AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾಮನಬಿಲ್ಲಿನಂತಹ ಬಣ್ಣಬಣ್ಣದ ಪರ್ವತಗಳಿರುವ ದೇಶವಿದು; ವಿಡಿಯೋ ವೈರಲ್​

ಪೆರು ದೇಶದಲ್ಲಿರುವ ವರ್ಣರಂಜಿತ "ವಿನಿಕುಂಕಾ" ಅಥವಾ "ಏಳು ಬಣ್ಣಗಳ ಪರ್ವತ"ವು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಅದ್ಭುತ ಪರ್ವತವು ಆಂಡಿಸ್ ಪರ್ವತ ಶ್ರೇಣಿಯಲ್ಲಿದೆ ಮತ್ತು ಅದರ ವಿಶಿಷ್ಟ ಭೂವೈಜ್ಞಾನಿಕ ರಚನೆ ಮತ್ತು ಸೌಂದರ್ಯಕ್ಕೆ ಪ್ರಸಿದ್ಧವಾಗಿದೆ. ಪ್ರವಾಸಿಗರನ್ನು ಆಕರ್ಷಿಸುವ ಈ ಸ್ಥಳವು ಪೆರು ದೇಶಕ್ಕೆ ಪ್ರಮುಖ ಪ್ರವಾಸಿ ತಾಣವಾಗಿದೆ.

Viral Video: ಕಾಮನಬಿಲ್ಲಿನಂತಹ ಬಣ್ಣಬಣ್ಣದ ಪರ್ವತಗಳಿರುವ ದೇಶವಿದು; ವಿಡಿಯೋ ವೈರಲ್​
Rainbow Mountain Peru
ಅಕ್ಷತಾ ವರ್ಕಾಡಿ
|

Updated on:Dec 05, 2024 | 12:54 PM

Share

ಕಾಮನಬಿಲ್ಲಿನಂತಹ ಬಣ್ಣಬಣ್ಣಗಳಿಂದ ಕೂಡಿದ ಪರ್ವತಗಳ ಬಗ್ಗೆ ಕೇಳಿದ್ದೀರಾ? ದಕ್ಷಿಣ ಅಮೆರಿಕ ಖಂಡದ ಪಶ್ಚಿಮ ಭಾಗದಲ್ಲಿರುವ ಪೆರು ವಿಶ್ವದ ವರ್ಣರಂಜಿತ ಪರ್ವತಗಳನ್ನು ಹೊಂದಿರುವ ದೇಶವಾಗಿದೆ. ಇದೀಗ ಇಲ್ಲಿನ ಏಳು ಬಣ್ಣದ ಪರ್ವತಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಸ್ಥಳೀಯ ಜನರು “ವಿನಿಕುಂಕಾ” ಅಥವಾ “ಮೊಂಟಾನಾ ಡಿ ಸಿಯೆಟ್ ಕಲರ್ಸ್” (ಏಳು ಬಣ್ಣಗಳ ಪರ್ವತ) ಎಂದು ಕರೆಯುವ ಪೆರುವಿನಲ್ಲಿರುವ ರೇನ್ಬೋ ಪರ್ವತವು ಅದರ ವಿಶಿಷ್ಟ ಭೂವೈಜ್ಞಾನಿಕ ರಚನೆ ಮತ್ತು ವರ್ಣರಂಜಿತ ದೃಶ್ಯಕ್ಕಾಗಿ ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ. ಈ ಪರ್ವತವು ಆಂಡಿಸ್ ಪರ್ವತ ಶ್ರೇಣಿಯಲ್ಲಿದೆ, ಸುಮಾರು 5,200 ಮೀಟರ್ ಎತ್ತರದಲ್ಲಿದೆ ಮತ್ತು ಕುಜ್ಕೊ ನಗರದಿಂದ ಸುಮಾರು 100 ಕಿಲೋಮೀಟರ್ ದೂರದಲ್ಲಿದೆ.

ವಿಡಿಯೋ ಇಲ್ಲಿದೆ ನೋಡಿ:

ಸುಮಾರು ಕೋಟಿ ಜನಸಂಖ್ಯೆ ಹೊಂದಿರುವ ಈ ಪುಟ್ಟ ದೇಶದಲ್ಲಿ ಪ್ರತಿ ವರ್ಷ ಲಕ್ಷಗಟ್ಟಲೆ ಜನರು ಈ ಪರ್ವತಗಳನ್ನು ನೋಡಲು ಬರುತ್ತಾರೆ. ಕಳೆದ ಕೆಲವು ವರ್ಷಗಳಿಂದ, ರೈನ್ಬೋ ಪರ್ವತವು ಪೆರುವಿನಲ್ಲಿ ಪ್ರಮುಖ ಪ್ರವಾಸಿ ತಾಣವಾಗಿದೆ. ಪ್ರತಿ ವರ್ಷ ಸಾವಿರಾರು ಪ್ರವಾಸಿಗರು ಈ ಪರ್ವತಕ್ಕೆ ಭೇಟಿ ನೀಡುತ್ತಾರೆ. ಇಲ್ಲಿ ಟ್ರೆಕ್ಕಿಂಗ್ ಕಷ್ಟವಾಗಿದ್ದರೂ ಅದನ್ನು ನೋಡಿದ ಅನುಭವ ಅದ್ಭುತ.

ಇದನ್ನೂ ಓದಿ: ಇದೇ ಮೊದಲ ಬಾರಿಗೆ ಕತ್ತೆ ಹಾಲನ್ನು ಕುಡಿದು ಬಾಬಾ ರಾಮ್‌ದೇವ್‌ ಏನಂದ್ರು ನೋಡಿ…

ಪೆರು ಸಮ್ಮಿಟ್ ಅಡ್ವೆಂಚರ್ಸ್ ಹೆಸರಿನ ಯೂಟ್ಯೂಬ್ ಖಾತೆಯಿಂದ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಇಲ್ಲಿಯವರೆಗೆ 1 ಲಕ್ಷದ 68 ಸಾವಿರಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದುಕೊಂಡಿದೆ. ಸಾಮಾಜಿಕ ಜಾಲತಾಣದ ಬಳಕೆದಾರರು ಈ ವಿಡಿಯೋಗೆ ವಿವಿಧ ರೀತಿಯ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಒಬ್ಬ ಬಳಕೆದಾರರು “ವಾಹ್, ಇದು ಸ್ವರ್ಗದಂತಿದೆ” ಎಂದು ಹೇಳಿದರೆ ಮತ್ತೊಬ್ಬರು “ಭೂಮಿಯ ಮೇಲಿನ ಸ್ವರ್ಗ” ಎಂದು ಬರೆದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:54 pm, Thu, 5 December 24

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್