Viral Video:ಮುಂಗುಸಿ ಸೈನ್ಯದ ಭೀಕರ ದಾಳಿಯಿಂದ ತಪ್ಪಿಸಿಕೊಳ್ಳಲು ಹೆಬ್ಬಾವು ಪಟ್ಟ ಪಾಡು ನೋಡಿ

ಸೋಷಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ಪ್ರಾಣಿ ಸಾಮ್ರಾಜ್ಯಗಳಿಗೆ ಸಂಬಂಧಪಟ್ಟ ಕುತೂಹಲಕಾರಿ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲೂ ಈ ಪ್ರಾಣಿಗಳ ನಡುವಿನ ಕಾದಾಟದ ವಿಡಿಯೋ ದೃಶ್ಯಾವಳಿಗಳು ನೋಡಲು ತುಂಬಾನೇ ಭಯಾನಕವಾಗಿರುತ್ತವೆ. ಸದ್ಯ ಅದೇ ರೀತಿಯ ವಿಡಿಯೋವೊಂದು ವೈರಲ್ ಆಗಿದ್ದು, ಮುಂಗುಸಿ ಸೈನ್ಯದ ಭೀಕರ ದಾಳಿಯಿಂದ ತಪ್ಪಿಸಿಕೊಳ್ಳಲು ಮಧ್ಯಮ ಗಾತ್ರದ ಹೆಬ್ಬಾವೊಂದು ಹರ ಸಾಹಸವನ್ನೇ ಮಾಡಿದೆ.

Viral Video:ಮುಂಗುಸಿ ಸೈನ್ಯದ  ಭೀಕರ ದಾಳಿಯಿಂದ ತಪ್ಪಿಸಿಕೊಳ್ಳಲು ಹೆಬ್ಬಾವು ಪಟ್ಟ ಪಾಡು ನೋಡಿ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:May 01, 2024 | 11:32 AM

ಹಾವು ಮತ್ತು ಮುಂಗುಸಿ ಈ ಎರಡು ಪ್ರಾಣಿಗಳು ಎದುರುಬದುರಾದಾಗ ದೊಡ್ಡ ಯುದ್ಧವೇ ನಡೆದು ಹೋಗುತ್ತದೆ. ಹಾವಿನೊಂದಿಗಿನ ಕಾದಾಟದಲ್ಲಿ ಹೆಚ್ಚಿನ ಸಮಯ ಮುಂಗುಸಿಯದ್ದೇ ಮೇಲುಗೈ. ಕೆಲವೊಮ್ಮೆ ಹಾವುಗಳು ಸಹ ಮೇಲುಗೈ ಸಾಧಿಸುತ್ತದೆ. ಇಂತಹ ಹಾವು ಮುಂಗುಸಿಗಳ ಕಾದಾಟಗಳ ವಿಡಿಯೋಗಳು ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಸದ್ಯ ಅದೇ ರೀತಿಯ ಹಾವು ಮುಂಗುಸಿಗಳ ಭಯಾನಕ ಕಾದಾಟದ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಮುಂಗುಸಿ ಸೈನ್ಯದ ಭೀಕರ ದಾಳಿಯಿಂದ ತಪ್ಪಿಸಿಕೊಳ್ಳಲು ಮಧ್ಯಮ ಗಾತ್ರದ ಹೆಬ್ಬಾವೊಂದು ಹರ ಸಾಹಸವನ್ನೇ ಮಾಡಿದೆ.

ಈ ವಿಡಿಯೋವನ್ನು Latest Sightings ಎಂಬ ಹೆಸರಿನ ಯೂಟ್ಯೂಬ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದ್ದ, “ಹೆಬ್ಬಾವಿನ ಮೇಲೆ ದಾಳಿ ಮಾಡಿದ 20 ಹೆಚ್ಚು ಮುಂಗುಸಿಗಳು” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ಇದನ್ನೂ ಓದಿ: ಇನ್ಸ್ಟಾಗ್ರಾಮ್ ರೀಲ್ಸ್ ವಿಚಾರವಾಗಿ ನಡು ಬೀದಿಯಲ್ಲೇ ಹೆಣ್ಮಕ್ಕಳ ಬಿಗ್​​​ ಫೈಟ್​​; ವಿಡಿಯೋ ವೈರಲ್

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್ ವಿಡಿಯೋದಲ್ಲಿ ರೌದ್ರ ರೂಪದಲ್ಲಿದ್ದ 20 ಕ್ಕೂ ಹೆಚ್ಚು ಮುಂಗುಸಿಗಳು ಏಕಾಏಕಿ ಮಧ್ಯಮ ಗಾತ್ರದ ಹೆಬ್ಬಾವಿನ ಮೇಲೆ ದಾಳಿ ನಡೆಸುತ್ತದೆ. ಮುಂಗುಸಿಗಳ ದಾಳಿಗೆ ತುತ್ತಾದ ಹಾವು, ದೇವ್ರೆ ಈ ದಾಳಿಯಿಂದ ಹೇಗೆ ತಪ್ಪಿಸಿಕೊಳ್ಳೋದು ಎನ್ನುತ್ತಾ, ಹಾಗೋ ಹೀಗೋ ಪರದಾಡಿ ಮುಂಗುಸಿಗಳ ದಾಳಿಯಿಂದ ತಪ್ಪಿಸಿಕೊಂಡು ಹೋಗುವ ದೃಶ್ಯವನ್ನು ಕಾಣಬಹುದು. ಆರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 5 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಹಾವು ಮುಂಗುಸಿಗಳ ಭೀಕರ ಕಾಳಗವನ್ನು ಕಂಡು ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 6:17 pm, Tue, 30 April 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ