Viral: ಫೆಂಗಲ್‌ ಚಂಡಮಾರುತ; ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯನ್ನು ರಕ್ಷಿಸಿ ಮಾನವೀಯತೆ ಮೆರೆದ ವ್ಯಕ್ತಿ

| Updated By: ಅಕ್ಷಯ್​ ಪಲ್ಲಮಜಲು​​

Updated on: Dec 02, 2024 | 2:03 PM

ತಮಿಳುನಾಡು, ಪುದುಚೇರಿ ಕರಾವಳಿಗೆ ಅಪ್ಪಳಿಸಿರುವ ಫೆಂಗಲ್‌ ಚಂಡಮಾರುತದ ಪರಿಣಾಮವಾಗಿ ಆ ಭಾಗದಲ್ಲಿ ಸಾಕಷ್ಟು ಮಳೆಯಾಗಿದ್ದು, ಭಾರಿ ಅವಾಂತರವೇ ಸೃಷ್ಟಿಯಾಗಿದೆ. ಧಾರಾಕಾರ ಸುರಿದ ಮಳೆಗೆ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಇಲ್ಲೊಂದು ಶ್ವಾನ ಕೂಡಾ ಜಲ ದಿಗ್ಬಂಧನದ ನಡುವೆ ಸಿಕ್ಕಿ ಹಾಕಿಕೊಂಡಿದ್ದು, ತಕ್ಷಣ ರಕ್ಷಣೆಗೆ ಧಾವಿಸಿದ ವ್ಯಕ್ತಿಯೊಬ್ಬರು ನಾಯಿಯನ್ನು ಕಾಪಾಡಿದ್ದಾರೆ. ಈ ಕುರಿತ ಹೃದಯಸ್ಪರ್ಶಿ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

Viral: ಫೆಂಗಲ್‌ ಚಂಡಮಾರುತ; ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯನ್ನು ರಕ್ಷಿಸಿ ಮಾನವೀಯತೆ ಮೆರೆದ ವ್ಯಕ್ತಿ
ವೈರಲ್ ವಿಡಿಯೋ
Follow us on

ತಮಿಳುನಾಡು, ಪುದುಚೇರಿ ಕರಾವಳಿಗೆ ಅಪ್ಪಳಿಸಿ ಫೆಂಗಲ್‌ ಚಂಡಮಾರುತದ ಪರಿಣಾಮ ಭಾರೀ ಅನಾಹುತ ಸೃಷ್ಟಿಯಾಗಿದೆ. ಚಂಡಮಾರುತದ ಪರಿಣಾಮ ಚೆನ್ನೈ ನಗರ ಹಾಗೂ ತಮಿಳುನಾಡು ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಿದ್ದು, ಹಲವು ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಸಾಕಷ್ಟು ಪ್ರದೇಶಗಳು ಜಲಾವೃತವಾಗಿವೆ. ಇಲ್ಲೊಂದು ಕಡೆ ಒಂಟಿ ಶ್ವಾನವೊಂದು ಜಲ ದಿಗ್ಬಂಧನದಲ್ಲಿ ಸಿಲುಕಿದ್ದು, ವ್ಯಕ್ತಿಯೊಬ್ಬರು ಆ ಶ್ವಾನವನ್ನು ರಕ್ಷಣೆ ಮಾಡುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ. ಈ ಕುರಿತ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ಸಖತ್ ವೈರಲ್‌ ಆಗುತ್ತಿದೆ.

ಈ ಘಟನೆ ಪುದುಚೇರಿಯಲ್ಲಿ ನಡೆದಿದ್ದು, ವ್ಯಕ್ತಿಯೊಬ್ಬರು ಪ್ರವಾಹ ನೀರಿನಲ್ಲಿ ಸಿಲುಕಿದ್ದ ಒಂಟಿ ಶ್ವಾನವನ್ನು ರಕ್ಷಿಸುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ. ಫೆಂಗಲ್‌ ಚಂಡಮಾರುತದ ಪರಿಣಾಮ ಎಡೆಬಿಡದೆ ಸುರಿದ ಮಳೆಯಿಂದಾಗಿ ಪುದುಚೇರಿ ಸೇರಿದಂತೆ ತಮಿಳುನಾಡಿನ ಹಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಜೊತೆಗೆ ಪ್ರಾಣಿ ಪಕ್ಷಿಗಳು ಕೂಡಾ ಸಂಕಷ್ಟದಲ್ಲಿ ಸಿಲುಕಿವೆ. ಅದೇ ರೀತಿ ಇಲ್ಲೊಂದು ಶ್ವಾನ ಕೂಡಾ ಪ್ರವಾಹದ ನೀರಿನಲ್ಲಿ ಸಿಲುಕಿ ರಕ್ಷಣೆಗಾಗಿ ಒದ್ದಾಡುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಮುಗ್ಧ ಮನಸ್ಸಿನ ಜೀವವನ್ನು ಕಾಪಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ANI ಅಧೀಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಜಲದಿಗ್ಬಂಧನದಲ್ಲಿ ಸಿಲುಕಿ ರಕ್ಷಣೆಗಾಗಿ ಕಾದು ನಿಂತ ಒಂಟಿ ಶ್ವಾನವನ್ನು ವ್ಯಕ್ತಿಯೊಬ್ಬರು ರಕ್ಷಣೆ ಮಾಡಿದಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ:  ಲೆಹಂಗಾ, ಸೀರೆ ಬದಲು ವಧು ಬಿಕಿನಿ ತೊಟ್ಟು ಮದುವೆ ಮಂಟಪಕ್ಕೆ ಆಗಮಿಸಿದ್ದು ನಿಜಾನಾ? ಇಲ್ಲಿದೆ ಸತ್ಯಾಂಶ

ಡಿಸೆಂಬರ್‌ 1 ರಂದು ಹಂಚಿಕೊಳ್ಳಲಾದ ಈ ವಿಡಿಯೋ 38 ಸಾವಿರ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಶ್ಲಾಘನೀಯ ಕೆಲಸʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಆ ವ್ಯಕ್ತಿಯ ಮಾನವೀಯ ಕೆಲಸಕ್ಕೆ ನನ್ನದೊಂದು ಸಲಾಂʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ