Viral Video: 13 ವರ್ಷದ ಅಪ್ರಾಪ್ತ ಬಾಲಕನನ್ನು ವಿವಾಹವಾದ ಯುವತಿ; ವೈರಲ್ ಆಯ್ತು ವಿಡಿಯೋ

ದೇಶದಲ್ಲಿ ಬಾಲ್ಯ ವಿವಾಹವನ್ನು ಕಾನೂನುಬದ್ಧವಾಗಿ ನಿಷೇಧಿಸಲಾಗಿದೆ. ಹೀಗಿದ್ದರೂ ಕೂಡಾ ಅಲ್ಲೊಂದು, ಇಲ್ಲೊಂದು ಕಡೆ ಬಾಲ್ಯ ವಿವಾಹದಪ್ರ ಕರಣಗಳು ಬೆಳಕಿಗೆ ಬರುತ್ತಿರುತ್ತವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬರು 12 ರಿಂದ 13 ವರ್ಷ ವಯಸ್ಸಿನ ಅಪ್ರಾಪ್ತ ಬಾಲಕನನ್ನು ಮದುವೆಯಾಗಿದ್ದಾರೆ. ಈ ಕುರಿತ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

Viral Video: 13 ವರ್ಷದ ಅಪ್ರಾಪ್ತ ಬಾಲಕನನ್ನು  ವಿವಾಹವಾದ ಯುವತಿ; ವೈರಲ್ ಆಯ್ತು ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: May 12, 2024 | 3:34 PM

ಮದುವೆ ಸೀಸನ್ ಶುರುವಾಗಿಬಿಟ್ಟಿದೆ. ಈಗಂತೂ ಎಲ್ಲಿ ನೋಡಿದ್ರೂ ಮದುವೆಗಳದ್ದೇ ಸುದ್ದಿ. ನಮ್ಮ ಭಾರತದಲ್ಲಿ ಮದುವೆಯಾಗಲೂ ವಯಸ್ಸಿನ ಮಿತಿ ಇದ್ದು, 18-21 ವರ್ಷ ತುಂಬದ ಹೊರತು ಯಾರೂ ಮದುವೆಯಾಗುವಂತಿಲ್ಲ. ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದಲ್ಲಿ ಬಾಲ್ಯ ವಿವಾಹ ಸಂಖ್ಯೆ ಕುಸಿತಗೊಂಡಿವೆಯಾದರೂ, ಐವರಲ್ಲಿ ಒಬ್ಬ ಹುಡುಗಿ ಮತ್ತು ಆರರಲ್ಲಿ ಓರ್ವ ಹುಡುಗ ಇನ್ನೂ ಕೂಡಾ ಬಾಲ್ಯ ವಿವಾಹಕ್ಕೆ ಒಳಗಾಗುತ್ತಿದ್ದಾರೆ ಎಂದು ವರದಿಗಳು ಹೇಳಿವೆ. ಇದಕ್ಕೆ ಸೂಕ್ತ ನಿದರ್ಶನವೆಂಬಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು, ಮಹಿಳೆಯೊಬ್ಬರು 12 ರಿಂದ 13 ವರ್ಷ ವಯಸ್ಸಿನ ಹುಡುಗನೊಂದಿಗೆ ವಿವಾಹವಾಗಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಈ ವಿಡಿಯೋವನ್ನು ದಿವ್ಯಾ (@divya_gandotra) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ರಾಜಸ್ಥಾನದ ಪೊಲೀಸ್ ಇಲಾಖೆಯನ್ನು ಟ್ಯಾಗ್ ಮಾಡಿ “ರಾಜಸ್ಥಾನದಲ್ಲಿ ಇನ್ನೂ ಬಾಲ್ಯವಿವಾಹಗಳು ಬಹಿರಂಗವಾಗಿ ನಡೆಯುತ್ತಿದೆ. ಈ ಸಮಸ್ಯೆಯನ್ನು ಪರಿಹರಿಸಲು ಯಾವ ಕ್ರಮ ತೆಗೆದುಕೊಳ್ಳುತ್ತೀರಾ?” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ಮತ್ತಷ್ಟು ಓದಿ: Video Viral: ಸೊಳ್ಳೆ ಬ್ಯಾಟ್​ ಬಳಸಿ ಬ್ರೆಡ್ ಟೋಸ್ಟ್‌ ಮಾಡಿದ ಮಹಿಳೆ; ವಿಡಿಯೋ ವೈರಲ್​

ವೈರಲ್ ವಿಡಿಯೋದಲ್ಲಿ ರಾಜಸ್ಥಾನದ ಊರಿನಲ್ಲೊಂದು ಮಹಿಳೆಯೊಬ್ಬರು 12-13 ವರ್ಷ ವಯಸ್ಸಿನ ಹುಡುಗನನ್ನು ಮದುವೆಯಾಗುತ್ತಿರುವ ದೃಶ್ಯವನ್ನು ಕಾಣಬಹುದು. ಮೊದಲಿಗೆ ಆ ಅಪ್ರಾಪ್ತ ಹುಡುಗ ವಧುವಿನ ಕೊರಳಿಗೆ ಹಾರವನ್ನು ಹಾಕುತ್ತಾನೆ. ನಂತರ ಆತ ಮಂಡಿಯೂರಿ ಕುಳಿತು ವಧುವಿನ ಕೈಯಿಂದ ತನ್ನ ಕೊರಳಿಗೆ ಹೂವಿನ ಹಾರವನ್ನು ಹಾಕಿಸಿಕೊಳ್ಳುವಂತಹ ದೃಶ್ಯವನ್ನು ಕಾಣಬಹುದು.

ಮೇ 09 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.5 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಹೆಚ್ಚಿನವರು ಈ ವಿಡಿಯೋ ಬರೀ ರೀಲ್ಸ್ ಗಾಗಿ ಮಾತ್ರ ಮಾಡಲಾಗಿದೆ ಎಂದು ಹೇಳಿದ್ದಾರೆ. ಇನ್ನೂ ಹಲವರು ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ