Video: ಗಾಳಿಪಟವನ್ನು ಹಿಂಬಾಲಿಸುತ್ತಾ ರಸ್ತೆಗೆ ಓಡಿ ಬಂದ ಬಾಲಕನಿಗೆ ಕಾರು ಡಿಕ್ಕಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಗಾಳಿಪಟವನ್ನು ಹಿಂಬಾಲಿಸುತ್ತಾ ರಸ್ತೆಗೆ ಓಡಿ ಬಂದ 7 ವರ್ಷದ ಬಾಲಕನಿಗೆ ಕಾರು ಡಿಕ್ಕಿ ಹೊಡೆದಿರುವ ಆಘಾತಕಾರಿ ಘಟನೆ ರಾಜಸ್ಥಾನದ ಸಿಕಾರ್‌ನಲ್ಲಿ ನಡೆದಿದೆ. ಅಪಘಾತದಲ್ಲಿ ಮಗುವಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಭೀಕರ ಅಪಘಾತ ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ರಾಜಸ್ಥಾನ: ಅತಿವೇಗವಾಗಿ ಬಂದ ಕಾರು 7 ವರ್ಷದ ಬಾಲಕನಿಗೆ ಡಿಕ್ಕಿ ಹೊಡೆದಿರುವ ಆಘಾತಕಾರಿ ಘಟನೆ ರಾಜಸ್ಥಾನದ ಸಿಕಾರ್‌ನಲ್ಲಿ ನಡೆದಿದೆ. ಈ ಭೀಕರ ಅಪಘಾತ ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದು ಮಗು ಸುಮಾರು 40ರಿಂದ 50 ಅಡಿ ದೂರಕ್ಕೆ ಎಸೆಯಲ್ಪಟ್ಟಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಗಾಳಿಪಟವನ್ನು ಹಿಂಬಾಲಿಸುತ್ತಾ ರಸ್ತೆಗೆ ಓಡಿ ಬಂದ ಬಾಲಕನಿಗೆ ಕಾರು ಡಿಕ್ಕಿಯಾಗಿರುವುದಾಗಿ ವರದಿಯಾಗಿದೆ. ಅಪಘಾತದಲ್ಲಿ ಬಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಶುಕ್ರವಾರ (ಡಿಸೆಂಬರ್ 6) ಲೊಸಾಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಸ್ತೆ ದಾಟಲು ಯತ್ನಿಸುತ್ತಿದ್ದ ಬಾಲಕ ಓಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಅದೃಷ್ಟವಶಾತ್, ಮಗುವಿಗೆ ಡಿಕ್ಕಿ ಹೊಡೆದ ನಂತರ ಕಾರು ಚಾಲಕ ಬ್ರೇಕ್ ಹಾಕಿದ್ದಾನೆ. ಬಳಿಕ ತನ್ನ ಕಾರಿನಲ್ಲೇ ಆಸ್ಪತ್ರೆಗೆ ಕರೆದ್ಯೊಯ್ದಿದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ: Viral Video: ತಿಂಗಳಿಗೆ 80,000 ರೂ. ಗಳಿಸುವ ಬೆಂಗಳೂರಿನ ಉಬರ್ ಬೈಕ್ ಚಾಲಕ; ವಿಡಿಯೋ ವೈರಲ್
ಬಾಲಕನನ್ನು ಸ್ಥಳೀಯ ಎಸ್‌ಕೆ ಆಸ್ಪತ್ರೆಗೆ ಕರೆದೊಯ್ದಲಾಗಿದೆ. ಬಳಿಕ ಅಲ್ಲಿಂದ ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಇದೀಗ ಬಾಲಕ ಎಸ್‌ಎಂಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಲೆ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.
ಮತ್ತಷ್ಟು ವೈರಲ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ