Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಗ ಪತ್ರಕರ್ತನಾದ! ಟಿವಿ ನೋಡಿ ಸಂಭ್ರಮಿಸುತ್ತಿರುವ ತಾಯಿ

TV Journalist : ತಾನು ಕೆಲಸ ಮಾಡುವ ಸ್ಥಳದಿಂದಲೇ ಟಿವಿ ಪರದೆಯಲ್ಲಿ ಮಗನನ್ನು ನೋಡಿ ಭಾವುಕಳಾಗಿದ್ದಾಳೆ ಈಕೆ. ಈ ತಾಯಿಯನ್ನು ಯಾರಾದರೂ ತಬ್ಬಿಕೊಳ್ಳಬಾರದೇ? ಎಂದು ನೆಟ್ಟಿಗರು ಈ ಅಭಿಮಾನದ ಕ್ಷಣಗಳಿಗೆ ಸ್ಪಂದಿಸುತ್ತಿದ್ದಾರೆ.

Viral Video: ಮಗ ಪತ್ರಕರ್ತನಾದ! ಟಿವಿ ನೋಡಿ ಸಂಭ್ರಮಿಸುತ್ತಿರುವ ತಾಯಿ
ಪತ್ರಕರ್ತ ಮಗನ ಹೆಮ್ಮೆಯ ಅಮ್ಮ
Follow us
ಶ್ರೀದೇವಿ ಕಳಸದ
|

Updated on: Jul 26, 2023 | 4:29 PM

Mother and Son : ಪ್ರತೀ ಪೋಷಕರಿಗೂ ತಮ್ಮ ಮಕ್ಕಳ ಯಶಸ್ಸನ್ನು ಕಣ್ಣಾರೆ ನೋಡಬೇಕು ಎನ್ನುವು ಕನಸು ಇದ್ದೇ ಇರುತ್ತದೆ. ಕೆಲವರಿಗೆ ಇದು ನನಸಾಗುತ್ತದೆ ಇನ್ನೂ ಕೆಲವರಿಗೆ ಕನಸಾಗಿಯೇ ಉಳಿಯುತ್ತದೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನನಸಿಗೆ ಸಂಬಂಧಿಸಿದ್ದು. ತನ್ನ ಮಗ ಪತ್ರಕರ್ತನಾಗಿ ಚರ್ಚೆಯೊಂದರಲ್ಲಿ ತೊಡಗಿಕೊಂಡಿದ್ದನ್ನು (TV Journalist) ತಾಯಿಯೊಬ್ಬಳು ಟಿವಿ ಪರದೆಯ ಮೇಲೆ ನೋಡಿ ಸಂಭ್ರಮಿಸಿದ್ದಾಳೆ, ಭಾವುಕಳಾಗಿದ್ದಾಳೆ. ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ಹೃದಯಸ್ಪರ್ಶಿಯಾದ ಈ ವಿಡಿಯೋ ನೆಟ್ಟಿಗರ ಮನಸ್ಸನ್ನು ಮೃದುವಾಗಿಸುತ್ತಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Good News Movement (@goodnews_movement)

ಇನ್‌ಸ್ಟಾಗ್ರಾಮ್​ನ ಗುಡ್ ನ್ಯೂಸ್ ಮೂವ್‌ಮೆಂಟ್‌ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. ಹೆಮ್ಮೆಯ ತಾಯಿ! ತನ್ನ ಮಗ ಟಿವಿ ಪತ್ರಕರ್ತನಾಗಿ ಪರದೆಯ ಮೇಲೆ ಚರ್ಚಿಸುವುದನ್ನು ನೋಡಿದ ಈಕೆ ಖುಷಿ ತಡೆದುಕೊಳ್ಳಲಾಗದೆ ತನ್ನ ಸಹೋದ್ಯೋಗಿಗಳ ಮುಂದೆ ಕಣ್ಣೀರಾಗಿದ್ದಾಳೆ’ ಎಂಬ ಒಕ್ಕಣೆ ಈ ವಿಡಿಯೋಗಿದೆ. ಯಾರಾದರೂ ಹೋಗಿ ಆಕೆಯನ್ನು ತಬ್ಬಿಕೊಳ್ಳಬಾರದೆ? ಎಂದಿದ್ದಾರೆ ನೆಟ್ಟಿಗರು. ಇದು ಮಗನದ್ದಷ್ಟೇ ಅಲ್ಲ ಇಂಥ ಮಗನನ್ನು ಬೆಳೆಸಿದ ತಾಯಿಯ ಸಾಧನೆಯೂ ಹೌದು ಎಂದಿದ್ದಾರೆ ಕೆಲವರು.

ಇದನ್ನೂ ಓದಿ : Viral: ‘ಮಾಂಸಾಹಾರ ಸಸ್ಯಾಹಾರಕ್ಕೆ ಒಂದೇ ಚಮಚ ಬಳಸಿದ್ದರೆ!’ ಸುಧಾ ಮೂರ್ತಿಯ ಮೇಲೆ ಮತ್ತೆ ಮುಗಿಬಿದ್ದ ನೆಟ್ಟಿಗರು

ಶ್ರಮಜೀವಿಯಾದ ತಾಯಿ ಮಗನನ್ನೂ ಶ್ರಮಜೀವನದೆಡೆ ಚಲಿಸುವಂತೆ ಮಾಡಿದ್ದಾಳೆ ಎಂದಿದ್ದಾರೆ ಒಬ್ಬರು. ಮಕ್ಕಳ ಉತ್ತಮ ಭವಿಷ್ಯಕ್ಕೆ ಅಪ್ಪ ಅಮ್ಮನ ಒಳ್ಳೆಯತನವೂ ಕಾರಣವಾಗುತ್ತದೆ ಎನ್ನುತ್ತದೆ ವಿಜ್ಞಾನ ಎಂದಿದ್ದಾರೆ ಇನ್ನೊಬ್ಬರು. ಈ ತಾಯಿಗೆ ಪನಾಮಾದಿಂದ ಅಭಿನಂದನೆ ಎಂದಿದ್ದಾರೆ ಮತ್ತೊಬ್ಬರು. ಆನಂದಭಾಷ್ಪ! ನಿಮ್ಮ ಕುಟುಂಬಕ್ಕೆ ದೇವರು ಒಳ್ಳೆಯದನ್ನು ಮಾಡಲಿ ಎಂದು ಹಾರೈಸಿದ್ದಾರೆ ಅನೇಕರು. ಈ ವಿಡಿಯೋ ಅನ್ನು 12 ಗಂಟೆಗಳ ಹಿಂದೆ ಹಂಚಿಕೊಳ್ಳಲಾಗಿದೆ. ಈತನಕ ಸುಮಾರು 22,000 ಜನರು ಲೈಕ್ ಮಾಡಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್