Viral: ಬಾಳೆಗಿಡ ನೆಟ್ಟು ಪುತ್ತೂರು ರಸ್ತೆ ಗುಂಡಿ ಮುಚ್ಚಿದ ಜನ; ವಿಡಿಯೋ ವೈರಲ್‌

ಎಲ್ಲಿ ನೋಡಿದ್ರೂ ಈ ರಸ್ತೆ ಗುಂಡಿಗಳದ್ದೇ ಸಮಸ್ಯೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಂತೂ ಮೃತ್ಯು ಕೂಪದಂತಿರುವ ಗುಂಡಿಗಳನ್ನು ಸರಿಪಡಿಸುವ ಪ್ರಯತ್ನವನ್ನೇ ಮಾಡುವುದಿಲ್ಲ. ಇದೇ ಕಾರಣದಿಂದ ಜನರೇ ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುವ ಮೂಲಕ ರಸ್ತೆ ಗುಂಡಿ ಮುಚ್ಚಿಸುವ ಕಾರ್ಯವನ್ನು ಮಾಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಂದು ಕಡೆ ರಸ್ತೆ ಗುಂಡಿಯಲ್ಲಿ ಬಾಳೆ ಗಿಡ ನೆಡುವ ಮೂಲಕ ಜನರೇ ರಸ್ತೆ ಗುಂಡಿಯನ್ನು ಮುಚ್ಚಿದ್ದಾರೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗಿದೆ.

Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 13, 2024 | 11:37 AM

ಕಳಪೆ ಕಾಮಗಾರಿಯ ಕಾರಣದಿಂದ ಬಹುತೇಕ ಹೆಚ್ಚಿನ ಕಡೆಗಳಲ್ಲಿ ರಸ್ತೆ ಗುಂಡಿಗಳದ್ದೇ ಸಮಸ್ಯೆ. ಹದಗೆಟ್ಟ ರಸ್ತೆಗಳ ಕಾರಣದಿಂದ ಸಾವು, ನೋವುಗಳು ಸಂಭವಿಸಿದರೂ ಇದಕ್ಕೆ ಸಂಬಂಧಪಟ್ಟವರಂತೂ ರಸ್ತೆ ದುರಸ್ತಿ ಮಾಡುವ ಕಾರ್ಯಕ್ಕೆ ಕೈ ಕೂಡಾ ಹಾಕಲ್ಲ. ಇದರಿಂದ ರೋಸಿ ಹೋಗಿ ಜನರೇ ಈ ಗುಂಡಿಗಳಲ್ಲಿ ಗಿಡ ನೆಟ್ಟು, ಗುಂಡಿಗಳಲ್ಲಿ ಕುಳಿತು ಮೃತ್ಯುಕೂಪದಂತಿರುವ ರಸ್ತೆ ಗುಂಡಿಗಳನ್ನು ಸರಿ ಮಾಡುವಂತೆ ವಿನೂತನ ಮಾದರಿಯಲ್ಲಿ ಪ್ರತಿಭಟನೆಗಳನ್ನು ಮಾಡುತ್ತಿರುತ್ತಾರೆ. ಇಂತಹ ಘಟನೆಗಳನ್ನು ನೀವು ಕೂಡಾ ನೋಡಿರಬಹುದು. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಬಲಿಗಾಗಿ ಕಾದಿರುವ ರಸ್ತೆಗುಂಡಿಯಲ್ಲಿ ಬಾಳೆ ಗಿಡ ನೆಡುವ ಮೂಲಕ ಜನರೇ ರಸ್ತೆ ಗುಂಡಿಯನ್ನು ಮುಚ್ಚಿ ಆಕ್ರೋಶವನ್ನು ಹೊರಹಾಕಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗಿದೆ.

ಈ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಇಲ್ಲಿನ ವಿವೇಕಾನಂದ ಕಾಲೇಜು ಕ್ಯಾಂಪಸ್‌ ರಸ್ತೆಯಲ್ಲಿ, ರೋಡ್‌ ಮಧ್ಯದಲ್ಲಿ ಮೃತ್ಯು ಕೂಪದಂತಿದ್ದ ಹೊಂಡವನ್ನು ಸಂಬಂಧಪಟ್ಟ ಅದಿಕಾರಿಗಳು ಸರಿಪಡಿಸದೇ ಇದ್ದ ಕಾರಣ ಸ್ಥಳೀಯರು ಆ ಗುಂಡಿಯಲ್ಲಿ ಬಾಳೆ ಗಿಡ ನೆಟ್ಟು, ಗುಂಡಿಯನ್ನು ಸಂಪೂರ್ಣವಾಗಿ ಮುಚ್ಚಿ ಹಾಕಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಬಳಿಕ ಜೆಸಿಬಿ ಮೂಲಕ ಬಾಳೆ ಗಿಡವನ್ನು ತೆರವು ಗೊಳಿಸಿ ಅಲ್ಲಿಂದಲ್ಲಿಗೆ ಗುಂಡಿ ಮುಚ್ಚುವ ಕಾರ್ಯ ನಡೆದಿದೆ.

ಇದನ್ನೂ ಓದಿ: ಸೌದಿ ಅರೇಬಿಯಾದ ʼರಿಯಾದ್‌ ಮೆಟ್ರೋʼ ಓಡಿಸಲಿದ್ದಾರೆ ಹೈದರಾಬಾದ್‌ ಮಹಿಳೆ

ಹರೀಶ್‌ ಬಂಗೇರ (Harish Bangera) ಎಂಬವರು ಈ ಕುರಿತ ವಿಡಿಯೋವನ್ನು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ರಸ್ತೆಗುಂಡಿಯಲ್ಲಿ ಬಾಳೆ ಗಿಡ ನೆಟ್ಟಿದ್ದನ್ನು ಜೆಸಿಬಿ ಸಹಾಯದಿಂದ ತೆರವು ಗೊಳಿಸುತ್ತಿರುವಂತಹ ದೃಶ್ಯವನ್ನು ಕಾಣಬಹುದು. ರಸ್ತೆ ಗುಂಡಿಯಲ್ಲಿ ಗಿಡ ನೆಟ್ಟ ಸ್ಥಳೀಯರ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ಕೂಡಾ ವ್ಯಕ್ತವಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:23 pm, Tue, 12 November 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ