Viral Video: ಆರ್ಡರ್ ಫುಡ್ ಹೊತ್ತೊಯ್ಯುತ್ತಿದ್ದ ಡ್ರೋನ್ ಮತ್ತು ಕಾಗೆ ನಡುವೆ ಜಗಳ; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ವಿಡಿಯೋ

ಆರ್ಡರ್ ಫುಡ್​ನ ಹೊತ್ತು ತರುತ್ತಿದ್ದ ಡ್ರೋನ್ ಮತ್ತು ಕಾಗೆ ನಡುವೆ ಜಗಳವಾಗಿದೆ. ಇದು ಹೇಗೆ ಸಾಧ್ಯ ಅಂತ ಅನಿಸಬಹುದು. ಆದರೆ ಇದು ನಿಜ.

Viral Video: ಆರ್ಡರ್ ಫುಡ್ ಹೊತ್ತೊಯ್ಯುತ್ತಿದ್ದ ಡ್ರೋನ್ ಮತ್ತು ಕಾಗೆ ನಡುವೆ ಜಗಳ; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ವಿಡಿಯೋ
ಡ್ರೋನ್ ಮತ್ತು ಕಾಗೆ ನಡುವೆ ಜಗಳ
Follow us
TV9 Web
| Updated By: sandhya thejappa

Updated on: Sep 27, 2021 | 9:36 AM

ಸಾಮಾಜಿಕ ಜಾಲತಾಣದಲ್ಲಿ ದಿನನಿತ್ಯ ಹತ್ತಾರು ಫನ್ನಿ ವಿಡಿಯೋಗಳು ಹರಿದಾಡುತ್ತಲೆ ಇರುತ್ತವೆ. ಅಂತಹ ವಿಡಿಯೋಗಳು ಅಚ್ಚರಿಯನ್ನೂ ಮೂಡಿಸುತ್ತವೆ. ಸದ್ಯ ಸೋಶಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿರುವ ಫನ್ನಿ ವಿಡಿಯೋ ಅಂದರೆ ಆಸ್ಟ್ರೇಲಿಯಾದ ರಾಜಧಾನಿ ಕ್ಯಾನ್ಬೆರಾದಲ್ಲಿ ನಡೆದ ಘಟನೆ. ಆರ್ಡರ್ ಫುಡ್​ನ ಹೊತ್ತು ತರುತ್ತಿದ್ದ ಡ್ರೋನ್ ಮತ್ತು ಕಾಗೆ ನಡುವೆ ಜಗಳವಾಗಿದೆ. ಇದು ಹೇಗೆ ಸಾಧ್ಯ ಅಂತ ಅನಿಸಬಹುದು. ಆದರೆ ಇದು ನಿಜ. ಡ್ರೋನ್​ವೊಂದು ಆಹಾರವನ್ನ ಆರ್ಡರ್ ಮಾಡಿದ್ದ ಗ್ರಾಹಕನಿಕೆ ತಲುಪಿಸಲು ಹೋಗುತ್ತಿತ್ತು. ಆಗ ಹಾರಿಬಂದ ಕಾಗೆಯೊಂದು ಡ್ರೋನ್ ಕಂಡು ತನ್ನ ಮೂತಿಯಿಂದ ಕುಕ್ಕಿ, ಎಳೆದಾಡಿದೆ.

ಬೇಕೆನಿಸುವ ಫುಡ್​ಗಳನ್ನ ಮನೆಯಲ್ಲಿ ತಯಾರಿಸಿ ತಿನ್ನುವುದು ತಡವಾಗಬಹುದು. ಕೆಲಸ ಮುಗಿಸಿ ಮನೆಗೆ ಬಂದ ಕೂಡಲೇ ಸ್ವಲ್ಪ ರೆಸ್ಟ್ ಬೇಕು ಅಂತ ಅನಿಸುವುದು ಸಹಜ. ಆಗ ತಲೆಗೆ ತಕ್ಷಣ ಬರುವುದೇ ಫುಡ್ ಆರ್ಡರ್ ಮಾಡೋಣ ಅಂತ. ಹೀಗೆ ಆರ್ಡರ್ ಮಾಡಿದ್ದ ಫುಡ್​ನ ಆಸ್ಟ್ರೇಲಿಯಾದ ರಾಜಧಾನಿ ಕ್ಯಾನ್ಬೆರಾದಲ್ಲಿ ಡ್ರೋನ್ ಗ್ರಾಹಕನಿಗೆ ನೀಡಲು ಹೋಗುತ್ತಿತ್ತು. ಆಗ ಕಾಗೆಯೊಂದು ಬಂದು ಡ್ರೋನ್ ಜೊತೆ ಫೈಟ್ ಮಾಡಿದೆ. ಸದ್ಯ ಡ್ರೋನ್ ಮತ್ತು ಕಾಗೆ ನಡುವಿನ ಜಗಳ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗಾಳಿಯಲ್ಲಿ ಹಾರುವಾಗ ಡ್ರೋನ್​ಗೆ ಏನಾದರೂ ಅಡಚಣೆಯಾದರೆ ತಕ್ಷಣ ನೆಲಕ್ಕೆ ಬೀಳುವ ಸಾಧ್ಯತೆ ಹೆಚ್ಚಿರುತ್ತದೆ. ಆದರೆ ಕಾಗೆಯೊಂದಿಗೆ ಫೈಟ್ ಮಾಡಿದ ಡ್ರೋನ್ ಕೆಳಗೆ ಬೀಳುವುದಿಲ್ಲ. ತಾನು ಹೊತ್ತೊಯ್ಯುತ್ತಿದ್ದ ಆಹಾರ ಮಾತ್ರ ನೆಲಕ್ಕೆ ಬಿದ್ದಿದೆ. ಕಾಗೆ ಸ್ವಲ್ಪ ಹೊತ್ತು ಡ್ರೋನ್ ಜೊತೆ ಜಗಳವಾಡಿ ಮತ್ತೆ ಹಾರಿ ಹೋಗುತ್ತದೆ. ಕಾಗೆ ಹಾರಿ ಹೋದ ಕೆಲವೇ ಸೆಕೆಂಡುಗಳಲ್ಲಿ ಡ್ರೋನ್ ಬಳಿಯಿದ್ದ ಆಹಾರ ನೆಲಕ್ಕೆ ಬೀಳುತ್ತದೆ. ಈ ಎಲ್ಲ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಫುಡ್ ಆರ್ಡರ್ ಮಾಡಿದ್ದ ಬೆನ್ ರಾಬರ್ಟ್ಸ್ ಎಂಬುವವರು ಕಾಗೆ ಮತ್ತು ಡ್ರೋನ್ ನಡುವಿನ ಜಗಳವನ್ನು ನೋಡಿ, ಈ ಅಪರೂಪದ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಜೊತೆಗೆ ಈ ದೃಶ್ಯವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದಾರೆ.

ಇನ್ನು ಈ ವಿಡಿಯೋವನ್ನು ವೀಕ್ಷಿಸಿದ ಹಲವರು ಪ್ರತಿಕ್ರಿಯಿಸಿದ್ದಾರೆ. ಇದು ಕೆಲವರಿಗೆ ಅಚ್ಚರಿ ಅನಿಸಿದರೆ, ಇನ್ನು ಕೆಲವರಿಗೆ ಫನ್ನಿ ಅಂತ ಅನಿಸಿದೆ. ಮನುಷ್ಯರು ಡ್ರೋನ್ಗಳ ಮೂಲಕ ಪಕ್ಷಿಗಳಿಗೆ ತೊಂದರೆ ನೀಡುತ್ತಿದ್ದಾರೆ. ಪಕ್ಷಿಗಳಿಗೆ ಹಾರಲು ಜಾಗವನ್ನು ನೀಡುತ್ತಿಲ್ಲ ಅಂತ ಕಾಮೆಂಟ್ ಕೂಡಾ ಮಾಡಿದ್ದಾರೆ.

ಇದನ್ನೂ ಓದಿ

Viral Video: ಶಾಪಿಂಗ್​ಗೆಂದು 10 ನಿಮಿಷ ಜೀಪ್ ನಿಲ್ಲಿಸಿ ಹೋದ ವ್ಯಕ್ತಿ; ಮರಳಿದಾಗ ಎದುರುಗೊಂಡಿದ್ದು ಜೇನುನೊಣಗಳು!

Viral Video: ಎಲ್ಲೆಡೆ ಸಖತ್ ಸದ್ದು ಮಾಡ್ತಿದೆ ಈ ‘ದೇಸಿ ಮೈಕಲ್ ಜಾಕ್ಸನ್’ ನೃತ್ಯ; ವಿಡಿಯೊ ನೋಡಿ

(quarrel between crow and drone is viral on the Social Media)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ