AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್ ಅಂಬಾನಿ ನೀಡಿದ್ದ ಲವ್‌ ಲೆಟರನ್ನೇ ಪ್ರಿಂಟ್​​ ಮಾಡಿಸಿ ಗೌನ್‌ ಹೊಲಿಸಿದ ರಾಧಿಕಾ ಮರ್ಚೆಂಟ್

ಬಾಲ್ಯದ ಸ್ನೇಹಿತರಾಗಿದ್ದ ಅನಂತ್​ ಹಾಗೂ ರಾಧಿಕಾ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ಇದೀಗ ರಾಧಿಕಾ ತಮ್ಮ 2ನೇ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಅನಂತ್ ಅಂಬಾನಿ ನೀಡಿದ್ದ ಲವ್‌ ಲೆಟರನ್ನೇ ಪ್ರಿಂಟ್​​ ಮಾಡಿಸಿದ ಗೌನ್‌ ತೊಟ್ಟು ಮಿಂಚಿದ್ದಾರೆ. ಸದ್ಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ.

ಅನಂತ್ ಅಂಬಾನಿ ನೀಡಿದ್ದ ಲವ್‌ ಲೆಟರನ್ನೇ ಪ್ರಿಂಟ್​​ ಮಾಡಿಸಿ ಗೌನ್‌ ಹೊಲಿಸಿದ ರಾಧಿಕಾ ಮರ್ಚೆಂಟ್
ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್
ಅಕ್ಷತಾ ವರ್ಕಾಡಿ
|

Updated on:Jun 14, 2024 | 4:08 PM

Share

ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ 2ನೇ ಪ್ರೀ ವೆಡ್ಡಿಂಗ್ ಸಂಭ್ರಮ ಇತ್ತೀಚಿಗಷ್ಟೇ ಅದ್ಧೂರಿಯಾಗಿ ನಡೆದಿತ್ತು. ಈ ಸಮಾರಂಭದಲ್ಲಿ ರಾಧಿಕಾ ಮರ್ಚೆಂಟ್ ಒಂದು ವಿಶೇಷವಾದ ಗೌನ್​​ ತೊಟ್ಟಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ. ಬಾಲ್ಯದ ಸ್ನೇಹಿತರಾಗಿದ್ದ ಅನಂತ್​ ಹಾಗೂ ರಾಧಿಕಾ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ಅನಂತ್ ಅಂಬಾನಿ ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ್ದರು, ಈ ಎಲ್ಲಾ ಸಂದರ್ಭದಲ್ಲಿ ರಾಧಿಕಾ ಜೊತೆಯಾಗಿದ್ದರು. ಇದೀಗ ರಾಧಿಕಾ ತಮ್ಮ 2ನೇ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಅನಂತ್ ಅಂಬಾನಿ ನೀಡಿದ್ದ ಲವ್‌ ಲೆಟರನ್ನೇ ಪ್ರಿಂಟ್​​ ಮಾಡಿಸಿದ ಗೌನ್‌ ತೊಟ್ಟು ಮಿಂಚಿದ್ದಾರೆ.

ಸದ್ಯ ಈ ಕ್ಯೂಟ್​ ಜೋಡಿಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ವರದಿ ಪ್ರಕಾರ, ಅನಂತ್ ಮತ್ತು ರಾಧಿಕಾ ಬಾಲ್ಯದ ಸ್ನೇಹಿತರು. ಅವರ ಸಂಬಂಧವು 2018 ರಲ್ಲಿ ಬೆಳಕಿಗೆ ಬಂದಿತು.ಇಶಾ ಅಂಬಾನಿಯ ಮದುವೆಯಿಂದ ಹಿಡಿದು ಅಂಬಾನಿ ಕುಟುಂಬದ ಪ್ರತಿಯೊಂದು ವಿಶೇಷ ಸಮಾರಂಭಗಳಲ್ಲಿ ಭಾಗಿಯಾಗುತ್ತಿದ್ದ ರಾಧಿಕಾ ಮರ್ಚೆಂಟ್​​.

ಇದನ್ನೂ ಓದಿ: ಅಂಬಾನಿ ಕುಟುಂಬದ ಸದಸ್ಯರು ಕುಡಿಯುವ 1 ಲೀ. ಹಾಲಿನ ಬೆಲೆ 152 ರೂ. ;ಯಾಕಿಷ್ಟು ದುಬಾರಿ ಗೊತ್ತಾ?

2023ರ ಜನವರಿ 19ರಂದು ಅನಂತ್​​ ಅಂಬಾನಿ ಮತ್ತು ರಾಧಿಕ ಮರ್ಚೆಂಟ್​​ ಮುಂಬೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ಜೋಡಿಯ ಅದ್ಧೂರಿ ವಿವಾಹ ಕಾರ್ಯಕ್ರಮವು ಜುಲೈ 12 ರಂದು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (ಬಿಕೆಸಿ) ಜಿಯೋ ವರ್ಲ್ಡ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಹಿಂದೂ ಸಂಪ್ರದಾಯದಂತೆ ನಡೆಯಲಿದೆ ಎಂದು ವರದಿಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:03 pm, Fri, 14 June 24

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು