ಮಂಜಪ್ಪ ವಸೂಲಿ ಮಂಜಪ್ಪನಾದ ವಿಡಿಯೋ!
ಚಡ್ಡಿ ಗ್ಯಾಂಗ್ ಪ್ರತ್ಯಕ್ಷ; ಹಾಸನ ಜಿಲ್ಲೆಯ ನಿವಾಸಿಗಳಲ್ಲಿ ಹೆಚ್ಚಿದ ಆತಂಕ
ಚಡ್ಡಿ ಗ್ಯಾಂಗ್ ಪ್ರತ್ಯಕ್ಷ; ಹಾಸನ ಜಿಲ್ಲೆಯ ನಿವಾಸಿಗಳಲ್ಲಿ ಹೆಚ್ಚಿದ ಆತಂಕ
ರೀಲ್ಸ್​​ ಗೀಳು, ಡೇಂಜರ್ ಸ್ಟಂಟ್.. ಹಯಾತ್‌ನಗರದಲ್ಲಿ ಕಣ್ಣೆದುರೇ ಸತ್ತುಹೋದ
ರೀಲ್ಸ್​​ ಗೀಳು, ಡೇಂಜರ್ ಸ್ಟಂಟ್.. ಹಯಾತ್‌ನಗರದಲ್ಲಿ ಕಣ್ಣೆದುರೇ ಸತ್ತುಹೋದ